CHITRADURGA NEWS | 21 JANUARY 2024
ಚಿತ್ರದುರ್ಗ: ಗ್ಯಾಸ್ ಸಿಲಿಂಡರ್ ಸ್ಪೋಟವಾಗಿ ಓರ್ವ ಮಹಿಳೆ ಮೃತಪಟ್ಟು, ಮೂವರು ಮಹಿಳೆಯರು ಗಾಯಗೊಂಡಿದ್ದಾರೆ.

ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಈ ಅವಘಡ ನಡೆದಿದ್ದು, ಅಡಿಕೆ ಸುಲಿಯುತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಭೀಮಸಮುದ್ರ ಚನ್ನಗಿರಿ ಅಡಿಕೆ ಮಾರುಕಟ್ಟೆ ವಿವರ
ಹೊಳಲ್ಕೆರೆ ತಾಲೂಕಿನ ಬಿಜನಾಳ್ ಗ್ರಾಮದ ಲಕ್ಷ್ಮಮ್ಮ ಮೃತ ಮಹಿಳೆ.
ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಹೋಟೆಲನ್ನು ನಿಂತು ನೋಡುವಾಗ ಸಿಲಿಂಡರ್ ಸ್ಪೋಟಗೊಂಡಿದೆ. ಈ ವೇಳೆ ನಿಂತು ನೋಡುತ್ತಿದ್ದ ಮಹಿಳೆಗೆ ಬೆಂಕಿ ತಗುಲಿ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ ರಚನಾ, ನೀಲಮ್ಮ, ರೇಣುಕಮ್ಮ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಚಿಕ್ಕಜಾಜೂರು ಪಿಎಸ್‍ಐ ದೀಪು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
