CHITRADURGA NEWS | 16 OCTOBER 2026
ಚಿತ್ರದುರ್ಗ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗದ ವತಿಯಿಂದ ವಿವಿಧ ಮಾರ್ಗಗಳಲ್ಲಿ ವಿಶೇಷ ವಾಹನಗಳ ಸೌಲಭ್ಯ ಕಲ್ಪಿಸಲಾಗಿದೆ.
ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಇದೇ ಅಕ್ಟೋಬರ್ 16, 17 ಮತ್ತು 21ರಂದು ಈ ವಿಶೇಷ ಬಸ್ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಇದನ್ನೂ ಓದಿ: ಶರಣ ಸಂಸ್ಕೃತಿ ಉತ್ಸವ–2026 | ವಚನ ಕಮ್ಮಟ ರ್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ
ಬೆಂಗಳೂರಿನಿಂದ ರಾಯದುರ್ಗಕ್ಕೆ ಚಳ್ಳಕೆರೆ, ಬಿ.ಜೆ.ಕೆರೆ, ಕೊಂಡ್ಲಹಳ್ಳಿ, ಕೋನಸಾಗರ ಹಾಗೂ ಮೊಳಕಾಲ್ಮುರು ಮಾರ್ಗವಾಗಿ ಅಕ್ಟೋಬರ್ 16 ಮತ್ತು 17ರಂದು ರಾತ್ರಿ 22:31 ಹಾಗೂ 23:16ಕ್ಕೆ ವಿಶೇಷ ಬಸ್ಗಳು ಹೊರಡಲಿವೆ. ಹಾಗೆಯೇ ರಾಯದುರ್ಗದಿಂದ ಬೆಂಗಳೂರಿಗೆ ಅಕ್ಟೋಬರ್ 21ರಂದು ರಾತ್ರಿ 22:30 ಹಾಗೂ 23:30ಕ್ಕೆ ಬಸ್ಗಳು ಕಾರ್ಯಾಚರಣೆ ನಡೆಸಲಿವೆ.
ಬೆಂಗಳೂರಿನಿಂದ ಹೊಳಲ್ಕೆರೆಗೆ ಅಕ್ಟೋಬರ್ 16ರಂದು ರಾತ್ರಿ 22:30ಕ್ಕೆ ವಿಶೇಷ ಬಸ್ ಬಿಡಲಾಗುತ್ತಿದ್ದು, ವಾಪಸ್ ಹೊಳಲ್ಕೆರೆಯಿಂದ ಬೆಂಗಳೂರಿಗೆ ಅಕ್ಟೋಬರ್ 21ರಂದು ರಾತ್ರಿ 22:45ಕ್ಕೆ ಬಸ್ ಸಂಚರಿಸಲಿದೆ ಎಂದು ಕೆಎಸ್ಆರ್ಟಿಸಿ ಚಿತ್ರದುರ್ಗ ವಿಭಾಗದ ನಿಯಂತ್ರಣಾಧಿಕಾರಿಗಳು ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

