CHITRADURGA NEWS | 29 JUNE 2026
ಚಿತ್ರದುರ್ಗ: ನಗರದ ಎಸ್.ಜೆ.ಎಂ. ಕಾನೂನು ಮಹಾವಿದ್ಯಾಲಯ ಕಾಲೇಜು ವತಿಯಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಕ್ರೀಡಾ ಜ್ಯೋತಿ ಬೆಳಸುವ ಮೂಲಕ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟಿಸಿದರು.
ಇದನ್ನೂ ಓದಿ: ಮೆಹೆಂದಿಗೆ ಶುಭ ಸಮಾರಂಭಗಳಲ್ಲಿ ಭಾರೀ ಬೇಡಿಕೆ | ಬಸವಕುಮಾರ ಶ್ರೀ
ನಂತರ ಮಾತನಾಡಿದ ಶ್ರೀಗಳು, ಜೀವನದಲ್ಲಿ ಅತ್ಯಂತ ಖುಷಿ ಕೊಡುವ, ಸಮಾಧಾನ ಮತ್ತು ಮನೋವಿಕಾರಗಳನ್ನು ತಡೆಗಟ್ಟುವ ಶಕ್ತಿ ಕ್ರೀಡೆಗೆ ಇದೆ ಎಂದು ತಿಳಿಸಿದರು.
ಕ್ರೀಡಾಪಟುಗಳಿಗೆ ಪ್ರತಿಜ್ಞಾನ ವಿಧಿಯನ್ನು ಲೆಸ್ಕ್ ಯೂನಿಯನ್ ಅಧ್ಯಕ್ಷ ಸಂದೀಪ್ ಬೋಧಿಸಿದರು. ಇದೇ ಸಂಧರ್ಭದಲ್ಲಿ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಕೆ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.
ಡಾ.ಬಸವಕುಮಾರ ಸ್ವಾಮೀಜಿ, ಎಸ್.ಜೆ.ಎಂ. ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.
ಇದನ್ನೂ ಓದಿ: ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ
ದೈಹಿಕ ನಿರ್ದೇಶಕರಾದ ಸುನಿತಾ ಪ್ರಾಸ್ತಾವಿಕ ನುಡಿಗಳನ್ನಾಡಿದುರ. ಸ್ಮಿತಾ ಸಹಾಯಕ ಪ್ರಾಧ್ಯಾಪಕರು ಸ್ವಾಗತಿಸಿದರು. ಮಹಾವಿದ್ಯಾಲಯದ ಬೋಧನಾ ವರ್ಗದವರಾದ ಟಿ. ಎಸ್.ಗಿರೀಶ್, ಎಂ.ರಮೇಶ್, ಕರಕಪ್ಪ ಮೇಟಿ, ಎಚ್.ಮಧು, ಎಂ.ಮಧು, ರೂಪ, ಅಂಬಿಕಾ ಹಾಗೂ ಬೋಧಕೇತರ ವರ್ಗದವರಾದ ವೀರಯ್ಯಾ ಹಿರೇಮಠ, ಅಶೋಕ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಕ್ರೀಡಾಪಟುಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
