Connect with us

ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಕರ ವಸೂಲಾತಿ ಮಾಡಿ PDO ಗಳಿಗೆ ಸನ್ಮಾನ

PDOs

ಮುಖ್ಯ ಸುದ್ದಿ

ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಕರ ವಸೂಲಾತಿ ಮಾಡಿ PDO ಗಳಿಗೆ ಸನ್ಮಾನ

CHITRADURGA NEWS | 01 JANUARY 2025

ಚಿತ್ರದುರ್ಗ: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗೆ ಸನ್ಮಾನಿಸಲಾಯಿತು.

ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

ಈ ವೇಳೆ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ಮಾತನಾಡಿ, ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ ಎಂದು ಹೇಳಿದರು.

ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ. ಹಾಗಾಗಿ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಉತ್ತಮ ಅನುಷ್ಠಾನಕ್ಕೆ ಈ ಹೊಸ ವರ್ಷದ ದಿನ ಕಟಿಬದ್ಧರಾಗಬೇಕು ಎಂದು ತಿಳಿಸಿದ ಅವರು, ಉತ್ತಮ ಕರ ವಸೂಲಿ ಮಾಡಿರುವ ಗ್ರಾಮ ಪಂಚಾಯಿತಿಳಂತೆ ಇತರೆ ಗ್ರಾಮ ಪಂಚಾಯಿತಿಗಳೂ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ತೆರಿಗೆಯಿಂದ ಸಂಗ್ರಹಿಸುವ ಆದಾಯವನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುವ ನೌಕರರ ಸಂಬಳ, ಗ್ರಾಮದ ಅಭಿವೃದ್ಧಿಗೆ ಮತ್ತು ಅಲ್ಲಿನ ನಿವಾಸಿಗಳ ಮೂಲಭೂತ ಸೇವೆ ಒದಗಿಸಲು ಬಳಸಲಾಗುತ್ತದೆ.

ಕ್ಲಿಕ್ ಮಾಡಿ ಓದಿ: ತೆಂಗಿನ ಮರ ಹತ್ತುವವರಿಗೆ ವಿಮಾ ಸೌಲಭ್ಯ

ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಸೂಚನೆಯಂತೆ ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಎಲ್ಲಾ ಸಿಬ್ಬಂದಿಗಳೂ ಕಳೆದ ಒಂದು ತಿಂಗಳಿಂದ ಅಭಿಯಾನದ ರೂಪದಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡಿದ್ದರಿಂದ ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ತಾಲ್ಲೂಕಿನ ರೂ. 12,44,11,412/-ಗಳ ಒಟ್ಟು ಬೇಡಿಕೆಯಲ್ಲಿ ರೂ.6,68,06,208/- ಕರ ವಸೂಲಿಯಾಗಿ ಡಿಸೆಂಬರ್ ಅಂತ್ಯಕ್ಕೆ ಶೇ.53.70 ಕರ ವಸೂಲಾತಿಯಾಗಿದೆ ಎಂದು ಹೇಳಿದರು.

ಜಿ.ಆರ್.ಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ್ ಮಾತನಾಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ದಿನಂಪ್ರತಿ ಜನರ ಮನವೊಲಿಸುವಿಕೆಯಿಂದ, ಅಲ್ಲದೆ ಗ್ರಾಮ ಪಂಚಾಯತಿಯ ಆಡಳಿತ ಸದಸ್ಯರ ಸಹಕಾರದಿಂದಾಗಿ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

ಇದೇ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ಅತಿ ಹೆಚ್ಚು ಕರ ವಸೂಲಿ ಮಾಡಿರುವ ಆಲಗಟ್ಟ (ಶೇ.82.98), ಇಂಗಳದಾಳ್(ಶೇ.87.29), ಜಿ.ಆರ್.ಹಳ್ಳಿ(ಶೇ.84.47) ಮತ್ತು ಮಾಡನಾಯಕನಹಳ್ಳಿ (ಶೇ.86.28) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಪ್ರಮುಖವಾಗಿ ಬಿಲ್ ಕಲೆಕ್ಟರ್‍ಗಳನ್ನು ಸನ್ಮಾನಿಸಲಾಯಿತು.

ಕ್ಲಿಕ್ ಮಾಡಿ ಓದಿ: ಪ್ರಯಾಣಿಕರ ಗಮನಕ್ಕೆ | ನಾಳೆಯಿಂದ ಚಿತ್ರದುರ್ಗ, ಚಿಕ್ಕಜಾಜೂರು ದಾವಣಗೆರೆ ನಡುವಿನ ರೈಲು ಸಂಚಾರದಲ್ಲಿ ಬದಲಾವಣೆ

ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ಕೆಂಚಪ್ಪ, ತಾಲ್ಲೂಕು ಯೋಜನಾಧಿಕಾರಿ ರಾಘವೇಂದ್ರ, ನರೇಗಾ ಮತ್ತು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಹೆಚ್.ಯರ್ರಿಸ್ವಾಮಿ ಮತ್ತು ರೂಪಾ ಕುಮಾರಿ, ವ್ಯವಸ್ಥಾಪಕ ಇರ್ಫಾನ್, ಪಿಡಿಒ ಮಹಾಲಕ್ಷ್ಮಿ, ನಾಸೀರ್, ಎಂಐಎಸ್ ಸಂಯೋಜಕ ಉಮೇಶ್, ಐಇಸಿ ಸಂಯೋಜಕ ಸತ್ಯನಾರಾಯಣ, ಚಿತ್ರದುರ್ಗ ತಾಲ್ಲೂಕಿನ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಸಹಾಯಕರು, ಬಿಲ್ ಕಲೆಕ್ಟರ್‍ಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version