
CHITRADURGA NEWS | 14 MARCH 2026
ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳ ಸಹಿ ಫೋರ್ಜರಿ ಮಾಡಿ ಜಿಲ್ಲಾ ಖಜಾನೆಗೆ 15 ಲಕ್ಷ ರೂ. ಮೊತ್ತದ ಬಿಲ್‌ಗಳನ್ನು ಸಲ್ಲಿಸಿದ್ದ ನಗರಾಭಿವೃದ್ಧಿ ಕೋಶದಲ್ಲಿ ಕಾರ್ಯನಿರ್ವಹಿಸುವ 6 ಮಂದಿ ನೌಕರರನ್ನು ಬಂಧಿಸಲಾಗಿದೆ.
ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ದಂತ ವೈದ್ಯಕೀಯ ಪರೀಕ್ಷೆಯಲ್ಲಿ 5ನೇ ರ್ಯಾಂಕ್ | ಸಾಧನೆ ಮಾಡಿದ ಡಾ.ಸಾಧನಾ
ನಗರಾಭಿವೃದ್ಧಿ ಕೋಶದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸೈಯದ್ ಸಾಧಿಕ್, ವಿಜಯಕುಮಾರ್, ವಿನಯ್ ಶರ್ಮಾ, ಬಸವರಾಜ್, ಮೆಹಬೂಬ್ ಭಾಷಾ ಹಾಗೂ ವೆಂಕಟೇಶ್ ಅವರ ವಿರುದ್ಧ ದೂರು ದಾಖಲಾಗಿತ್ತು.
ಮಾರ್ಚ್ 12 ರಂದು ಬೆಳಗ್ಗೆ 6.15 ರ ಸುಮಾರಿಗೆ ನಗರಾಭಿವೃದ್ಧಿ ಕೋಶದ ಸಿಬ್ಬಂಧಿ ಸೈಯದ್ ಸಾಧಿಕ್ ಜಿಲ್ಲಾಧಿಕಾರಿ ಕಚೇರಿಗೆ ಅಕ್ರಮ ಪ್ರವೇಶ ಮಾಡಿ, ಸಿಬ್ಬಂದಿಗೆ ವೇತನ ಪಾವತಿ ಮಾಡಲು ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳು ಬಳಸುತ್ತಿದ್ದ ಡಿಜಿಟಲ್ ಸಹಿಯ ಕೀಗಳನ್ನು ಕಳವು ಮಾಡಿರುವುದು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಮೆಡಿಕಲ್ ಕಾಲೇಜಿನ ಡಾ.ಮೇಘ ಅವರಿಗೆ ಪ್ರತಿಷ್ಠಿತ ವಿವಿಯಿಂದ AI ಪದವಿ
ವೇತನ ಪಾವತಿಗೆ ಸಂಬಂಧಿಸಿದ 15 ಲಕ್ಷ ರೂ. ಮೊತ್ತದ ಬಿಲ್ ತಯಾರಿಸಿ, ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳ ನಕಲಿ ಸಹಿ ಮಾಡಿರುವ ಆರೋಪಿಗಳು, ಇದನ್ನು ಜಿಲ್ಲಾ ಖಜಾನೆಗೆ ಸಲ್ಲಿಸಿದ್ದಾರೆ.
ಖಜಾನೆ ಇಲಾಖೆ ಉಪನಿರ್ದೇಶಕರು ಸಹಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
