ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ದಿವ್ಯಪ್ರಭು ವರ್ಗಾವಣೆ

CHITRADURGA NEWS | 23 JANUARY 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ2022 ಅಕ್ಟೋಬರ್ ತಿಂಗಳಿಂದ ಕಾರ್ಯನಿರ್ವಹಿಸುತ್ತಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರನ್ನು ನಿಯುಕ್ತಿಗೊಳಿಸಿದೆ. ಟಿ.ವೆಂಕಟೇಶ್ ಈ ಹಿಂದೆ 2009 ರಲ್ಲಿ ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಲೋಕಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಹಿಂದೆಯೂ ದಿವ್ಯಪ್ರಭು ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ, ಅಂತಹ ಬೆಳವಣಿಗೆ ಆಗಿರಲಿಲ್ಲ. ಈಗ ಸರ್ಕಾರ ಅಧಿಕೃತವಾಗಿ ವರ್ಗಾವಣೆ ಮಾಡಿ ಆದೇಶಿಸಿದೆ. ಆದರೆ, ಎಲ್ಲಿಗೆ ವರ್ಗಾವಣೆ ಮಾಡಿದೆ ಎಂದು ಸ್ಥಳವನ್ನು ತೋರಿಸಿಲ್ಲ.

ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಯುವ ಮತದಾರರ ನೊಂದಣಿ ಕಾರ್ಯನಿರ್ವಹಿಸಿದ್ದಕ್ಕಾಗಿ ಇತ್ತೀಚೆಗೆ ಭಾರತ ಚುನಾವಣಾ ಆಯೋಗ ಪ್ರಶಸ್ತಿಗೆ ಆಯ್ಕೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಬರುವುದಕ್ಕೂ ಮೊದಲು ದಿವ್ಯಪ್ರಭು ಜಿ.ಆರ್.ಜೆ ಕರ್ನಾಟಕ ಆಹಾರ ಮತ್ತು ನಾಗರೀಕರ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಆಗ ಚಿತ್ರದುರ್ಗದಲ್ಲಿ ಡಿಸಿ ಆಗಿದ್ದ ಕವಿತಾ ಎಸ್ ಮನ್ನಿಕೇರಿ ಅವರ ಜಾಗಕ್ಕೆ ವರ್ಗಾವಣೆಯಾಗಿ ಮೊದಲ ಡಿಸಿ ಹುದ್ದೆಯನ್ನು ಚಿತ್ರದುರ್ಗದಲ್ಲಿ ಪಡೆದುಕೊಂಡಿದ್ದರು.
