ಮುಖ್ಯ ಸುದ್ದಿ
ಫಸಲ್ ವಿಮಾ ಯೋಜನೆ | ಅಧಿಕಾರಿಗಳ ಯಡವಟ್ಟು , ರೊಚ್ಚಿಗೆದ್ದ ರೈತರು

CHITRADURGA NEWS | 29 April 2024
ಚಿತ್ರದುರ್ಗ : ಚಳ್ಳಕೆರೆ ತಾಲ್ಲೂಕು ಕಸಬಾ ಹೋಬಳಿ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಏಳು ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಜಿ.ಪಿ.ಎಸ್. ಮಾಡುವಾಗ ಅಧಿಕಾರಿಗಳ ಯಡವಟ್ಟಿನಿಂದ ರೈತರಿಗೆ ಬೆಳೆವಿಮೆ ಪಾವತಿಯಾಗಿಲ್ಲ ಎಂದು ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ : ಮೇ.27 ರವರೆಗೆ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನಕ್ಕೆ | ಮತ್ತೆ ಚಿತ್ರದುರ್ಗ ಕಾರಾಗೃಹ ಸೇರಿದ ಮುರುಘಾಶ್ರೀ

ಚಿಕ್ಕಮಧುರೆ, ಹಿರೇಮಧುರೆ, ಉಪ್ಪಾರಹಟ್ಟಿ, ಚಿಗತನಹಳ್ಳಿ, ಗಂಜಿಗುಂಟೆ, ಲಂಬಾಣಿಹಟ್ಟಿ, ಕನ್ನೇನಹಳ್ಳಿ ಗ್ರಾಮಗಳ ರೈತರು ತೊಗರಿ ಮತ್ತು ಶೇಂಗಾಕ್ಕೆ ಬೆಳೆವಿಮೆ ಮೊತ್ತವನ್ನು ಪಾವತಿಸಿದ್ದರೂ ಸಹ ಮಳೆ ಸುರಿದು ಬೆಳೆ ಸಮೃದ್ದವಾಗಿದೆ ಎಂದು ಅಧಿಕಾರಿಗಳು ಬೆಳೆ ಸಮೀಕ್ಷೆಯಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವುದರಿಂದ ರೈತರ ಖಾತೆಗಳಿಗೆ ಬೆಳೆ ವಿಮೆ ಜಮಾ ಆಗಿರುವುದಿಲ್ಲ.
ಇದನ್ನೂ ಓದಿ : ಗಣಿತ ಕಲಿಕೆ ಈಗ ಇನ್ನೂ ಸುಲಭ
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ರೈತರು ಸಮಯಕ್ಕೆ ಸರಿಯಾಗಿ ಮಳೆ ಬಾರದ ಕಾರಣ ಬೆಳೆಹಾನಿಯಿಂದ ಕೈಸುಟ್ಟುಕೊಂಡಿದ್ದಾರೆ. ಚಳ್ಳಕೆರೆ ತಾಲ್ಲೂಕಿನ ಎಲ್ಲಾ ಪಂಚಾಯಿತಿಗಳಿಗೂ ಬೆಳೆವಿಮೆ ಪರಿಹಾರವನ್ನು ಸರ್ಕಾರ ಮತ್ತು ಬೆಳೆ ವಿಮೆ ಕಂಪನಿಗಳು ನೀಡಿದ್ದು, ಸೋಮಗುದ್ದು ಗ್ರಾಮ ಪಂಚಾಯಿತಿಗೆ ಮಾತ್ರ ಬೆಳೆ ವಿಮೆ ಸಿಕ್ಕಿಲ್ಲ.
ಒಂದು ವಾರದೊಳಗಾಗಿ ದಿನ ನಿಗಧಿಪಡಿಸಿ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಕರೆಸಿ ನಷ್ಟ ಅನುಭವಿಸಿರುವ ರೈತರ ಖಾತೆಗಳಿಗೆ ಬೆಳೆವಿಮೆ ಜಮಾ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾನಿರತ ರೈತರು ಜಿಲ್ಲಾಡಳಿತಕ್ಕೆ ಗಡುವು ನೀಡಿದರು.
ಇದನ್ನೂ ಓದಿ : ಭೀಕರ ಬರಗಾಲದಲ್ಲಿ ಕೋಡಿ ಬಿದ್ದ ಚಿತ್ರದುರ್ಗ ಜಿಲ್ಲೆಯ ಕೆರೆ | ನೀರೆಲ್ಲಿಂದ ಬಂತು ಅಂತಿರಾ, ಈ ಸುದ್ದಿ ಓದಿ..
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ತಾಲ್ಲೂಕು ಅಧ್ಯಕ್ಷ ಧನಂಜಯ, ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಪ್ರಶಾಂತ, ಕೆಂಚಪ್ಪ, ತಿಪ್ಪೇಸ್ವಾಮಿ, ಎಸ್.ನಾಗರಾಜ, ಶಶಿಧರ್, ಬಿ.ಟಿ.ಚಿದಾನಂದ, ಬಿ.ಶಿವಣ್ಣ ಇದ್ದರು.
