Connect with us

    Wall climbing: ಒನಕೆ ಓಬವ್ವ ಸ್ಟೇಡಿಯಂನಲ್ಲಿ ಕೋಟಿ ವೆಚ್ಚದಲ್ಲಿ ವಾಲ್ ಕ್ಲೈಂಬಿಂಗ್ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

    kcveerendrapuppy

    ಮುಖ್ಯ ಸುದ್ದಿ

    Wall climbing: ಒನಕೆ ಓಬವ್ವ ಸ್ಟೇಡಿಯಂನಲ್ಲಿ ಕೋಟಿ ವೆಚ್ಚದಲ್ಲಿ ವಾಲ್ ಕ್ಲೈಂಬಿಂಗ್ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 05 DECEMBER 2024

    ಚಿತ್ರದುರ್ಗ: ಸ್ಟೇಡಿಯಂನಲ್ಲಿ ಒಂದು ಕೋಟಿ ವೆಚ್ಚದಲ್ಲಿ ವಾಲ್ ಕ್ಲೈಂಬಿಂಗ್(Wall climbing) ನಿರ್ಮಿಸಲಾಗುವುದು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.

    ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದ ಖ್ಯಾತ ಪತ್ರಕರ್ತ ಡಿ.ಉಮಾಪತಿ ಪ್ರಶಸ್ತಿಗೆ ಆಯ್ಕೆ | ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

    ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷರ ಹಾಗೂ ಮಹಿಳೆಯರ 13 ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ತಂಡದ ಆಯ್ಕೆ-2024 ಮುಕ್ತಾಯ ಸಮಾರಂಭದಲ್ಲಿ ಗುರುವಾರ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿ.

    ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರುಗಳ ಕೊರತೆಯಿರುವುದನ್ನು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಕ್ರೀಡಾ ಸಚಿವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

    ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ದೈಹಿಕ ಶಿಕ್ಷಣ ನಿರ್ದೇಶಕರುಗಳು ನನ್ನ ಗಮನಕ್ಕೆ ತಂದಿದ್ದಾರೆ. ಮುಂದಿನ ದಿನಗಳಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿ ಪ್ರೋತ್ಸಾಹ ನೀಡಲಾಗುವುದು.

    ಕ್ಲಿಕ್ ಮಾಡಿ ಓದಿ: ದಾವಣಗೆರೆ ವಿವಿ ಅಥ್ಲೆಟಿಕ್ಸ್ | ಹರಿಹರ ಕಾಲೇಜು ಚಾಂಪಿಯನ್

    ನಾಲ್ಕು ಗೋಡೆಗಳ ನಡುವೆ ಶಿಕ್ಷಣ ಕಲಿಯುವುದರ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ಕೊಡಬೇಕಾಗಿರುವುದರಿಂದ ಪೋಷಕರುಗಳು ತಮ್ಮ ಮಕ್ಕಳ ಕ್ರೀಡೆಗೆ ಉತ್ತೇಜನ ನೀಡಬೇಕು ಎಂದರು.

    ದಾವಣಗೆರೆ ವಿಶ್ವವಿದ್ಯಾನಿಲಯದ ಕ್ರೀಡಾಪಟುಗಳು ಸಾಧನೆ ಮಾಡಿ ಒಲಂಪಿಕ್ಸ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು.

    ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಹೆಚ್.ಗಿರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

    ಕ್ಲಿಕ್ ಮಾಡಿ ಓದಿ: ಟಯರ್ ಬ್ಲಾಸ್ಟ್ | ಪಲ್ಟಿಯಾದ ಕಾರು | ಓರ್ವ ಸ್ಥಳದಲ್ಲೇ ಸಾವು

    ನಿವೃತ್ತ ಪ್ರಾಂಶುಪಾಲ ಸಂಗೇನಹಳ್ಳಿ ಅಶೋಕ್‍ಕುಮಾರ್, ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಎಂ.ಸಿದ್ದಪ್ಪ, ನಿವೃತ್ತ ಪ್ರಾಂಶುಪಾಲ ಡಾ.ಸಿ.ಶಿವಲಿಂಗಪ್ಪ, ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹೆಚ್.ತಿಪ್ಪೇಸ್ವಾಮಿ, ದ್ಯಾಮಪ್ಪ ಡಾ.ಕೆ.ವೆಂಕಟೇಶ್, ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top