By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
    14 minutes ago
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    11 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    11 hours ago
    ಸುದ್ದಿಗೋಷ್ಠಿಯಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿದರು
    ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ | ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ
    11 hours ago
    ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಸಮನ್ವಯ ಸಮಿತಿ ಸಭೆ
    ಒಣಗುತ್ತಿರುವ ಬೆಳೆಗಳ ಕಟಾವು ಪ್ರಯೋಗ ತ್ವರಿತವಾಗಿ ಪೂರ್ಣಗೊಳಿಸಿ | ಡಿಸಿ ರಮ್ಯಾ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    11 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    10 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    11 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    1 day ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    1 day ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
Reading: ದಾವಣಗೆರೆ – ಚಿತ್ರದುರ್ಗ – ತುಮಕೂರು ರೈಲು ಮಾರ್ಗ | 2027 ಡಿಸೆಂಬರ್‌ಗೆ ಪೂರ್ಣ | ಸಚಿವ ವಿ. ಸೋಮಣ್ಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದಾವಣಗೆರೆ – ಚಿತ್ರದುರ್ಗ – ತುಮಕೂರು ರೈಲು ಮಾರ್ಗ | 2027 ಡಿಸೆಂಬರ್‌ಗೆ ಪೂರ್ಣ | ಸಚಿವ ವಿ. ಸೋಮಣ್ಣ

News Desk Chitradurga News
Last updated: 19 May 2025 17:08
News Desk Chitradurga News
1 year ago
Share
Davangere, Chitradurga and Tumkur direct train route
ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ನೇರ ರೈಲು ಮಾರ್ಗ
SHARE

CHITRADURGA NEWS | 19 MAY 2025

ಚಿತ್ರದುರ್ಗ: ದಾವಣಗೆರೆ -ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಯನ್ನು 2027ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಇದನ್ನೂ ಓದಿ: 1 ಕಿ.ಮೀ ತಿರಂಗಾ ಯಾತ್ರೆ | ದುರ್ಗದ ಬೀದಿಗಳಲ್ಲಿ ದೇಶಭಕ್ತಿಯ ಹೆದ್ದರೆ | ಭಾರತೀಯ ಸೇನೆಗೆ ನಾಗರೀಕರ ಬೆಂಬಲ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗದ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರಾಯದುರ್ಗ-ತುಮಕೂರು ರೈಲು ಮಾರ್ಗದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಟೆಂಡರ್ ಕರೆಯಲಾಗಿದೆ. ಅದೇ ರೀತಿ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯ ಸಮಸ್ಯೆಯನ್ನು ಬಗೆಹರಿಸಿ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಶೀಘ್ರವಾಗಿ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು. ಎರಡೂ ರೈಲು ಮಾರ್ಗಗಳನ್ನು 2027 ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ ಏಕಕಾಲಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದರು.

ಎಲ್ಲ ರೈಲ್ವೆ ಕೆಳ ಸೇತುವೆಗಳಲ್ಲಿನ ಪರಿಸ್ಥಿತಿ ಕುರಿತು ವರದಿ :

ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ನಗರದ ತುರುವನೂರು ರಸ್ತೆ ಹಾಗೂ ಮೆದೆಹಳ್ಳಿ ರಸ್ತೆಯಲ್ಲಿನ ರೈಲ್ವೆ ಕೆಳ ಸೇತುವೆಯಲ್ಲಿ ಉಂಟಾಗಿರುವ ತೀವ್ರ ಸಮಸ್ಯೆಯ ಬಗ್ಗೆ ಫೋಟೋ ಸಹಿತ ಸಚಿವರಿಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿರುವ ಬಹಳಷ್ಟು ರೈಲ್ವೆ ಕೆಳ ಸೇತುವೆಗಳು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇದರಿಂದ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ಹಾಗೂ ಅಪಾಯಕ್ಕೂ ಕಾರಣವಾಗುತ್ತಿದೆ ಎಂದರು.

ಇದನ್ನೂ ಓದಿ: RAIN: ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು

ಇದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ರೈಲ್ವೆ ಸಚಿವ ವಿ. ಸೋಮಣ್ಣ ಅವರು, ಕಳೆದ ಬಾರಿ ಜಿಲ್ಲೆಗೆ ಬಂದಾಗಲೇ ಈ ಕುರಿತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಆದರೆ ರೈಲ್ವೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ, ಸಮಸ್ಯೆ ಬಗೆಹರಿದಿಲ್ಲ.

ಚಿತ್ರದುರ್ಗ ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ರೈಲ್ವೆ ಕೆಳ ಸೇತುವೆಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಸೂಕ್ತ ಪರಿಹಾರ ಕ್ರಮಕೈಗೊಳ್ಳಬೇಕು.

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ರೈಲ್ವೆ ಕೆಳ ಸೇತುವೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅಲ್ಲಿನ ವಸ್ತು ಸ್ಥಿತಿ ಬಗ್ಗೆ ಹಾಗೂ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಅಲ್ಲದೆ ಪರಿಹಾರ ಕಾರ್ಯಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ, ಅನುಮೋದನೆಗಾಗಿ ಸಲ್ಲಿಸಬೇಕು ಎಂದು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಒಂದು ವಾರದೊಳಗೆ ಚಿತ್ರದುರ್ಗ-ದಾವಣಗೆರೆ ರಸ್ತೆಯ ರೈಲ್ವೆ ಗೇಟ್‍ಗೆ ಟೆಂಡರ್ | ಸಚಿವ ವಿ.ಸೋಮಣ್ಣ ಸೂಚನೆ

ಹೊಸದಾಗಿ ನಿರ್ಮಾಣವಾಗುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳಿಗೆ ಭೂಸ್ವಾಧೀನ ಆಗಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಮಾಡುವಂತೆ ಮನವಿ ಮಾಡಲಾಗಿದೆ. ಭೂಸ್ವಾಧೀನಕ್ಕೆ ಹಾಗೂ ಸೇತುವೆಗಳ ಕಾಮಗಾರಿಗೆ ತಗಲುವ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ:

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗದಲ್ಲಿ ಈಗಾಗಲೆ ಶೇ. 90 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ಇನ್ನೂ ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಾನಾ ಕಾರಣಗಳಿಂದಾಗಿ ಬಾಕಿ ಉಳಿದಿದೆ.

ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈ ಪ್ರಕ್ರಿಯೆ ತ್ವರಿತಗೊಳಿಸಲು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದ ಸಚಿವ ವಿ. ಸೋಮಣ್ಣ ಅವರು, ಬಾಕಿ ಉಳಿದಿರುವ ಎಲ್ಲ ಭೂಸ್ವಾಧೀನ ಕಾರ್ಯದ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದಲ್ಲಿ, ಅವರು ಕಾಮಗಾರಿ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಭೂಮಿ ಪೂಜೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ, ಈ ಮಾರ್ಗದಲ್ಲಿ ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕು ಸೇರಿ 1211 ಎಕರೆ ಜಮೀನಿನ ಅವಶ್ಯಕತೆ ಇದ್ದು, ಈ ಪೈಕಿ 1026 ಎಕರೆ ಜಮೀನು ಅವಾರ್ಡ್ ಆಗಿ, ಜಮೀನು ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ.

ಭರಮಸಾಗರ-ಚಿತ್ರದುರ್ಗ ಮಾರ್ಗದವರೆಗಿನ 36 ಕಿ.ಮೀ. ವ್ಯಾಪ್ತಿಯಲ್ಲಿ 348 ಎಕರೆ ಪೈಕಿ 312 ಎಕರೆ ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ್ದು, ರೈಲ್ವೆ ಕಾಮಗಾರಿ ನಡೆದಿದೆ. ಹೆಚ್ಚುವರಿಯಾಗಿ 41 ಎಕರೆ ಭೂಮಿಗೆ ರೈಲ್ವೆ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಸ್ವಾಧೀನ ಪ್ರಕ್ರಿಯೆ ಪ್ರಾರಂಬಿಸಲಾಗಿದೆ.

ಚಿತ್ರದುರ್ಗ-ಹಿರಿಯೂರು ಮಾರ್ಗದ 36 ಕಿ.ಮೀ. ವ್ಯಾಪ್ತಿಯಲ್ಲಿ ಅಗತ್ಯವಿರುವ 383 ಎಕರೆ ಪೈಕಿ 338 ಎಕರೆ ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ, 44 ಎಕರೆ ಹೆಚ್ಚುವರಿಯಾಗಿ ಡಿ.ಎಸ್. ಹಳ್ಳಿಯಲ್ಲಿ ಸ್ಟೇಷನ್ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಸ್ವಾಧೀನ ಪ್ರಕ್ರಿಯೆ ನಡೆದಿದೆ.

ಹಿರಿಯೂರು-ತಾವರೆಕೆರೆ ಮಾರ್ಗದ 29 ಕಿ.ಮೀ. ವ್ಯಾಪ್ತಿಯಲ್ಲಿ 478 ಎಕರೆ ಪೈಕಿ 374 ಎಕರೆ ಜಮೀನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಬಾಕಿ 104 ಎಕರೆ ಜಮೀನನ್ನು ಕೂಡ ರೈಲ್ವೆ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ. ರೈಲ್ವೆ ಯೋಜನೆಗಾಗಿ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದರು.

ಇದನ್ನೂ ಓದಿ: ತುರುವನೂರು ರಸ್ತೆಯ ನೂತನ ಬೆಸ್ಕಾಂ ಕಚೇರಿ | ಸಚಿವ ಡಿ.ಸುಧಾಕರ್ ಉದ್ಘಾಟನೆ

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ. ಕಾರಜೋಳ, ಶಾಸಕರಾದ ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ರೈಲ್ವೆ ಇಲಾಖೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಜಿಎಂ) ಮುದಿತ್ ಮಿತ್ತಲ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ನೇರ ರೈಲ್ವೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesD. SudhakarDavangereDirect rail routeKannada Latest NewsKannada NewsMinister V. SomannaRailTumkurಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿ.ಸುಧಾಕರ್ತುಮಕೂರುದಾವಣಗೆರೆನೇರ ರೈಲು ಮಾರ್ಗರೈಲುಸಚಿವ ವಿ.ಸೋಮಣ್ಣ
Share This Article
Facebook Email Print
Previous Article RAIN: ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು
Next Article ಹಿರಿಯೂರು ಚಳ್ಳಕೆರೆಗೆ ರೈಲ್ವೆ ಮಾರ್ಗ ಕಲ್ಪಿಸಿ | ಸಚಿವ ಡಿ.ಸುಧಾಕರ್‌
Leave a Comment

Leave a Reply Cancel reply

Your email address will not be published. Required fields are marked *

ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
ಮುಖ್ಯ ಸುದ್ದಿ
Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style
ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
ಮುಖ್ಯ ಸುದ್ದಿ
ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up