
CHITRADURGA NEWS | 10 July 2025
ಚಿತ್ರದುರ್ಗ: ಹಿರಿಯೂರು, ಶಿರಾ ಪಟ್ಟಣಗಳು ಹೊಸದಾಗಿ ರೈಲು ಸಂಪರ್ಕ ಪಡೆಯುವುದು ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ವಿಶೇಷತೆಯಾಗಿದೆ.
ಈ ಮಾರ್ಗದ ಕಾಮಗಾರಿಯನ್ನು 2027ರ ಒಳಗಾಗಿ ಪೂರ್ಣಗೊಳಿಸುವಂತೆ ದಾವಣಗೆರೆಯ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಂಘ ಕಾರ್ಯದರ್ಶಿ ರೋಹಿತ್ ಎಸ್ ಜೈನ್ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಹೊಸ ರೈಲು ಮಾರ್ಗದಿಂದ ಆಗುವ ಹಲವು ಅನುಕೂಲಗಳನ್ನು ಅವರು ಪಟ್ಟಿ ಮಾಡಿದ್ದಾರೆ.

ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಗದಗ ಮತ್ತು ವಿಜಯಪುರ ಅಂತರವನ್ನು 65 ಕಿ.ಮೀ.ನಷ್ಟು ಕಡಿಮೆ ಮಾಡುತ್ತದೆ. ಈ ರೈಲು ಮಾರ್ಗದ ಅಂತಿಮ ಸಮೀಕ್ಷೆ ಮುಗಿದಿದೆ ಮತ್ತು ದಾವಣಗೆರೆ ಮತ್ತು ತುಮಕೂರು ಕಡೆಯಿಂದ ಕಾಮಗಾರಿ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.
ಹೊಸ ರೈಲು ಮಾರ್ಗದ ಉಪಯೋಗಗಳು:
* ಬೆಂಗಳೂರಿನಿಂದ ಚಿತ್ರದುರ್ಗಕ್ಕೆ 110 ಕಿ.ಮೀ. ಅಂತರ ಕಡಿಮೆಯಾಗುತ್ತದೆ.
* ಸಿರಾ ಮತ್ತು ಹಿರಿಯೂರು ಹೊಸ ಸ್ಥಳಗಳು ರೈಲು ಸಂಪರ್ಕವನ್ನು ಪಡೆಯುತ್ತವೆ.
* ಬೆಂಗಳೂರು-ಅರಸಿಕೆರೆ-ಶಿವಮೊಗ್ಗ ಮಾರ್ಗದಲ್ಲಿ ರೈಲು ಸಂಚಾರ 50% ರಷ್ಟು ಕಡಿಮೆಯಾಗುತ್ತದೆ.
* ಶಿವಮೊಗ್ಗವು ಬೆಂಗಳೂರಿನಿಂದ ಹೆಚ್ಚು ಪ್ರಯಾಣಿಕ ರೈಲುಗಳನ್ನು ಹೊಂದಬಹುದು.
ಬೆಂಗಳೂರಿನಿಂದ ಬೆಳಗಾವಿ ಮತ್ತು ಬಿಜಾಪುರ ನಡುವಿನ ಅಸ್ತಿತ್ವದಲ್ಲಿ ಇರುವ ಮಾರ್ಗಗಳಲ್ಲಿ ಸಂಚಾರ ಕನಿಷ್ಠ 35% ಕಡಿಮೆ ಆಗುತ್ತದೆ. ಇದರ ಪರಿಣಾಮ ಪ್ರಸ್ತುತ ಹರಿಹರ- ಬೀರೂರು- ಅರಸಿಕೆರೆ ಸಾಲಿನಲ್ಲಿ ದಟ್ಟಣೆ ಕಡಿಮೆ ಆಗುವುದರಿಂದ ಹೆಚ್ಚಿನ ಸರಕು ಸಾಗಣೆಯೂ ಮಾಡಬಹುದು. ಪ್ರಯಾಣದ ದೂರ ಕಡಿಮೆ ಆಗುವುದರಿಂದ, ಇಂಧನ ಮತ್ತು ಸಾಕಷ್ಟು ಪ್ರಯಾಣ ಸಮಯ ಉಳಿಸಬಹುದು ಎಂದು ತಿಳಿಸಿದ್ದಾರೆ.
ಐತಿಹಾಸಿಕ ಚಿತ್ರದುರ್ಗದ ಕೋಟೆ ನೋಡಲು ದೇಶ- ವಿದೇಶದಿಂದ ಬರುವ ಪ್ರವಾಸಿಗರಿಗೆ ತುಂಬಾ ಅನುಕೂಲ ಆಗುತ್ತದೆ. ಹೆಚ್ಚಿನ ಆದಾಯವೂ ಸಂಗ್ರಹವಾಗಲಿದೆ. ದಾವಣಗೆರೆಗೆ, ಆನಗೋಡು, ಹೆಬ್ಬಾಳು, ಭರಮಸಾಗರ, ಸಿರಿಗೆರೆ ಕ್ರಾಸ್, ಐಮಂಗಲ, ಹಿರಿಯೂರು, ಸಿರಾ ಹಾಗೂ ಊರಕೇರೆಗೆ ರೈಲು ಸಂಪರ್ಕ ಕಲ್ಪಿಸದಂತಾಗುತ್ತದೆ ಎಂದು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
