ಮುಖ್ಯ ಸುದ್ದಿ
criminal case: ಪಿಡಿಒ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆದೇಶ | ಹಣ ದುರುಪಯೋಗ ಆರೋಪ
CHITRADURGA NEWS | 07 SEPTEMBER 2024
ಚಿತ್ರದುರ್ಗ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಣ ದುರುಪಯೋಗ ಮಾಡಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕ್ರಿಮಿನಲ್ ಮೊಕದ್ದಮೆಗೆ ಆದೇಶಿಸಿದ್ದಾರೆ.
ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ ಎಸ್.ಬಸವರಾಜು ಹಾಗೂ ಕಾರ್ಯದರ್ಶಿ ಕೆ.ತಿಪ್ಪೇಸ್ವಾಮಿ ಮೇಲೆ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ. ಆದ್ದರಿಂದ ಇವರಿಬ್ಬ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ 7 ದಿನಗಳ ಒಳಗೆ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ರಸ್ತೆ ಬದಿಯಲ್ಲಿ ಮಗು ಪತ್ತೆ | ಮಾನವೀಯತೆ ಮೆರೆದ ಪೊಲೀಸರು
ರಾಷ್ಟ್ರೀಯ ಹೆದ್ದಾರಿ– 150 ‘ಎ’ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಯರಬಳ್ಳಿ ಎ.ಕೆ. ಕಾಲೊನಿಯ ಅಂಗನವಾಡಿ ಕಟ್ಟಡ ತೆರವುಗೊಳಿಸಲಾಗಿತ್ತು. ಇದಕ್ಕೆ ಸೂಕ್ತ ಪರಿಹಾರವನ್ನೂ ನೀಡಲಾಗಿತ್ತು. ಪಿಡಿಒ ಅವರು ಕಾನೂನು ಉಲ್ಲಂಘಿಸಿ ಪರಿಹಾರ ಹಣ ದುರುಪಯೋಗ ಪಡಿಸಿಕೊಂಡಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಕಂದಿಕೆರೆ ಜಗದೀಶ್ ಮನವಿ ಮಾಡಿದ್ದರು.
ಕ್ಲಿಕ್ ಮಾಡಿ ಓದಿ: ದಶಾವತಾರ ಮಂಟಪದಲ್ಲಿ ಹಿಂದೂ ಮಹಾ ಗಣಪತಿ ವಿರಾಜಮಾನ
ಅಧಿಕಾರಿಗಳು ತನಿಖೆ ಕೈಗೊಂಡಾಗ ಪಿಡಿಒ ಅವರು ಕರ್ತವ್ಯ ಲೋಪ ಎಸಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಗದೀಶ್ ಅವರು ಮನವಿ ಮಾಡಿದ್ದರಿಂದ ಜಿಲ್ಲಾಧಿಕಾರಿ ಅವರು ಈ ಆದೇಶ ಹೊರಡಿಸಿದ್ದಾರೆ.