CHITRADURGA NEWS | 9 APRIL 2024
ಚಿತ್ರದುರ್ಗ: ಭಾರತ ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಹಾಗೂ ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯಲ್ಲಿ ಮನೆಯಿಂದಲೇ ಮತದಾನ ಇದೇ ಏಪ್ರಿಲ್ 13 ರಿಂದ 15 ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣೆ ವೆಚ್ಚದ ಕುರಿತು ಅಭ್ಯರ್ಥಿಗಳು ಹಾಗೂ ಅವರ ಏಜೆಂಟರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಕ್ಲಿಕ್ ಮಾಡಿ ಓದಿ: ಲೋಕಸಭೆ ಚುನಾವಣೆ: ದೈನಂದಿನ ಪ್ರಚಾರದ ವೆಚ್ಚದ ಲೆಕ್ಕವಿಡಿ | ಮನೋಹರ್ ಮರಂಡಿ ಸೂಚನೆ

ಜಿಲ್ಲೆಯಲ್ಲಿ 29 ಸಾವಿರಕ್ಕೂ ಹೆಚ್ಚು ಅಂಗವಿಕಲ ಮತದಾರರು ಹಾಗೂ 80 ವರ್ಷ ಮೇಲ್ಪಟ್ಟ 16 ಸಾವಿರ ಹಿರಿಯ ನಾಗರಿಕರನ್ನು ಗುರುತಿಸಲಾಗಿದ್ದು, ಮನೆಯಿಂದಲೇ ಮತದಾನಕ್ಕಾಗಿ ಈಗಾಗಲೇ ಪ್ರತಿಯೊಬ್ಬರಿಗೂ ನಮೂನೆ 12 “ಡಿ” ಅನ್ನು ವಿತರಣೆ ಮಾಡಲಾಗಿದೆ. ಈ ಪೈಕಿ ಮನೆಯಿಂದಲೇ ಮತದಾನ ಮಾಡಲು ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಸೇರಿ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಂದಿ ಮನೆಯಿಂದ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಪಿಆರ್‌ಓ, ಎಪಿಆರ್‌ಓ, ಮೈಕ್ರೋ ವೀಕ್ಷಕರು ಹಾಗೂ ಪೊಲೀಸ್ ಅವರನ್ನು ಒಳಗೊಂಡ ತಂಡ ಮನೆ ಮತದಾನಕ್ಕೆ ತೆರಳಿ, ಮನೆಯಿಂದಲೇ ಮತದಾನ ಮಾಡುವ ಮತದಾರರಿಗೆ ತಾತ್ಕಾಲಿಕವಾಗಿ ಬೂತ್ ವ್ಯವಸ್ಥೆ ಕಲ್ಪಿಸಿ, ಮನೆ ಮತದಾನಕ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.
ಕ್ಲಿಕ್ ಮಾಡಿ ಓದಿ: ಯುಗಾದಿಯಲ್ಲಿ 4 ರಾಶಿಗೆ ರಾಜಯೋಗ | ಹಬ್ಬದ ಸಂಭ್ರಮದಲ್ಲಿ ಜೊತೆಯಾಗಲಿದೆ ಅದೃಷ್ಟ
ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಮಾಡುವುದಕ್ಕೆ ಅಗತ್ಯ ಸಿಬ್ಬಂದಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಎಲ್ಲರಿಗೂ ನಮೂನೆ 12 ‘ಡಿ’ ವಿತರಣೆ ಮಾಡಲಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಅಂಚೆ ಮತದಾನ ಕೇಂದ್ರ (ಪೋಸ್ಟಲ್ ವೋಟಿಂಗ್ ಸೆಂಟರ್)ವನ್ನು ನಗರದ ತಹಶೀಲ್ದಾರ್ ಕಚೇರಿಯಲ್ಲಿರುವ ಚಿತ್ರದುರ್ಗ-99 ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂಧ ಕರ್ತವ್ಯ ನಿರತ ಗೈರು ಹಾಜರಿ ಮತದಾರರು ಇದೇ ಏಪ್ರಿಲ್ 19 ರಿಂದ 21 ರ ವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ಒಳಗೆ ಪೋಸ್ಟಲ್ ವೋಟಿಂಗ್ ಸೆಂಟರ್‌ಗೆ ಆಗಮಿಸಿ ತಮ್ಮ ಮತ ಚಲಾಯಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಚುನಾವಣಾ ವೆಚ್ಚ ಉಸ್ತುವಾರಿ ಕೋಶದ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು ಸೇರಿದಂತೆ ಚಿತ್ರದುರ್ಗ ಲೋಕಸಭಾ ಚುನಾವಣೆಗ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಏಜೆಂಟರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
