CHITRADURGA NEWS | 21 SEPTEMBER 2025
ಹಿರಿಯೂರು: ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಶನಿವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಎಂಡೊಸ್ಕೋಫಿ ಮತ್ತು ಕೊಲೋನೋಸ್ಕೋಪಿ ಸೇವೆ ಆರಂಭ
ಬ್ಯಾಡರಹಳ್ಳಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಆಸ್ಪತ್ರೆಯ ಸ್ವಚ್ಛತೆ ಹಾಗೂ ಸುವ್ಯವಸ್ಥೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಅವರು ಜಿಲ್ಲೆಯಲ್ಲಿ ಇರುವ ಆಯುಷ್ ವೈದ್ಯಾಧಿಕಾರಿಗಳ ಕೊರತೆ ಬಗ್ಗೆ ಸಚಿವರಿಗೆ ಮನದಟ್ಟು ಮಾಡಿಕೊಟ್ಟರು.
11 ಆಯುರ್ವೇದ ಚಿಕಿತ್ಸಾಲಯಗಳಲ್ಲಿ ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದು, ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಂಡಲ್ಲಿ ಆಯುಷ್ ಸೇವೆಗಳನ್ನು ಸಾರ್ವಜನಿಕರಿಗೆ ಇನ್ನೂ ಸಮರ್ಥವಾಗಿ ನೀಡಬಹುದು ಎಂದು ವಿವರಿಸಿದರು. ಸಚಿವರು ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ಇದನ್ನೂ ಓದಿ: ಬೇವಿನ ಎಲೆಗಳು ಕರುಳಿನ ಆರೋಗ್ಯಕ್ಕೆ ಪ್ರಯೋಜನಕಾರಿಯೇ?
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಆರ್. ಮಂಜುಳಾ, ಮುಖಂಡರಾದ ಖಾದಿ ಜೆ.ರಮೇಶ್, ಈರಲಿಂಗೇಗೌಡ, ಗುತ್ತಿಗೆದಾರ ಮಂಜುನಾಥ್, ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
