
CHITRADURGA NEWS | 20 NOVEMBER 2024
ಚಿತ್ರದುರ್ಗ: 2024-29 ಸಾಲಿನ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ, ಜಿಲ್ಲಾ ಖಜಾಂಜಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ(Election Schedule) ಪ್ರಕಟ ಮಾಡಲಾಗಿದೆ.
ಕ್ಲಿಕ್ ಮಾಡಿ ಓದಿ: ನಾಳೆ ಬೆಳಿಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರುವುದಿಲ್ಲ

ನ.19 ರಂದು ನ.27 ವರೆಗೆ ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನ.28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದೆ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ನ.29 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4:30 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ತದನಂತರ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು.
ಡಿ.4 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆ ವರೆಗೆ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾದ ನಂತರ ಮತಣ ಎಣಿಕೆ ನಡೆಸಿ, ಪಲಿತಾಂಶ ಪ್ರಕಟಿಸಲಾಗುವುದು.
ಕ್ಲಿಕ್ ಮಾಡಿ ಓದಿ: ಹಾಡಹಗಲೇ 6 ಲಕ್ಷ ಕದ್ದ ಚಾಲಾಕಿ ಕಳ್ಳರು
ಜಿಲ್ಲೆಯ ಎಲ್ಲಾ ತಾಲ್ಲೂಕು ಘಟಕಗಳ ಅಧ್ಯಕ್ಷರು ಸೇರಿದಂತೆ ಒಟ್ಟು 71 ಮತದಾರರು ಮತ ಚಲಾವಣೆ ಮಾಡಲಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಟಿ.ಜಗನ್ನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
