ಮುಖ್ಯ ಸುದ್ದಿ
ಬೆಳೆ ವಿಮೆ ತಿರಸ್ಕೃತ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಮಾರ್ಚ್ 4 ಕೊನೆ ದಿನ

CHITRADURGA NEWS | 18 FEBRUARY 2025
ಚಿತ್ರದುರ್ಗ: 2023-24 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೊಂದಣಿ ಮಾಡಿಕೊಂಡ ರೈತರ ತಿರಸ್ಕೃತ ಪಟ್ಟಿ ಪ್ರಕಟ ಮಾಡಲಾಗಿದೆ.
Also Read: 34 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳ ಬಂಧನ | ಸೈಬರ್ ಪೊಲೀಸ್ ಕಾರ್ಯಚರಣೆ
ರೈತರ ಪ್ರಸ್ತಾವನೆಗಳನ್ನು ಬೆಳೆ ಸಮಿಕ್ಷೆ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿದಾಗ ಮುಂಗಾರು ಹಂಗಾಮಿನಲ್ಲಿ 478 ಹಾಗೂ ಹಿಂಗಾರು ಹಂಗಾಮಿನಲ್ಲಿ 31 ಸೇರಿ ಒಟ್ಟು 509 ರೈತರ ಬೆಳೆ ವಿಮೆ ಪ್ರಸ್ತಾವನೆಗಳು ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡಿವೆ.
ಈ ಪಟ್ಟಿಗಳನ್ನು ಎಲ್ಲ ರೈತರ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕಚೇರಿ ನೋಟಿಸ್ ಬೋರ್ಡ್ಗಳಲ್ಲಿ ಪ್ರಕಟಿಸಲಾಗಿದೆ.
ರೈತರು ಬೆಳೆ ನಮೂದಿಸಿರುವ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದ ರಶೀದಿ, ನೊಂದಾಯಿತ ಬೆಳೆಯನ್ನು ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಲ್ಲಿ ಸಂಬಂದಪಟ್ಟ ದಾಖಲೆ ಹಾಗೂ ಆಧಾರ್ ಕಾರ್ಡುಗಳೊಂದಿಗೆ ಮಾರ್ಚ್ 4 ಒಳಗಾಗಿ ಆಕ್ಷೇಪಣೆ ಸಲ್ಲಿಸಬಹುದು.
Also Read: ಮಾರ್ಚ್ 16 | ನಾಯಕನಹಟ್ಟಿ ಜಾತ್ರೆ | ಅಗತ್ಯ ಸಿದ್ಧತೆಗೆ ಸಚಿವ ಸುಧಾಕರ್ ಸೂಚನೆ
ಇಲ್ಲವಾದಲ್ಲಿ ಬೆಳೆ ವಿಮೆ ಪ್ರಸ್ತಾವನೆಗಳನ್ನು ತಿರಸ್ಕೃತಗೊಳಿಸಲಾಗುವುದು ಎಂದು ಚಿತ್ರದುರ್ಗ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ.ಹೆಚ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
