ಮುಖ್ಯ ಸುದ್ದಿ
ನಾಯಕನಹಟ್ಟಿ ಜಾತ್ರೆಗೆ ಕ್ಷಣಗಣನೆ | ಮಾ.16 ರಂದು ದೊಡ್ಡ ರಥೋತ್ಸವ
CHITRADURGA NEWS | 14 MARCH 2025
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.
Also Read: ಭಕ್ತ ಸಾಗರದ ನಡುವೆ ಸಾಗಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ | ಆಗಸದಲ್ಲಿ ಗರುಢ ಪ್ರದಕ್ಷಿಣೆ
ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗಿದೆ. ಜಾತ್ರೆ ಪ್ರಯುಕ್ತ ನಾಯಕನಹಟ್ಟಿ ಪಟ್ಟಣ ನೂತನ ವಧುವಿನಂತೆ ಸಿಂಗಾರಗೊಂಡಿದೆ.
ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಎರಡೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಗಿದೆ. ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ.
ಇದರ ಜೊತೆಗೆ ಹೊರಮಠ ದೇವಾಲಯದ ಆವರಣದ ಸುತ್ತಲೂ ಶಾಶ್ವತವಾಗಿ ನೆರಳಿನ ವ್ಯವಸ್ಥೆಗಾಗಿ ಶೆಡ್ ನಿರ್ಮಾಣ ಮಾಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
Also Read: 3ನೇ ತರಗತಿ ಬಾಲಕಿ ಮೇಲೆ 56 ವರ್ಷದ ವ್ಯಕ್ತಿಯಿಂದ ಅತ್ಯಾಚಾರ
ಬಿಸಿಲು ಹೆಚ್ಚಿರುವ ಕಾರಣ ಭಕ್ತಾಧಿಗಳಿಗೆ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕಂದಾಯ ಇಲಾಖೆಯಿಂದ ಸುಮಾರು 50 ಟ್ಯಾಂಕರ್ಗಳ ಮೂಲಕ ಹಾಗೂ 20 ಸಾವಿರ ಲೀಟರ್ ಸಾಮಥ್ರ್ಯದ 6 ಹಾಲಿನ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರಿಗೆ ವಿಶೇಷವಾದ ವ್ಯವಸ್ಥೆ ರೂಪಿಸಲಾಗಿದೆ.