
CHITRADURGA NEWS | 10 AUGUST 2025
ಚಿತ್ರದುರ್ಗ: ಇಂಡೋ ಟಿಬೇಟಿ ಫ್ರೆಂಡ್ ಶಿಪ್ ಸೊಸೈಟಿ ವತಿಯಿಂದ ಚಿತ್ರದುರ್ಗ ನಗರದಲ್ಲಿ ಮಾದಾರ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳ ನೇತೃತ್ವದಲ್ಲಿ ಭಾನುವಾರ ಬೃಹನ್ಮಠದ ಅನುಭವ ಮಂಟಪದಲ್ಲಿ ಬಸವ ನಾಡಿನಲ್ಲಿ ಬುದ್ದ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಬೌದ್ಧ ಬಿಕ್ಕುಗಳ ಶಾಂತಿ ಪಾದಾಯಾತ್ರೆ ನಡೆಸಲಾಯಿತು.
ಇದನ್ನೂ ಓದಿ: ಒಳ ಮೀಸಲಾತಿ ಸಮೀಕ್ಷೆ | ಛಲವಾದಿ ಜನಾಂಗದ ನಿಖರವಾದ ಸಂಖ್ಯೆ ತೋರಿಸದೆ ಸರ್ಕಾರದಿಂದ ಅನ್ಯಾಯ
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸುಮಾರು 500ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳು ತಮ್ಮ ಸಂಪ್ರದಾಯಿಕ ಉಡುಗೆಯ ಎಣ್ಣೆ ಕೆಂಪು ಬಣ್ಣದ ಸಮವಸ್ತç, ಅದರ ಮೇಲೆ ಹಳದಿ ಬಣ್ಣದ ವಸ್ತ್ರ ಹಾಕಿಕೊಂಡು ನಗರದ ಪ್ರವಾಸಿ ಮಂದಿರದಿಂದ ಮದಕರಿ ನಾಯಕ ವೃತ್ತದವರೆಗೆ ಪಾದಯಾತ್ರೆ ನಡೆಸಿದರು.
ಬಸವ ನಾಡಿನಲ್ಲಿ ಬುದ್ದನ ಸ್ಮರಣೆಗೆ ಪಾತ್ರರಾದರು. ದಾರಿಯುದ್ದಕ್ಕೂ ತಮ್ಮ ಧರ್ಮದ ಮಂತ್ರಗಳನ್ನು ಪಠಣ ಮಾಡುವ ಮೂಲಕ ಸರ್ವರಿಗೂ ಒಳಿತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.
ಪಾದಯಾತ್ರೆಯ ಸಂದರ್ಭದಲ್ಲಿ ಸಂವಿಧಾನ ಶಿಲ್ಪ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನಾಯಕ ಸಮುದಾಯ ಕುಲ ತಿಲಕ ಚಿತ್ರದುರ್ಗವನ್ನಾಳಿದ ರಾಜವೀರ ಮದಕರಿ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಇದನ್ನೂ ಓದಿ: ರಂಗ ಕಲೆಗಳ ಪುನಶ್ಚೇತನಕ್ಕೆ ಯೋಚನೆ | ಸತೀಶ ತಿಪಟೂರು
ಬುದ್ದ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಡಾ.ಬಿ.ಅರ್ ಅಂಬೇಡ್ಕರ್ ಹಾಗೂ ಮದಕರಿ ನಾಯಕ ಪ್ರತಿಮೆಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮದಕರಿ ನಾಯಕ ವೃತ್ತದಲ್ಲಿ ಆಗಮಿಸಿದ್ದ ಎಲ್ಲ ಬೌದ್ಧ ಬಿಕ್ಕುಗಳು ಮದಕರಿ ನಾಯಕ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಬೌದ್ಧ ಬಿಕ್ಕುಗಳ ಪಾದಯಾತ್ರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು. ಶಿವಲಿಂಗಾನಂದ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ಕಾಂಗ್ರೇಸ್ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಮಾರಸಂದ್ರ ಮುನಿಯಪ್ಪ, ಮುಂಡರಗಿ ನಾಗರಾಜ್, ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು.
ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ನೀಲಿ ಬಣ್ಣದ ವಸ್ತçದಿಂದ ಅಲಂಕಾರ ಮಾಡಲಾಗಿತ್ತು. ರಾಜವೀರ ಮದಕರಿ ನಾಯಕರ ಪ್ರತಿಮೆಯ ಸುತ್ತಲೂ ಚೆಂಡು ಹೂ, ಗುಲಾಬಿ ಹೂವು ಸೇರಿದಂತೆ ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಲಾಗಿತ್ತು.
ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಚಿತ್ರದುರ್ಗ ಮೂಲದ ದಂಪತಿಗಳಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ
ಮದಕರಿ ನಾಯಕರ ಪ್ರತಿಮೆಗೆ ಬೃಹತ್ ಗಾತ್ರದ ಹೂವಿನ ಹಾರ ಸಮರ್ಪಿಸಲಾಯಿತು. ಮದಕರಿ ನಾಯಕರ ವೃತ್ತದಲ್ಲಿ ಎಲ್ಲ ಬೌದ್ಧ ಬಿಕ್ಕುಗಳು ಪ್ರತಿಮೆಯ ಸುತ್ತಲೂ ಸಾಲಾಗಿ ನಿಂತು ಪ್ರಾರ್ಥನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
