Connect with us

    ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ | ಹೊನ್ನಾಳಿ ಎಸ್‍ಎಂಎಸ್ ವಿದ್ಯಾರ್ಥಿನಿಯರ ಮೇಲುಗೈ

    ಸಮಗ್ರ ಚಾಂಪಿಯನ್ ಪ್ರಶಸ್ತಿ ಮುಡಿಗೇರಿಸಿಕೊಂಡ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ

    ಮುಖ್ಯ ಸುದ್ದಿ

    ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ | ಹೊನ್ನಾಳಿ ಎಸ್‍ಎಂಎಸ್ ವಿದ್ಯಾರ್ಥಿನಿಯರ ಮೇಲುಗೈ

    ಚಿತ್ರದುರ್ಗ ನ್ಯೂಸ್.ಕಾಂ: ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜುಗಳ ಪುರುಷ ಮತ್ತು ಮಹಿಳೆಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಹೊನ್ನಾಳಿಯ ಎಸ್‍ಎಂಎಸ್ ಪ್ರಥಮ ದರ್ಜೆ ಕಾಲೇಜು ತಂಡಗಳು ಚಾಂಪಿಯ್ ಪಟ್ಟ ಮುಡಿಗೇರಿಸಿಕೊಂಡಿವೆ.

    ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ, ಚಳ್ಳಕೆರೆಯ ಹೆಚ್.ಪಿ.ಸಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ ಈ ತಂಡಗಳು ಗೆದ್ದಿವೆ.

    ಪುರುಷರ ವಿಭಾಗದಲ್ಲಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರೆ, ಮಹಿಳೆಯರ ವಿಭಾಗದಲ್ಲಿ ಹೊನ್ನಾಳಿಯ ಎಸ್.ಎಂ.ಎಸ್. ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ತಂಡ ಮುಡಿಗೇರಿಸಿಕೊಂಡಿದೆ.

    ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಟಿಕೇಟ್ ಕೇಳಿದ್ದೇನೆ | ಎಂ.ಸಿ.ರಘುಚಂದನ್

    ಹೊನ್ನಾಳಿಯ ಎಸ್‍ಎಂಎಸ್ ಪ್ರಥಮ ದರ್ಜೆ ಕಾಲೇಜು ತಂಡ

    ಹೊನ್ನಾಳಿಯ ಎಸ್‍ಎಂಎಸ್ ಪ್ರಥಮ ದರ್ಜೆ ಕಾಲೇಜು ತಂಡ

    ವಿಜೇತ ತಂಡಗಳಿಗೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಟ್ರೋಫಿಗಳನ್ನು ವಿತರಣೆ ಮಾಡಿದರು.

    ಈ ವೇಳೆ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳು ಪಠ್ಯದಷ್ಟೇ ಮಹತ್ವವನ್ನು ಕ್ರೀಡೆಗಳಿಗೆ ನೀಡಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆ ಬಹಳ ಮುಖ್ಯ ಎಂದು ಸಲಹೆ ನೀಡಿದರು.

    134 ಕಾಲೇಜುಗಳ 800 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತೋಷದ ಸಂಗತಿ. ಇಲ್ಲಿ ಸೋಲು ಅಥವಾ ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು, ಕ್ರೀಡಾ ಮನೋಭಾವ ರೂಢಿಸಿಕೊಳ್ಳುವುದು ಬಹಳ ಮುಖ್ಯ ಎಂದರು.

    ಚಳ್ಳಕೆರೆ ಹೆಚ್.ಪಿ.ಸಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಆರ್.ರಂಗಪ್ಪ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಮುಖ್ಯವಾಗಿದೆ. ಇಂದು ವಿದ್ಯಾರ್ಥಿಗಳು ಇಡೀ ದಿನ ಮೊಬೈಲ್‍ನಲ್ಲಿ ಕಳೆದು ಹೋಗುವುದಕ್ಕಿಂತ ಮೈದಾನದಲ್ಲಿ ಆಟವಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

    ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾಧಿಕಾರಿ ಡಾ.ವೀರಪ್ಪ, ಕ್ರೀಡಾಕೂಟದ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ, ರಾಷ್ಟ್ರ ಮಟ್ಟದ ತೀರ್ಪುಗಾರ ಅರುಣ್, ಪ್ರಾಧ್ಯಾಪಕರಾದ ಅನೀಲ್‍ಕುಮಾರ್, ಗಂಗಾಧರ್, ಡಾ.ವೀರೇಂದ್ರ, ಡಾ.ಪಾಪಣ್ಣ, ರಘುನಾಥ್, ಜಿಪಂ ಮಾಜಿ ಸದಸ್ಯ ಬಾಬುರೆಡ್ಡಿ, ಉಪನ್ಯಾಸಕಿ ಜಯಮ್ಮ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top