
CHITRAUDRGA NEWS | 14 DECEMBER 2025
ಚಿತ್ರದುರ್ಗ: ನೊಂದಾಯಿತ ಕಟ್ಟಡ ಕಾರ್ಮಿಕರ ಸಾಕಷ್ಟು ಸಮಸ್ಯೆಗಳ ನಿವಾರಣೆಗಾಗಿ ಆಯೋಗ ಹಾಗೂ ಸೆಸ್ ವಸೂಲಿ ಪ್ರಾಧಿಕಾರ ರಚಿನೆಯಾಗಬೇಕು. ಇದಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವರು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಕಾರ್ಮಿಕ ಇಲಾಖೆ ಅಧಿಕಾರಿಗಳ ಕಚೇರಿ ಎದುರು ಕಳೆದ ಆರು ದಿನಗಳಿಂದಲೂ ಅನಿರ್ಧಿಷ್ಠಾವಧಿ ಧರಣಿ ನಡೆಸಿದರು.
ಇದನ್ನೂ ಓದಿ: ನಾಕೀಕೆರೆ ಕೋಡಿ ಆಲದ ಕೆಂಚಾಂಬಿಕಾ ದೇವಿ ಜಾತ್ರೆ
ಇಂದು ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ 1 ಲಕ್ಷ 56 ಸಾವಿರದ 188 ನೊಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ರಾಜ್ಯದಲ್ಲಿ 42 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ ಸರ್ಕಾರ ಕಾರ್ಮಿರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ.
ದಿನಾಂಕ : 18-1-2007 ರ ಪ್ರಕಾರ ಅತಿ ದೊಡ್ಡ ದೊಡ್ಡ ಕಾಮಗಾರಿಗಳ ಪರಿವೀಕ್ಷಣೆ ಮತ್ತು ಸುಂಕ ಸಂಗ್ರಹಣಾಧಿಕಾರಿಯೆಂದು ಕಾರ್ಮಿಕ ಆಯುಕ್ತರು, ಉಪ ಕಾರ್ಮಿಕ ಆಯುಕ್ತರು, ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದರೂ ಇದುವರೆವಿಗೂ ಯಾರು ತಮ್ಮ ಅಧಿಕಾರವನ್ನು ಚಲಾಯಿಸಿ ಕಟ್ಟಡ ಕಾರ್ಮಿಕರ ಕಷ್ಟಗಳನ್ನು ಆಲಿಸುತ್ತಿಲ್ಲ ಎಂದು ಆಪಾದಿಸಿದರು.
ಗುತ್ತಿಗೆದಾರರು, ನಿಯೋಜಕರು, ಮನೆ ಮಾಲಿಕರು ಕಾಮಗಾರಿ ಆರಂಭೊಂಡ ದಿನದಿಂದ ಮುಕ್ತಾಯಗೊಂಡರು ಯಾರು ಸೆಸ್ ಪಾವತಿಸಿಲ್ಲವೋ ಅಂತಹವರಿಗೆ ಶೇ. 2 ರಂತೆ ಬಡ್ಡಿ ವಿಧಿಸಬೇಕೆಂಬ ಕಾನೂನಿದ್ದರೂ ಪ್ರಯೋಜನವಿಲ್ಲದಂತಾಗಿದೆ.
ಇದನ್ನೂ ಓದಿ: MLC ಕೆ.ಎಸ್.ನವೀನ್ ಅವರ ಮಾವ ಕೆ.ಟಿ.ತಿಪ್ಪೇಸ್ವಾಮಿ ನಿಧನ
ಇದರಿಂದ ಸೆಸ್‍ನಿಂದ ತಪ್ಪಿಸಿಕೊಳ್ಳುತ್ತಿರುವವರು ನಿಜವಾದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಅನ್ಯಾಯವೆಸಗುತ್ತಿದ್ದಾರೆ. ಪಿಂಚಣಿ ಸಿಗುತ್ತಿಲ್ಲ. ಹಲವಾರು ಸೌಲಭ್ಯಗಳು ಕೈತಪ್ಪಿ ಹೋಗುತ್ತಿವೆ ಎಂದು ವೈ.ಕುಮಾರ್ ನೊಂದಾಯಿತ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಹೇಳಿಕೊಂಡರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಜೆ.ಮಂಜುನಾಥ್, ಡಿ.ಈಶ್ವರಪ್ಪ, ಆರ್.ಗೌಸ್‍ಪೀರ್, ನರಸಿಂಹಮೂರ್ತಿ, ಗೌಸ್‍ಖಾನ್, ರಫೀಕ್, ತಿಮ್ಮಯ್ಯ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
