ಲೋಕಸಮರ 2024
ಲೋಕ ಸಮರಕ್ಕೆ ಡೇಟ್ ಫಿಕ್ಸ್ | ಏ.26, ಮೇ 7ಕ್ಕೆ ಮತದಾನ | ಜೂನ್ 4 ಫಲಿತಾಂಶ
CHITRADURGA NEWS | 16 MARCH 2024
ಚಿತ್ರದುರ್ಗ: ಬಿಸಿಲಿನಂತೆ ಲೋಕಸಭೆ ಚುನಾವಣೆ 2024 ರ ಕಾವು ಜೋರಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಘೋಷಿಸಿದರು.
ಏಪ್ರಿಲ್ 19ರಂದು ಮೊದಲ ಹಂತದ ಮತದಾನ, ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಮೇ 7ರಂದು ಮೂರನೇ ಹಂತದ ಮತದಾನ, ಮೇ 20 ರಂದು ನಾಲ್ಕನೇ ಹಂತದ ಮತದಾನ, ಮೇ 25 ರಂದು ಐದನೇ ಹಂತದ ಮತದಾನ, ಮೇ 25 ರಂದು ಐದನೇ ಹಂತದ ಮತದಾನ, ಜೂನ್ 1 ರಂದು ಐದನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ಕ್ಲಿಕ್ ಮಾಡಿ ಓದಿ: https://chitradurganews.com/payment-of-crop-insurance-within-a-week
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26, ಉತ್ತರ ಕರ್ನಾಟಕದಲ್ಲಿ ಹಾಗೂ ಮೇ 7ಕ್ಕೆ ಮತದಾನ ನಡೆಯಲಿದೆ.
ಮೊಳಕಾಲ್ಮುರು: 2,49,252, ಚಳ್ಳಕೆರೆ: 2,22,560, ಚಿತ್ರದುರ್ಗ: 2,64,248, ಹಿರಿಯೂರು: 2,45,728, ಹೊಸದುರ್ಗ: 1,99,457 ಹಾಗೂ ಹೊಳಲ್ಕೆರೆ ಕ್ಷೇತ್ರದಲ್ಲಿ 2,36,966 ಮತದಾರರಿದ್ದಾರೆ.
ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ಕ್ಲಿಕ್ ಮಾಡಿ ಓದಿ: https://chitradurganews.com/farmers-struggle-to-save-crops/
12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.
ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್‌ಡೆಸ್ಕ್, ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್ ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ.
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್‌ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್‌ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು ರೌಡಿಶೀಟರ್‌ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು.
ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ನಿಗಾ ಇಡಲಾಗುವುದು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ. ರೈಲ್ವೆ ಸ್ಟೇಷನ್, ಏರ್‌ಪೋರ್ಟ್‌ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ಹೇಳಿದರು.
ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು. 11 ರಾಜ್ಯಗಳ ಚುನಾವಣೆಯಲ್ಲಿ 3,400 ಕೋಟಿ ರೂ. ಸೀಜ್ ಮಾಡಲಾಗಿದೆ. ಚುನಾವಣೆ ವೇಳೆ ವಶಕ್ಕೆ 3,400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು. ಎಲ್ಲ ಬ್ಯಾಂಕ್‌ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ನಿರ್ದೇಶನ ನೀಡಿದರು.