By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    12 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    13 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    13 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    20 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    12 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    48 minutes ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    56 minutes ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    2 days ago
Reading: ಜಿಲ್ಲಾಡಳಿತ 30 ಎಕರೆ ಜಮೀನು ನೀಡಿದರೆ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣ | MLC ಕೆ.ಎಸ್.ನವೀನ್ ಭರವಸೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲಾಡಳಿತ 30 ಎಕರೆ ಜಮೀನು ನೀಡಿದರೆ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣ | MLC ಕೆ.ಎಸ್.ನವೀನ್ ಭರವಸೆ

News Desk Chitradurga News
Last updated: 7 October 2025 19:32
News Desk Chitradurga News
8 months ago
Share
ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು.
SHARE

CHITRADURGA NEWS | 07 OCTOBER 2025

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮದಕರಿ ನಾಯಕರ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಕಳೆದ ಬಾರಿ ಕೇಂದ್ರ ಗೃಹ ಸಚಿವರು ಘೋಷಣೆ ಮಾಡಿದ್ದರು. ಜಿಲ್ಲಾಡಳಿತ 30 ಎಕರೆ ಜಾಗವನ್ನು ನೀಡಿದರೆ ಮದಕರಿ ನಾಯಕರ ಥೀಮ್ ಪಾರ್ಕ್ ಜೊತೆಗೆ ಬೃಹತ್ ವಾಲ್ಮೀಕಿ ಪ್ರತಿಮೆ ನಿರ್ಮಾಣ ಮಾಡಿ, ಪ್ರತಿಯೊಬ್ಬರಿಗೂ ಮದಕರಿ ನಾಯಕರ ಹಾಗೂ ವಾಲ್ಮೀಕಿಯ ಶ್ರೇಯವನ್ನು ಜಗತ್ತಿಗೆ ತಿಳಿಸುವ ಕಾರ್ಯಕ್ಕಾಗಿ ನಾವೆಲ್ಲರೂ ಶ್ರಮಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಭರವಸೆ ನೀಡಿದರು.

ಇದನ್ನೂ ಓದಿ: ವಾಲ್ಮೀಕಿ ಜಯಂತಿ | ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ಸಡಗರ-ಸಂಭ್ರಮದ ಭವ್ಯ ಮೆರವಣಿಗೆ

ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು.

ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ವಾಲ್ಮೀಕಿ ನಾಯಕ ಜನಸಂಖ್ಯೆ ಇರುವುದರಿಂದ ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಚಿತ್ರದುರ್ಗದಲ್ಲಿ ಆಚರಿಸುವಂತಾಗಬೇಕು ಎಂದು ಹೇಳಿದರು.

ರಾಮಾಯಣ ಮಹಾಕಾವ್ಯವು ತಂದೆ-ಮಗ, ಅಣ್ಣ ತಮ್ಮಂದಿರು, ಕುಟುಂಬ, ರಾಜ್ಯ, ಮಾದರಿ ಸಮಾಜ ನಿರ್ಮಾಣ ಹೇಗೆ ಆಗಬೇಕು ಎಂಬ ಕಲ್ಪನೆಯನ್ನು ಇಡೀ ಜಗತ್ತಿಗೆ ಕೊಟ್ಟವರು ವಾಲ್ಮೀಕಿ. ವಾಲ್ಮೀಕಿಯವರ ವಿಚಾರ, ಸಂದೇಶಗಳನ್ನು ಪ್ರಸ್ತುತ ಪ್ರತಿಯೊಬ್ಬರಿಗೂ ತಿಳಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಇಡೀ ವಿಶ್ವವೇ ಬಯಸುವ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ತತ್ವಜ್ಞಾನಿಯಾಗಿ ಮಾನವೀಯ ಮೌಲ್ಯಗಳ ಹರಿಕಾರನಾಗಿ ಕಾಣುತ್ತಾರೆ. ಇವರ ಜೀವನವೇ ಪ್ರಗತಿಯ ಹಾದಿಯಲ್ಲಿ ಹಾಗೂ ಅರಿವಿನ ಮಾರ್ಗದಲ್ಲಿ ಸಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಶೀಲ ಶಂಕಿಸಿ ಪತ್ನಿಯನ್ನೇ ಕೊಂದನಾ ಪತಿ !

ರಾಮಾಯಣ ಸರ್ವಕಾಲಕ್ಕೂ ಪೂಜ್ಯನೀಯ ಮಹಾಕಾವ್ಯ. ರತ್ನಾಕರನ ಬದುಕಿನಲ್ಲಿ ಮಹತ್ತರವಾದ ತಿರುವೆಂದರೆ ಬೇಟೆಯಿಂದಾಗುವ ಹಿಂಸೆ-ನೋವು-ವಿಷಾದ ಇವುಗಳಿಂದಾದ ಪರಿಣಾಮಗಳು ಅವರ ಮನಃಪರಿವರ್ತನೆಗೆ ಕಾರಣವಾದವು. ಶ್ರೀ ವಾಲ್ಮೀಕಿ ರಾಮಾಯಣದ ಪ್ರೇರಣೆಯಿಂದಾಗಿ ಇಂದು ಜಗತ್ತಿನಲ್ಲಿ 6,000 ರಾಮಾಯಣಗಳನ್ನು ರಚಿಸಲಾಗಿದೆ. ಅನೇಕ ಭಾರತೀಯ ಭಾಷೆಗಳಲ್ಲಿ ಹಾಗೂ ಜರ್ಮನಿ, ಇಟಲಿ, ಪ್ರೆಂಚ್, ಇಂಗ್ಲಿಷ್ ಇನ್ನೂ ಮೊದಲಾದ ಭಾಷೆಗಳಲ್ಲಿ ರಾಮಾಯಣಗಳು ರಚನೆಯಾಗಿವೆ ಎಂದು ಹೇಳಿದರು.

ಪುರಾಣ ಪುರುಷ ಬೇಡರ ಕಣ್ಣಪ್ಪನು ಶಿವನಿಗೆ ಕಣ್ಣುಗಳನ್ನು ನೀಡಿದ ಮಹಾನ್ ವ್ಯಕ್ತಿ. ತನ್ನ ಹೆಬ್ಬೆರಳನ್ನೇ ಗುರು ಕಾಣಿಕೆಯಾಗಿ ದ್ರೋಣಾಚಾರ್ಯನಿಗೆ ನೀಡಿದ ಅಮಾಯಕ ಬೇಡ ಯುವಕ ಏಕಲವ್ಯ, ಶ್ರೀರಾಮನಿಗಾಗಿ ಕಾದು ಕುಳಿತು ಹಣ್ಣುಗಳನ್ನು ನೀಡಿದ ಮುಗ್ದೆ ಶಬರಿ, ಅಷ್ಠೇ ಅಲ್ಲ ಭಾರತೀಯ ಸಾಂಸ್ಕೃತಿಕ ಪರಂಪರೆಗೆ ಬೇಡ ಜನಾಂಗದ ಕೊಡುಗೆ ಸ್ಮರಣೀಯ. 

ಮೌರ್ಯರ ಕಾಲದಿಂದ ಹಿಡಿದು ವಿಜಯನಗರ ಕಾಲದವರೆಗೆ ಬೇಡರು ರಕ್ಷಣಾಕಾರ್ಯ, ಅಧೀನಾಧಿಕಾರಿಗಳಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದರು. ಆದರೆ ಇವರ ನಿಷ್ಠೆಯನ್ನು ಪರಿಗಣಿಸಿ ಯಾವ ಸಾಮ್ರಾಟರು ಇವರನ್ನು ಪ್ರಾಂತ್ಯದ ಪಾಳೆಯಗಾರರನ್ನಾಗಿ ನೇಮಿಸುತ್ತಿರಲಿಲ್ಲ. ಬದಲಾಗಿ ಪರಿಶ್ರಮ ಮತ್ತು ಸ್ವಂತ ಬಲದಿಂದ ರೂಪುಗೊಂಡ ಪಾಳೆಯಗಾರನಿಗೆ ಮಾನ್ಯತೆ ನೀಡಿ ಕಪ್ಪು-ಕಾಣಿಕೆ ಪಡೆಯುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ: ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

ರಾಷ್ಟçಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿಕೊಂಡ ವಿಷಯವನ್ನು ಇತಿಹಾಸ ಹೇಳುತ್ತದೆ. ಇದು ಬೇಡರ ಚರಿತ್ರೆಯೇ ಆಗಿದೆ. ಚಿತ್ರದುರ್ಗ, ತರಿಕೆರೆ, ಸುರಪುರ ಉಮ್ಮತ್ತೂರು ಮುಂತಾದ ಪಾಳೆಯಗಾರರು ಅವರ ಅಧಿಕಾರಾವಧಿಯಲ್ಲಿ ಜನಪರವಾಗಿ ಮಾಡಿದ ಕೆಲಸ-ಕಾರ್ಯಗಳು, ಗುರುಮಠಗಳೊಂದಿಗಿದ್ದ ಅವಿನಾಭಾವ ಸಂಬಂಧದ ಬಗ್ಗೆ ದಾಖಲೆಗಳು ತಿಳಿಸುತ್ತವೆ. 

ಚಿತ್ರದುರ್ಗವನ್ನಾಳಿದ ಮತ್ತಿ ತಿಮ್ಮಣ್ಣನಾಯಕ, ಪ್ರಗತಿಪರ ದೊರೆ ಹಾಗೂ ಚಿತ್ರದುರ್ಗದಲ್ಲಿ ಮುರುಘಾಮಹಾಸ್ವಾಮಿಗಳನ್ನು ತನ್ನ ಭಕ್ತಿಯಿಂದ ನೆಲೆನಿಲ್ಲುವಂತೆ ಮಾಡಿದ ರಾಜಾಬಿಚ್ಚುಗತ್ತಿ ಭರಮಪ್ಪನಾಯಕ, ಹಿರೇಮದಕರಿನಾಯಕ, ದುರ್ಗ ಮರೆಯಲಾಗದ ರಾಜವೀರ ಮದಕರಿನಾಯಕ, ಕಂಪಿಲೆಯ ಕಂಪಿಲೆಯರಾಯ, ವಿಜಯನಗರದ ಎಚ್.ಎಂ.ನಾಯಕ, ಬ್ರಿಟೀಷರ ವಿರುದ್ಧ ಹೋರಾಡಿದ ಸುರಪುರದ ರಾಜ ವೆಂಕಟಪ್ಪನಾಯಕ, ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಸಿಂಧೂರ ಲಕ್ಷ್ಮಣ, ಹಲಗಲಿಯ ಬೇಡರು ಇವರೆಲ್ಲರೂ ಶಕ್ತಿ-ಭಕ್ತಿಗಳ ಸಂಗಮವಾಗಿದ್ದರು. 

ಬ್ರಿಟೀಷರು ತಂದ ಅರಣ್ಯ ಕಾಯ್ದೆಗಳು ಬೇಡರ ಜೀವನಾಧಾರವಾಗಿದ್ದ ಅರಣ್ಯದಿಂದಲೂ ಹೊರದೂಡಿತು. ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಹಲಗಲಿಯ ಬೇಡರು ದಕ್ಷಿಣ ಭಾರತದ ಮೊಟ್ಟ ಮೊದಲು ಸ್ವಾತಂತ್ರ್ಯ ಹೋರಾಟ ಆರಂಭಿಸಿದರು. ಸಿಂಧೂರ ಲಕ್ಷ್ಮಣನಂತವರ ಹೋರಾಟ ಇಂದಿಗೂ ಅಮರ ಎಂದು ಸಚಿವರು ಸ್ಮರಿಸಿದರು.

ಇದನ್ನೂ ಓದಿ: 87 ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ | ಕ್ರಿಯಾಯೋಜನೆ ಅನುಮೋದನೆ | ಡಿಸಿ

ಶ್ರೀ ಮಹರ್ಷಿ ವಾಲ್ಮೀಕಿಯು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ಸಾಮಾಜಿಕ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಇಡೀ ವಿಶ್ವಕ್ಕೆ ಬದಲಾವಣೆಯ ಮಾರ್ಗ ತೋರೋಣ ಎಂದು ಹೇಳಿದರು.

 ಚಳ್ಳಕೆರೆಯ ಕೋಟೆ ಬೋರಮ್ಮ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಓಬಣ್ಣ ಉಪನ್ಯಾಸ ನೀಡಿದರು.

 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮುದ್ದಾಪುರ ಹೊಸಹಟ್ಟಿಯ ಪಿ.ತಿಪ್ಪೇಸ್ವಾಮಿ, ಲಿಂಗವ್ವನಾಗ್ತಿಹಳ್ಳಿ ಎಂ.ತಿಪ್ಪೇಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನೌಕರ ಹಿರಿಯೂರು ತಾಲ್ಲೂಕಿನ ಗುಯಿಲಾಳು ಗ್ರಾಮದ ಹೆಚ್.ತಿಪ್ಪಯ್ಯ, ಚಿತ್ರದುರ್ಗ ನಗರಸಭೆಯ ಪ್ರಥಮ ಮಹಿಳಾ ಉಪಾಧ್ಯಕ್ಷೆಯಾಗಿದ್ದ ಎನ್.ಸುಮಾ, ಜೋಡಿಚಿಕ್ಕೇನಹಳ್ಳಿಯ ಗೊಲ್ಲರಹಟ್ಟಿಯ ಎ.ತಿಪ್ಪೇಸ್ವಾಮಿ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಶ್ರೇಣಿ ಪಡೆದ ಅಸೆಚನ ಪಿ ದಾಸರಿ ಹಾಗೂ ಹಿರಿಯೂರು ತಾಲ್ಲೂಕು ದೇವರಕೊಟ್ಟ ಏಕಲವ್ಯ ವಸತಿ ಶಾಲೆಗೆ ಪ್ರಥಮ ಶ್ರೇಣಿ ಪಡೆದ ಸಂಜೀವ್ ಮುತ್ತಯ್ಯ ಅವರಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗದು ಬಹುಮಾನ ನೀಡಲಾಯಿತು.

ಇದನ್ನೂ ಓದಿ: ಬಗರ್ ಹುಕುಂ ಭೂಮಿ ಸಮಸ್ಯೆ ಬಗೆಹರಿಸಿ, ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ನಾಯಕ ಸಮಾಜದ ಅಭಿವೃದ್ಧಿಗಾಗಿ 5 ಎಕರೆ ಜಮೀನು ಹಾಗೂ ವಾಲ್ಮೀಕಿ ಭವನಕ್ಕೆ ಮೂಲಸೌಕರ್ಯ ಒದಗಿಸುವ ಸಲುವಾಗಿ ರೂ.50 ಲಕ್ಷ ಅನುದಾನ ನೀಡುವಂತೆ ಚಿತ್ರದುರ್ಗ ಜಿಲ್ಲಾ ನಾಯಕ ಸಮಾಜದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್, ಉಪಾಧ್ಯಕ್ಷೆ ಶಕೀಲಾಭಾನು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಹೆಚ್.ದಿವಾಕರ್, ಮುಖಂಡರಾದ ಡಾ.ಗುಡ್ಡದೇಶ್ವರಪ್ಪ, ಸಿ.ಜಿ.ಶ್ರೀನಿವಾಸ್, ಓ.ಬಿ.ಬಸವರಾಜ್, ಮಂಜುನಾಥ್, ಸಂಪತ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsmadakari nayakaTheme ParkValmiki Jayantiಚಿತ್ರದುರ್ಗಚಿತ್ರದುರ್ಗ ನ್ಯೂಸ್ಥೀಮ್ ಪಾರ್ಕ್ಮದಕರಿ ನಾಯಕವಾಲ್ಮೀಕಿ ಜಯಂತಿ
Share This Article
Facebook Email Print
Previous Article ವಾಲ್ಮೀಕಿ ಜಯಂತಿ | ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ಸಡಗರ-ಸಂಭ್ರಮದ ಭವ್ಯ ಮೆರವಣಿಗೆ
Next Article ಸರ್ಕಾರದ ಸೌಲಭ್ಯ ಪಡೆದು ನಾಯಕ ಸಮಾಜ ಮುಖ್ಯವಾಹಿನಿಗೆ ಬರಲಿ | ಶಾಸಕ ಎಂ.ಚಂದ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
Dina Bhavishya
rose water
ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
Life Style
ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
ARECANUT RATE
ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up