
CHITRADURGA NEWS | 17 SEPTEMBER 2025
ಚಿತ್ರದುರ್ಗ: ಸೆಪ್ಟಂಬರ್ 13 ರಂದು ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ 6 ಡಿಜೆಗಳ ಮಾಲಿಕರು ಹಾಗೂ ಡಿಜೆ ಅಳವಡಿಸಿದ್ದ ವಾಹನಗಳ ಮಾಲಿಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿದೆ.
ಶೋಭಾಯಾತ್ರೆ ವೇಳೆ ಸೆಕ್ಟರ್ ಅಧಿಕಾರಿಯಾಗಿದ್ದ ಚಿತ್ರದುರ್ಗ ತಹಶೀಲ್ದಾರ್ ನೀಡಿದ ದೂರು ಆಧರಿಸಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಡಿಜೆಗಳ ಮಾಲಿಕರು ಹಾಗೂ ವಾಹನಗಳ ಮಾಲಿಕರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹಿಂದೂ ಮಹಾಗಣಪನಿಗೆ ಅದ್ದೂರಿ ವಿದಾಯ | ರಾತ್ರಿ 11.50ಕ್ಕೆ ವಿಸರ್ಜನೆ
ಸೆ.13 ರಂದು ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿಂದೂ ಮಹಾಗಣಪತಿ ಉತ್ಸವ ಸಮಿತಿಯವರೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಭೆ ನಡೆಸಿ ಹೆಚ್ಚಿನ ಶಬ್ದ ಹೊರಸೂಸುವ ಡಿಜೆ ಬಳಸಬಾರದು ಎಂದು ಸೂಚನೆ ನೀಡಲಾಗಿತ್ತು.
ಸರ್ವೋಚ್ಛ ನ್ಯಾಯಾಲಯ ನಿಗಧಿ ಮಾಡಿರುವ ಡೆಸಿಬಲ್ ಮೀರಬಾರದು ಎಂದು ಜಿಲ್ಲಾಧಿಕಾರಿಗಳು ಸೆ.1 ರಿಂದ ಸೆ.15 ರವರೆಗೆ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳಲ್ಲಿ ಡಿಜೆ ಬಳಸದಂತೆ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಅದ್ದೂರಿ ಚಾಲನೆ | ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಣಪ
ಮೇಲ್ಕಂಡ ಎಲ್ಲಾ ನಿಯಮ, ಷರತ್ತುಗಳನ್ನು ಉಲ್ಲಂಘಿಸಿ ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೆ ಶೋಭಾಯಾತ್ರೆಯಲ್ಲಿ ನಿಯಮ ಬಾಹಿರವಾಗಿ ಹೆಚ್ಚು ಶಬ್ದ ಹೊರಸೂಸುವ ಡಿ.ಜೆಗಳನ್ನು ಬಳಕೆ ಮಾಡಿ ಸಾರ್ವಜನಿಕರ ಶಾಂತಿ, ನೆಮ್ಮದಿಗೆ ಕಿರಿಕಿರಿ ಮತ್ತು ಉಪದ್ರವ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
