
CHITRADURGA NEWS | 04 AUGUST 2024
ಚಿತ್ರದುರ್ಗ: ಹೆತ್ತವರು ತಮ್ಮ ಮಕ್ಕಳನ್ನು ಪ್ರೀತಿಮಾಡುವಷ್ಟು ದೇವರನ್ನು ಸಹ ಪ್ರೀತಿಸುವುದಿಲ್ಲ, ಅವರ ನಿಸ್ವಾರ್ಥ ಪ್ರೀತಿಗೆ ಬೆಲೆಕಟ್ಟಲಾಗದು, ಪ್ರತಿಯೊಬ್ಬ ವಿದ್ಯಾರ್ಥಿಯು ತಂದೆ-ತಾಯಿಯರಿಗೆ ಗೌರವ ಕೊಡುವ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿ ಹೇಳಿದರು.
ಕ್ಲಿಕ್ ಮಾಡಿ ಓದಿ: Wayanad: ಕೇರಳಿಗರ ಮನಗೆದ್ದ ದುರ್ಗದ ಮಗಳು | ದೊಡ್ಡೇರಿಯ ಮೇಘಶ್ರೀ ವಯನಾಡ್ ಡಿಸಿ
ನಗರದ ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿ ವೇದಿಕೆ ಉದ್ಘಾಟನೆ ಹಾಗೂ ಪ್ರತಿಭಾ ಪಾರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು.
ಪದವಿ ಪೂರ್ವ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳ ಈ ಹಂತದ ವಯಸ್ಸು ಬಂಗಾರದಂತ ಬದುಕನ್ನು ಕಟ್ಟಿಕೊಳ್ಳುವಂತದ್ದು, ಈ ವಯಸ್ಸಿನ ಮನಸ್ಸಿನಲ್ಲಿ ಏನನ್ನಾದರೂ ಬೆಳೆಸಿಕೊಂಡಾಗ ಅವರ ವ್ಯಕ್ತಿತ್ವದ ಸಾಂಸ್ಕೃತಿಕ ವಿಕಾಸಕ್ಕೆ ಅವಕಾಶ ದೊರೆಯುತ್ತದೆ.
ಲಕ್ಷ ಲಕ್ಷ ಸಂಪಾದನೆ ಮಾಡುವುದಕ್ಕಾಗಿ ಜೀವನ ಮಾಡಬೇಡಿ ಸುಲಭವಾಗಿ ಹಣಗಳಿಸುವ ಮಾರ್ಗವನ್ನು ಹುಡುಕಿಕೊಂಡು ಹೋಗದೆ ಕಷ್ಟಪಟ್ಟು ದುಡಿದು ಗಳಿಸುವ ಮಾರ್ಗವನ್ನು ಕಂಡುಕೊಳ್ಳಿ ಎಂದು ಆಶೀರ್ವಚನ ನೀಡಿದರು.
ಕ್ಲಿಕ್ ಮಾಡಿ ಓದಿ: VV Sagara: ವಿವಿ ಸಾಗರ | ಇಂದಿನ ಜಲಾಶಯದ ನೀರಿನ ಮಟ್ಟ ಎಷ್ಟಿದೆ
ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಪಿ.ಬಿ. ಭರತ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆಕರ್ಷಣೆಗಳಿಗೆ ಒಳಗಾಗದೆ, ಒತ್ತಡಗಳಿಗೆ ಬಲಿಯಾಗದೆ ತಮ್ಮ ದಿನಚರಿಗಳನ್ನು ಸುಧಾರಿಸಿಕೊಳ್ಳಬೇಕು, ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ತಪ್ಪುಗಳನ್ನು ತಿದ್ದಿಕೊಳ್ಳುವ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದರು.
ಎಸ್.ಜೆ.ಎಂ. ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಎಲ್. ಈಶ್ವರಪ್ಪ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸ್ವ-ಪ್ರತಿಭೆಗೆ ಅನುಗುಣವಾಗಿರುವಂತ ಕ್ಷೇತ್ರಗಳನ್ನು ಆಯ್ದುಕೊಳ್ಳಬೇಕು, ಹೊಂದಿಕೊಂಡು ಹೋಗುವ ಗುಣವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣ ನಮ್ಮೆಲ್ಲ ಸಮಸ್ಯೆಗಳಿಗೆ ಸಂಜೀವಿನಿ ಎಂದು ಹೇಳಿದರು.
ಶ್ರೀ ಬೃಹನ್ಮಠ ಕಾಲೇಜಿನ ಪ್ರಾಂಶುಪಾಲ ಪಿ.ಎಂ.ಜಿ. ರಾಜೇಶ್ ರವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಉತ್ಸಾಹ, ಸಂತೋಷ ಬಹಳ ಮುಖ್ಯ, ಸಂತೋಷಕ್ಕಾಗಿ ನಾವು ಸಂತೋಷವನ್ನು ಹುಡುಕಿಕೊಂಡು ಹೋಗಬಾರದು. ನಾವು ಶ್ರದ್ದೆಯಿಂದ ಮಾಡುವ ಕೆಲಸದಲ್ಲಿಯೇ ಸಂತೋಷವನ್ನು ಕಾಣಬೇಕು ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: Dhruva Sarja: ಅಭಿಮಾನಿಗೆ ಸಮಾಧಾನ ಮಾಡಿದ ಧ್ರುವ ಸರ್ಜಾ | ಸೆಲ್ಫಿ ಕ್ಲಿಕ್..ಕ್ಲಿಕ್
ಎಸ್.ಜೆ.ಎಂ. ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಬಿ. ತಿಪ್ಪೇಸ್ವಾಮಿ ಮಾತನಾಡಿದರು.
ಈ ವೇಳೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಷ್ಪಲತಾ ಬಾವಿಮತ ಹಾಗೂ ನಿವೃತ್ತ ನಿಲಯ ಪಾಲಕರಾದ ಪಿ.ಎಸ್. ಚಿನ್ನಪ್ಪ ಅವರನ್ನು ಸನ್ಮಾನಿಸಲಾಯಿತು.
2024 ನೇ ಸಾಲಿನ ದ್ವಿತೀಯ ಪಿ.ಯು.ಸಿ ಯಲ್ಲಿ ಅತಿಹೆಚ್ಚು ಅಂಕಗಳಿಸಿದ ಕಲಾ ವಿಭಾಗದಲ್ಲಿ ಸಿ.ನಯನ, ಎಂ.ಕೀರ್ತನ, ಆರ್.ಪುನೀತ್. ವಿಜ್ಞಾನ ವಿಭಾಗದಲ್ಲಿ ಟಿ.ಎಂ.ನಯನ, ವಾಣಿಜ್ಯ ವಿಭಾಗದಲ್ಲಿ ಎ.ಅರ್ಥನಾಜ್ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
