
ಚಿತ್ರದುರ್ಗ ನ್ಯೂಸ್.ಕಾಂ
ಚಲಿಸುತ್ತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಎರಡು ವಾಹನಗಳು ಜಖಂ ಆದ ಘಟನೆ ಮಂಗಳವಾರ ತಡರಾತ್ರಿ ಗುಯಿಲಾಳು ಟೋಲ್ ಬಳಿ ನಡೆದಿದೆ.
ಬೆಂಗಳೂರಿನಿಂದ ಲಿಂಗಸೂರಿನ ಬಂಗಾರದ ಹಟ್ಟಿಗೆ ತುಮಕೂರು-ಶಿರಾ-ಹಿರಿಯೂರ ಮಾರ್ಗವಾಗಿ ಚಿತ್ರದುರ್ಗದ ಕಡೆಗೆ ಬರುವಾಗ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಎರಡು ವಾಹನಗಳು ಜಖಂ ಆಗಿವೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲ್ಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ನಿವಾಸಿ ಹರೀಶ ಮೂಲತಃ ಬಸ್ ಕಂಡಕ್ಟರ್. ಆದರೆ ಈತ ಬೆಂಗಳೂರಿನಿಂದ ಬಸ್ ಅನ್ನು ಚಾಲನೆ ಮಾಡಿಕೊಂಡು ಲಿಂಗಸೂರಿಗೆ ಸಾಗುತ್ತಿದ್ದ. ಅತಿವೇಗ ಹಾಗೂ ಅಜಾಗೂರಕತೆಯಿಂದ ಬಸ್ ಚಾಲನೆ ಮಾಡಿದ್ದೇ ಘಟನೆ ಕಾರಣ ಎನ್ನಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಸ್ಪರ್ಶಿಸಿ ಯುವಕ ಸಾವು: ಹೈ ಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹೊಸದುರ್ಗ ತಾಲ್ಲೂಕಿನ ಜಾನಕಲ್ ಲಂಬಾಣಿಹಟ್ಟಿ ಸಮೀಪದ ಅಡಿಕೆ ತೋಟದಲ್ಲಿ ಮಂಗಳವಾರ ನಡೆದಿದೆ.
ದೇವಪುರ ಭೋವಿಹಟ್ಟಿ ಗ್ರಾಮದ ಮನೋಜ್ ಕುಮಾರ್ (22) ಮೃತ ವ್ಯಕ್ತಿ. ತೋಟವೊಂದರಲ್ಲಿ ಅಡಿಕೆ ಗೊನೆ ಇಳಿಸುತ್ತಿದ್ದ ಸಂದರ್ಭದಲ್ಲಿ, ಹೈ ಟೆನ್ಷನ್ ವಿದ್ಯುತ್ ತಂತಿಗೆ ಉದ್ದನೆಯ ಕೋಲು ಆಕಸ್ಮಿಕವಾಗಿ ತಗುಲಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸವಾರ ಸಾವು: ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಗೌರಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೂರು ಗ್ರಾಮದ ಈ.ತ್ಯಾಗರಾಜ (18) ಮೃತ ವ್ಯಕ್ತಿ. ಕುರಿಗಳ ಉಣ್ಣೆ ಕತ್ತರಿಸಲು ಬಂದಿದ್ದ ವ್ಯಕ್ತಿಯನ್ನು ಮಲ್ಲಸಮುದ್ರ ಗ್ರಾಮಕ್ಕೆ ಬಿಟ್ಟು ವಾಪಸಾಗುವಾಗ ವಾಹನ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರು ಅಸುನೀಗಿದ್ದಾರೆ. ತಳಕು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
