
ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ಕೋಟೆನಾಡು ಚಿತ್ರದುರ್ಗ ಭರ್ಜರಿ ರಂಗೇರುತ್ತಿದೆ.
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮತಯಾಚನೆಗೆ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ.
ಇದಾದ ಒಂದು ದಿನದ ಬಳಿಕ ಅಂದರೆ ಏಪ್ರಿಲ್ 24 ರಂದು ಚಿತ್ರದುರ್ಗಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.
ಇದನ್ನೂ ಓದಿ: ಕರ್ನಾಟಕಕ್ಕೆ ಮೋದಿ ಸರ್ಕಾರದ ಕೊಡುಗೆ ಚೊಂಬು | ಚುನಾವಣೆಯಲ್ಲಿ ಪಾಠ ಕಲಿಸಲು ಸುರ್ಜೆವಾಲಾ ಕರೆ
ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷದ ಫೈರ್ ಬ್ರಾಂಡ್‍ಗಳು ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸುತ್ತಿರುವುದರಿಂದ ದುರ್ಗದ ರಣಕಣ ರಂಗೇರಿದೆ.
ಏಪ್ರಿಲ್ 23 ಬೆಳಗ್ಗೆ 11 ಗಂಟೆಗೆ ಪ್ರಿಯಾಂಕ ಗಾಂಧಿ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಮತಯಾಚನೆ ಮಾಡಲಿದ್ದಾರೆ.
ಇದನ್ನೂ ಓದಿ: ಇಳೆಗೆ ತಂಪೆರೆದ ಮಳೆರಾಯ | ಜಿಲ್ಲೆಯ ವಿವಿಧೆಡೆ ಮಳೆ
ಮಾಜಿ ಸಚಿವ ಎಚ್.ಆಂಜನೇಯ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದು, ಅಂದು ನಡೆಯುವ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 1 ಲಕ್ಷ ಜನ ಭಾಗವಹಿಸಲಿದ್ದಾರೆ ಎಂದಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
