ಟೋನಿ ಚಿತ್ರದುರ್ಗ | Updated on: Jun 04, 2024 | 06:48 AM
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ಮತದಾನ ನಡೆದಿದ್ದು, 39 ದಿನಗಳ ಸುದೀರ್ಘ ಕುತೂಹಲಕ್ಕೆ ತೆರೆಬೀಳಲಿದೆ. ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಬೆಳಿಗ್ಗೆ 7.30ಕ್ಕೆ ಭದ್ರತಾ ಕೊಠಡಿಗಳನ್ನು ಚುನಾವಣಾ ವೀಕ್ಷಕರ, ಅಭ್ಯರ್ಥಿಗಳ, ಪ್ರತಿನಿಧಿಗಳ ಸಮಕ್ಷಮದಲ್ಲಿ ತೆರೆಯಲಾಗುತ್ತದೆ. ಎಣಿಕೆ ಕಾರ್ಯವು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.
ಪ್ರತಿ ಕೌಂಟಿಂಗ್ ಹಾಲ್‍ನಲ್ಲಿ ಪ್ರತಿ ಟೇಬಲ್‌ಗೆ ಸಿಸಿ ಟಿವಿ ಕ್ಯಾಮೆರಾ ಅವಳಡಿಸಿ ಮಾನಿಟರಿಂಗ್ ಮಾಡಲಾಗುತ್ತಿದೆ. ಪ್ರತಿ ಸುತ್ತಿನ ಎಣಿಕೆ ಕಾರ್ಯ ಮುಕ್ತಾಯದ ನಂತರ ಚುನಾವಣಾ ವೀಕ್ಷಕರ ಗಮನಕ್ಕೆ ತಂದು ಅಂಕಿ ಅಂಶಗಳ ಕ್ರೂಢೀಕರಣಗೊಳಿಸಿ ಪ್ರಕಟಿಸಲಾಗತ್ತದೆ. ಅಂಚೆ ಮತಪತ್ರಗಳ ಎಣಿಕೆಯ ಜೊತೆಜೊತೆಗೆ ಇವಿಎಂ ಮತ ಎಣಿಕೆ ಕಾರ್ಯವೂ ನಡೆಯಲಿದೆ. ಮಧ್ಯಾಹ್ನ 12.30ರ ವೇಳೆಗೆ ಮತ ಎಣಿಕೆಯ ಸ್ಪಷ್ಟ ಚಿತ್ರಣ ದೊರೆಯಲಿದೆ.
ಪ್ರತಿ ಟೇಬಲ್‍ಗೆ ಎಣಿಕೆ ಮೈಕ್ರೋ ಅಬಸ್ಸರ್ವರ್, ಎಣಿಕೆ ಮೇಲ್ವಿಚಾರಕರು ಹಾಗೂ ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.ಮತ ಎಣಿಕೆ ಕಾರ್ಯಕ್ಕೆ 141 ಎಣಿಕೆ ಮೈಕ್ರೋ ಆಬಸ್ಸರ್ವರ್, 141 ಜನ ಎಣಿಕೆ ಮೇಲ್ವಿಚಾರಕರು ಹಾಗೂ 154 ಜನ ಎಣಿಕೆ ಸಹಾಯಕರು ಸಜ್ಜಾಗಿದ್ದಾರೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ 285 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ 260 ಮತಗಟ್ಟೆಗಳ ಎಣಿಕೆಯು 19 ಸುತ್ತುಗಳಲ್ಲಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 288 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಹಿರಿಯೂರು ವಿಧಾನಸಭಾ ಕ್ಷೇತ್ರದ 287 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಹೊಸದುರ್ಗ ವಿಧಾನಸಭಾ ಕ್ಷೇತ್ರದ 242 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ 299 ಮತಗಟ್ಟೆಗಳ ಎಣಿಕೆಯು 22 ಸುತ್ತುಗಳಲ್ಲಿ, ಶಿರಾ ವಿಧಾನಸಭಾ ಕ್ಷೇತ್ರದ 267 ಮತಗಟ್ಟೆಗಳ ಎಣಿಕೆಯು 20 ಸುತ್ತುಗಳಲ್ಲಿ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ ಪೂರ್ಣಗೊಳ್ಳಲಿದೆ.
ಕ್ಲಿಕ್ ಮಾಡಿ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ | ಮೌಲ್ವಿ ಬಂಧನ
ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ಮನೋಹರ್ ಮರಂಡಿ, ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಸ್ಪಿ ಧರ್ಮೆಂದ್ರ ಕುಮಾರ್ ಮೀನಾ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳನ್ನು ಅಲಂಕರಿಸಲಿದೆ ಎಂಬ ಕುತೂಹಲ ಮೂಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number