
CHITRADURGA NEWS | 16 AUGUST 2024
ಚಿತ್ರದುರ್ಗ: ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿ ಬಂದಿರುವ ಘಟನೆ ದಾವಣಗೆರೆಯ ವಿದ್ಯಾನಗರದ ಸ್ವಾಮಿವಿವೇಕಾನಂದ ಬಡಾವಣೆಯಲ್ಲಿ ನಡೆದಿದೆ.
ಸುಮಲತಾ (30) ಮೃತ ಗೃಹಿಣಿ. ಪತಿ ಶಿವಮೂರ್ತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದ ದಂಪತಿ 11 ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು.
ಕ್ಲಿಕ್ ಮಾಡಿ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಡಿಕ್ಕಿ | ವ್ಯಕ್ತಿ ಮೃತ

ಸುಮಲತಾ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ. ಅವರನ್ನು ಥಳಿಸಿ ಕೊಲೆ ಮಾಡಲಾಗಿದೆ. ಅವರ ದೇಹದ ಮೇಲೆ ಗಾಯಗಳು ಕಂಡುಬಂದಿವೆ. ಪತಿ ಶಿವಮೂರ್ತಿ ಹಾಗೂ ಅವರ ಮೊದಲ ಹೆಂಡತಿಯ ಮಕ್ಕಳು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಮೃತ ಸುಮಲತಾ ಅವರ ತಂದೆ ದೂರು ನೀಡಿದ್ದಾರೆ.
ವಿದ್ಯಾನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
