ಮುಖ್ಯ ಸುದ್ದಿ
ಜಿಲ್ಲೆಯ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿ ಭಾಗ್ಯ | ಎಂ.ಕೆ.ತಾಜ್‍ಪೀರ್ | ಜಿ.ಎಸ್.ಮಂಜುನಾಥ್ | ಡಾ.ಬಿ.ಯೋಗೀಶ್‍ಬಾಬು | ಸವಿತಾ ರಘು ಅವರಿಗೆ ಮನ್ನಣೆ
CHITRADURGA NEWS | 29 FEBRUARY 2024
ಚಿತ್ರದುರ್ಗ: ಕೊನೆಗೂ ಪಕ್ಷಕ್ಕಾಗಿ ದುಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಧಿಕಾರ ಭಾಗ್ಯ ಸಿಕ್ಕಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಅಧಿಕಾರ ಘೋಷಣೆ ಮಾಡಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಉತ್ಸಾಹ ಹೆಚ್ಚಿಸಿದೆ.
ರಾಜ್ಯ ಸರ್ಕಾರ ಪ್ರಕಟಿಸಿರುವ ನಿಗಮ ಮಂಡಳಿಗಳಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಮುಖಂಡರಿಗೆ ನಿಗಮ ಮಂಡಳಿಯ ಅಧಿಕಾರಿ ಲಭಿಸಿದೆ.
ಇದನ್ನೂ ಓದಿ: ಮಾಜಿ ಡಿಸಿ ಶ್ರೀರಂಗಯ್ಯ ಬಿಜೆಪಿ ಟಿಕೇಟ್ ಆಕಾಂಕ್ಷಿ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಎಂ.ಕೆ.ತಾಜ್‍ಪೀರ್ ಅವರಿಗೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿದೆ.
ಇನ್ನೂ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಅಧ್ಯಕ್ಷರಾಗಿದ್ದ ಜಿ.ಎಸ್.ಮಂಜುನಾಥ್ ಅವರನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ.
ಇದನ್ನೂ ಓದಿ: ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಹೈಡ್ರಾಮ
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಹೊಳಲ್ಕೆರೆಯ ಸವಿತಾ ರಘು ಅವರಿಗೆ ಸಫಾಯಿ ಕರ್ಮಾಚಾರಿ ಆಯೋಗದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಜಿಪಂ ಮಾಜಿ ಸದಸ್ಯ, ಶ್ರೀರಾಮುಲು ವಿರುದ್ಧ ಮೊಳಕಾಲ್ಮೂರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ.ಬಿ.ಯೋಗೀಶ್ ಬಾಬು ಅವರಿರಗೆ ಕರ್ನಾಟಕ ದ್ರಾಕ್ಷರಸ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಈ ಹಿಂದೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಮುಂಡರಗಿ ನಾಗರಾಜ್ ಅವರಿಗೆ ಬಾಬು ಜಗಜೀವನ್‍ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಲಭಿಸಿದೆ.
ಇದನ್ನೂ ಓದಿ: ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಆಡಳಿತಕ್ಕೆ ಸಮತಿ ರಚಿಸಲು ಸುಪ್ರೀಂ ನಿರ್ದೇಶನ
ಈ ಹಿಂದೆ ಹಿರಿಯ ಶಾಸಕರಾಗಿದ್ದ ಬಿ.ಜಿ.ಗೋವಿಂದಪ್ಪ ಹಾಗೂ ಟಿ.ರಘುಮೂರ್ತಿ ಅವರಿಗೆ ನಿಗಮ ಮಂಡಳಿಗಳನ್ನು ನೀಡಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿತ್ತು.
ಈಗ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಿಗೆ ನಿಗಮ ಮಂಡಳಿ ಸ್ಥಾನ ಸಿಕ್ಕಿರುವುದು ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ.