Connect with us

    Cultural Competition: ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ | ಡಾ.ಬಸವಪ್ರಭು ಸ್ವಾಮೀಜಿ ಉದ್ಘಾಟನೆ 

    ಸಾಂಸ್ಕೃತಿಕ ಸ್ಪರ್ಧೆ | ಡಾ.ಬಸವಪ್ರಭು ಸ್ವಾಮೀಜಿ ಉದ್ಘಾಟನೆ 

    ಮುಖ್ಯ ಸುದ್ದಿ

    Cultural Competition: ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ | ಡಾ.ಬಸವಪ್ರಭು ಸ್ವಾಮೀಜಿ ಉದ್ಘಾಟನೆ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 24 NOVEMBER 2024

    ಚಿತ್ರದುರ್ಗ: ನಗರದ ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ(Cultural Competition)ಗಳ ಕಾರ್ಯಕ್ರಮವನ್ನು ಮುರುಘಾಮಠದ ಡಾ.ಬಸವಪ್ರಭು ಸ್ವಾಮೀಜಿ ಉದ್ಘಾಟಿಸಿದರು.

    ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಿಂದ ಶಿವಣ್ಣನ ರಣಗಲ್ ಯಾತ್ರೆ | ಮುಂದಿನ ಸಿನಿಮಾ ಸುಳಿವು ನೀಡಿದ ಹ್ಯಾಟ್ರಿಕ್ ಹೀರೋ

    ನಂತರ ಮಾತನಾಡಿದ ಅವರು, ಪ್ರತಿಯೊಬ್ಬ ಮನುಷ್ಯನಲ್ಲಿ ಅಸಾಧಾರಣ ಶಕ್ತಿ ಇದೆ ಅದನ್ನು ಅರಿತು ಈ ಜಗತ್ತಿಗೆ ಸಾಧಿಸಿ ತೋರಿದವರು ಮಹಾನ್ ಸಾಧಕರಾಗುತ್ತಾರೆ.

    ಮನುಷ್ಯ ಬದುಕುವುದು ಬರೀ ಆಹಾರಕ್ಕಾಗಿ, ಅಧಿಕಾರಕ್ಕಾಗಿ, ಅಂತಸ್ತಿಗಾಗಿ ಅಲ್ಲ ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು ಎಂಬ ಛಲದೊಂದಿಗೆ ಬದುಕಿದಾಗ ಬದುಕು ಸಾರ್ಥಕವಾಗುತ್ತದೆ ಎಂದರು.

    ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್. ಪುಟ್ಟಸ್ವಾಮಿ ಮಾತಾನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ಸೂಸಲು ಇಂತಹ ವೇದಿಕೆಗಳು ಹೆಚ್ಚು ಸಹಕಾರಿಯಾಗುತ್ತವೆ. ನಿರ್ಣಾಯಕರು ಪೂರ್ವಗ್ರಹ ಪೀಡಿತರಾಗದೆ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕಾಗಿದೆ ಎಂದರು.

    ಕ್ಲಿಕ್ ಮಾಡಿ ಓದಿ: ಮಾನವ ಸರಪಳಿ ರಚನೆ | ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ | ನ.26 ರಂದು ಪ್ರಶಸ್ತಿ ಪ್ರದಾನ

    ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ. ಆರ್. ಮಲ್ಲೇಶ್ ಮಾತನಾಡಿ, ಹಲವು ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಂದ ದೂರ ಉಳಿದಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಬುದ್ಧಿವಂತರನ್ನಾಗಿಸುವ ಭರದಲ್ಲಿ ಕೇವಲ ಅಂಕಗಳ ಸ್ಪರ್ಧೆಗೆ ನಿಲ್ಲಿಸಿ ಮಕ್ಕಳನ್ನು ಪುಸ್ತಕದ ಹುಳುಗಳನ್ನಾಗಿಸಿದ್ದಾರೆ.

    ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳು ಉತ್ತಮ ಹವ್ಯಾಸಗಳನ್ನು ರೂಡಿಸಿಕೊಂಡು ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಿ ಹೆಚ್ಚು ಅಂಕಗಳನ್ನು ಗಳಿಸಲು ಸಫಲರಾಗುತ್ತಾರೆ ಎಂಬ ಸತ್ಯವನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಬೃಹನ್ಮಠ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ.ಜಿ ರಾಜೇಶ್ ಮಾತನಾಡಿ, ಎಲೆಮರೆ ಕಾಯಿಯಂತಿರುವ ಪ್ರತಿಭಾವಂತರನ್ನು ಗುರುತಿಸಲು ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಅಂದಾಗ ಮಾತ್ರ ಕಲೆ ಮತ್ತು ಸಂಸ್ಕೃತಿ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

    ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಬಿ.ಗೋವಿಂದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಕ್ಲಿಕ್ ಮಾಡಿ ಓದಿ: ವಿವಿ ಸಾಗರಕ್ಕೆ ಹೆಚ್ಚಾದ ಒಳಹರಿವು | ಕೋಡಿ ಬೀಳಲು ಇನ್ನೆಷ್ಟು ಬಾಕಿ

    ಹಿರಿಯ ಪ್ರಾಂಶುಪಾಲ ಕೆ.ತಿಮ್ಮಯ್ಯ,ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ, ಕಾರ್ಯದರ್ಶಿ ಆರ್.ಮುಸ್ತಫ,ಅನುದಾನಿತ ನೌಕರರ ಸಂಘದ ಅಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿ ನಾಗರಾಜ್ ಬೆಳಗಟ್ಟ ಮತ್ತಿತರರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top