Connect with us

    ಬೆಳೆ ಸಮೀಕ್ಷೆ ಕ್ರಮಬದ್ಧವಾಗಿಲ್ಲ | ಅಚಾತುರ್ಯ ನಡೆಸಿದ ಪಿಡಿಓಗಳಿಗೆ ನೋಟೀಸ್ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

    ಬೆಳೆವಿಮೆ ಕುರಿತು ರೈತರೊಂದಿಗೆ ಡಿಸಿ ಸಭೆ

    ಮುಖ್ಯ ಸುದ್ದಿ

    ಬೆಳೆ ಸಮೀಕ್ಷೆ ಕ್ರಮಬದ್ಧವಾಗಿಲ್ಲ | ಅಚಾತುರ್ಯ ನಡೆಸಿದ ಪಿಡಿಓಗಳಿಗೆ ನೋಟೀಸ್ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

    CHITRADURGA NEWS | 06 MAY 2024

    ಚಿತ್ರದುರ್ಗ: ಬೆಳೆ ಸಮೀಕ್ಷೆಯ ಸಂದರ್ಭದಲ್ಲಿ ಆಗಿರುವ ವ್ಯತ್ಯಾಸದ ಕುರಿತು ಈಗಾಗಲೇ ಚರ್ಚಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪುನಃ ಪರಿಶೀಲಿಸಿ, ಬೆಳೆವಿಮೆ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

    ಇದನ್ನೂ ಓದಿ: ಉದ್ಯೋಗ ಮಾಡುವ ಆಸೆಯೇ, ಏನು ಮಾಡಬೇಕೆಂಬ ಐಡಿಯಾ ಇಲ್ಲವೇ.. ಹಾಗಿದ್ದರೆ ಈ ಸುದ್ದಿ ಓದಿ, ನಿಮಗೊಂದು ಒಳ್ಳೆಯ ದಾರಿ ಸಿಗುತ್ತೆ..

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರೈತರು, ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು. ಮಳೆ ಆಶ್ರಿತ ಜಮೀನುಗಳಲ್ಲಿ ನಡೆಸಬೇಕಾದ ಬೆಳೆ ಕಟಾವು ಪ್ರಯೋಗವನ್ನು ನೀರಾವರಿ ಜಮೀನುಗಳ ಸರ್ವೇ ನಂಬರ್‍ಗಳಲ್ಲಿ ನಡೆಸಲಾಗಿದೆ. ಹೀಗಾಗಿ ಬೆಳೆ ಸಮೀಕ್ಷೆ ಕ್ರಮಬದ್ಧವಾಗಿಲ್ಲ. ಈ ಅಚಾತುರ್ಯ ಮಾಡಿದ ಪಿಡಿಓಗಳಿಗೆ ನೋಟಿಸ್ ನೀಡಲಾಗಿದೆ ಎಂದರು.

    ಇದನ್ನೂ ಓದಿ: ಸಂಶೋಧಕ ಡಾ.ಬಿ.ರಾಜಶೇಖರಪ್ಪ ಅವರಿಗೆ ಪ್ರೊ.ಶಿ.ಚೆ.ನಂದೀಮಠ ಪ್ರಶಸ್ತಿ

    ಬೆಳೆ ಸಮೀಕ್ಷೆಯಲ್ಲಿ ಉಂಟಾದ ವ್ಯತ್ಯಾಸದಿಂದ ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಆಗದಿರುವುದು ಗಮನಕ್ಕೆ ಬಂದಿದೆ. ಈ ಭಾಗದ ರೈತರ ಜಮೀನುಗಳಲ್ಲಿ ಪುನಃ ಮರು ಪರಿಶೀಲಿಸಿ ಬೆಳೆವಿಮೆ ಪರಿಹಾರ ವಿತರಣೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

    ಇದನ್ನೂ ಓದಿ: ಈರುಳ್ಳಿ ಬೆಳೆಗಾರರ ಮೊಗದಲ್ಲಿ ಮಂದಹಾಸ | ರಫ್ತಿಗೆ ಕೇಂದ್ರ ಸರ್ಕಾರದ ಸಮ್ಮತಿ

    ಬೆಳೆ ಸಮೀಕ್ಷೆ ತಪ್ಪಿನಿಂದಾಗಿ ಇಡೀ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಿಗೂ ಪರಿಣಾಮ ಬೀರಿದೆ ಎಂದು ರೈತರು ಮಾಹಿತಿ ನೀಡಿದ್ದು, ಇದು ಅವೈಜ್ಞಾನಿಕ ಕ್ರಮವಾಗಿದೆ. ಈ ಕುರಿತು ಸೂಕ್ತ ಕ್ರಮಕೈಗೊಂಡು ಬೆಳೆ ನಷ್ಟ ಉಂಟಾದ ರೈತರಿಗೆ ಕಡ್ಡಾಯವಾಗಿ ಬೆಳೆವಿಮೆ ಪಾವತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

    ಇದನ್ನೂ ಓದಿ: ಕೋಟೆನಾಡಿನಲ್ಲಿ ಬರಗೇರಮ್ಮ, ಏಕನಾಥೇಶ್ವರಿ ಸಿಡಿ ಉತ್ಸವದ ವೈಭವ

    ಚಳ್ಳಕೆರೆ ತಾಲ್ಲೂಕು ರಾಜ್ಯದಲ್ಲಿಯೇ ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶವಾಗಿದೆ. ಇಂತಹ ಸಂದರ್ಭದಲ್ಲಿ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಬೆಳೆವಿಮೆ ವಿತರಣೆಯಾಗದಿರುವುದು, ಬೆಳೆವಿಮೆ ಹಣ ಪಾವತಿಯಲ್ಲಿಯೂ ವ್ಯತ್ಯಾಸ ಆಗಿರುವುದು ಹಾಗೂ ಕಂಪ್ಯೂಟರ್ ಸೆಂಟರ್‍ಗಳಲ್ಲಿ ಡಾಟಾ ಎಂಟ್ರಿ ಮಾಡುವ ಸಂದರ್ಭದಲ್ಲಿ ಆಗಿರುವ ತಪ್ಪುಗಳು ಸಹ ಗಮನಕ್ಕೆ ಬಂದಿವೆ.

    ವಿಮೆ ಹಣ ರೈತರ ಸಾಲದ ಖಾತೆಗೆ ಜಮೆ ಬೇಡ:

    ರೈತರಿಗೆ ನೀಡುವ ಬೆಳೆವಿಮೆ, ಸರ್ಕಾರಿ ಸೌಲಭ್ಯ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣೆ ಹಣವನ್ನು ರೈತರ ಸಾಲದ ಖಾತೆಗಳಿಗೆ ಜಮೆ ಮಾಡುವಂತಿಲ್ಲ. ಈಗಾಗಲೇ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದು, ರೈತರ ಸಾಲದ ಖಾತೆಗೆ ಬೆಳೆವಿಮೆ ಹಣ ಜಮೆ ಮಾಡದಂತೆ ಕ್ರಮವಹಿಸಲಾಗಿದೆ.

    ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ

    ಇದರ ಜೊತೆಗೆ ಬೆಳೆ ಪರಿಹಾರ ವಿತರಣೆಗೂ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

    ಬೆಳೆವಿಮೆ ಕುರಿತು ರೈತರೊಂದಿಗೆ ಡಿಸಿ ಸಭೆ

    ಬೆಳೆವಿಮೆ ಕುರಿತು ರೈತರೊಂದಿಗೆ ಡಿಸಿ ಸಭೆ

    ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು ಗ್ರಾಮ ಪಂಚಾಯಿತಿ ಹೊರತುಪಡಿಸಿ ಎಲ್ಲ ಪಂಚಾಯಿತಿಗಳಿಗೂ ಬೆಳೆವಿಮೆ ಹಣ ಬಂದಿದೆ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಬೆಳೆವಿಮೆ ಪಾವತಿಯಾಗದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸಿ ಸೂಕ್ತ ದಾಖಲೆಗಳೊಂದಿಗೆ ವಿಮಾ ಕಂಪನಿಗೆ ಆಗಿರುವ ಲೋಪದೋಷ ಸರಿಪಡಿಸಿ ಬೆಳೆವಿಮೆ ಪಾವತಿಸಲು ಸೂಚನೆ ನೀಡಲಾಗುವುದು ಎಂದರು.

    ಇದನ್ನೂ ಓದಿ: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ | 16 ಜೋಡಿ ದಾಂಪತ್ಯಕ್ಕೆ ಪದಾರ್ಪಣೆ

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಸೇರಿದಂತೆ ಸಾಂಖ್ಯಿಕ ಇಲಾಖೆ ಅಧಿಕಾರಿಗಳು, ಬೆಳೆವಿಮೆ ಪ್ರತಿನಿಧಿ, ರೈತರ ಸಂಘದ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಕೆ.ಪಿ.ಭೂತಯ್ಯ, ಚಿಕ್ಕಪನಹಳ್ಳಿ ರುದ್ರಸ್ವಾಮಿ, ಹಂಪಯ್ಯನಮಾಳಿಗೆ ಧನಂಜಯ, ಬ್ಯಾರಡಹಳ್ಳಿ ಶಿವಕುಮಾರ, ನಿವೃತ್ತ ಪ್ರಾಚಾರ್ಯ ಶಿವಲಿಂಗಪ್ಪ, ಮಲ್ಲಾಪುರ ತಿಪ್ಪೇಸ್ವಾಮಿ ಸೇರಿದಂತೆ ರೈತರು ಇದ್ದರು.

    ಜಿಲ್ಲೆಯ ರೈತರು ಬೆಳೆವಿಮೆಗೆ 11.92 ಕೋಟಿ ರೂ. ಹಣ ಪಾವತಿಸಿದ್ದು, ಜಿಲ್ಲೆಗೆ ರೂ.284 ಕೋಟಿ ರೂಪಾಯಿ ಬೆಳೆವಿಮೆ ಹಣ ಬಂದಿದೆ. ಬೆಳೆವಿಮೆ ಹಣದ ಒಟ್ಟು ಮೊತ್ತದಲ್ಲಿ ಚಳ್ಳಕೆರೆ ತಾಲ್ಲೂಕಿಗೆ ಶೇ.51ರಷ್ಟು ಹಣ ಬಂದಿದೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top