
CHITRADURGA NEWS | 14 OCTOBER 2025
ಹೊಳಲ್ಕೆರೆ: ವ್ಯರ್ಥವಾಗಿ ಹರಿದು ಹೋಗುವ ಮಳೆ ನೀರು ತಡೆಯಲು ಚೆಕ್ ಡ್ಯಾಂ ಗಳನ್ನು ಕಟ್ಟಿಸಿದ ಪರಿಣಾಮವಾಗಿ ಎಲ್ಲಾ ಕಡೆ ನೀರು ತುಂಬಿ ತುಳುಕುತ್ತಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆ | 25 ಜನರಿಗೆ 2 ದಿನ ತರಬೇತಿ

ಭರಮಸಾಗರ ಹೋಬಳಿ ಕೊಳಾಳ್ ಗ್ರಾಮದಲ್ಲಿ 1.25 ಕೋಟಿ ರೂ.ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ನೂತನ ಗ್ರಾಮ ಸೌಧ ಕಟ್ಟಡ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ವಿಶೇಷ ಕಾಳಜಿ ವಹಿಸಿ 25 ಲಕ್ಷ ರೂ.ಗಳನ್ನು ನೀಡಿದ್ದಾರೆ. ಕಲ್ಲೇಶ್ವರ, ಚೌಡೇಶ್ವರಿ ದೇವಸ್ಥಾನಗಳಿಗೂ ಹಣ ಕೊಟ್ಟಿದ್ದೇನೆ. ಎಲ್ಲಾ ಕಡೆ ಸಿಮೆಂಟ್ ರಸ್ತೆಗಳಾಗಿದೆ. ಭರಮಸಾಗರ ಕೆರೆಗೆ ಸೂಳೆಕೆರೆಯಿಂದ ನೀರು ಬರುತ್ತಿತ್ತು. ಅದಕ್ಕಾಗಿ ಓವರ್ ಟ್ಯಾಂಕ್ ಕೂಡ ನಿರ್ಮಾಣವಾಗಿದೆ.
ಐದು ಕೋಟಿ ರೂ.ವೆಚ್ಚದಲ್ಲಿ ದೊಡ್ಡ ಡ್ಯಾಂ ಕಟ್ಟಿಸಿದ ಪರಿಣಾಮವಾಗಿ ಕೊಳಾಳ್, ಕೊಳಾಳ್ ಗೊಲ್ಲರಹಟ್ಟಿ, ಅರಬಘಟ್ಟ, ಕರಿಯಮ್ಮನಹಳ್ಳಿ, ಹಳೆ ರಂಗಾಪುರ ಸೇರಿದಂತೆ 8-9 ಹಳ್ಳಿಗಳಲ್ಲಿ ಐವತ್ತು ಅಡಿಯಲ್ಲಿ ನೀರು ಸಿಗುತ್ತಿದೆ ಎಂದು ಆ ಭಾಗದ ರೈತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆಂದರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ | ಪ್ರತಿವಾದಿ ವಕೀಲರ ನೇಮಕಕ್ಕೆ ಅರ್ಜಿ
ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಯಲ್ಲಿದೆ. ಅಜ್ಜಪ್ಪನಹಳ್ಳಿ ಬಳಿ 250 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದೆ. ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ನನ್ನ ಅನುದಾನದಿಂದಲೂ ಹತ್ತು ಲಕ್ಷ ರೂ.ಗಳನ್ನು ನೀಡುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು.
ಸಂಸದ ಗೋವಿಂದ ಎಂ.ಕಾರಜೋಳ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ, ಉಪಾಧ್ಯಕ್ಷೆ ದೀಪಾ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಗ್ರಾಮ ಪಂಚಾಯಿತಿ ಸದಸ್ಯರುಗಳು ಸೇರಿದಂತೆ ಗ್ರಾಮಸ್ಥರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
