CHITRADURGA NEWS | 09 JANUARY 2026
ಚಿತ್ರದುರ್ಗ: ಅಪಾಯದಲ್ಲಿರುವ ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗೆ ತಕ್ಷಣವೆ ನೆರವು ನೀಡಿ ರಕ್ಷಣೆ ಒದಗಿಸುವ ಅಕ್ಕ ಪಡೆಯ ವಿಶೇಷ ಪೊಲೀಸ್ ಗಸ್ತು ವಾಹನಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಜನವರಿ 8 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಕಿರುಕುಳ, ಕೌಟುಂಬಿಕ ಹಿಂಸೆ, ಈವ್ ಟೀಸಿಂಗ್ ಅಥವಾ ಯಾವುದೇ ರೀತಿಯ ದೌರ್ಜನ್ಯ ಎದುರಿಸುತ್ತಿರುವ ಮಹಿಳೆಯರು ಮಹಿಳೆಯರು ಮತ್ತು ಹದಿ ಹರೆಯದ ಹೆಣ್ಣು ಮಕ್ಕಳು, ಬಾಲ ಕಾರ್ಮಿಕ ಪದ್ಧತಿ, ಭಿಕ್ಷಾಟನೆ, ಮಾದಕ ದ್ರವ್ಯ ಅಥವಾ ನಿಂದನೆಗೆ ಒಳಗಾದ ಮಕ್ಕಳು ಸಹಾಯವಾಣಿ ಸಂಖ್ಯೆಗಳಾದ 112 ಮತ್ತು 1098 ಕರೆ ಮಾಡಿದ ತಕ್ಷಣವೇ ಅಕ್ಕ ಪಡೆ ನೆರವಿಗೆ ಧಾವಿಸಲಿದೆ.
ಅಕ್ಕ ಪಡೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಸ ವಾಹನ ಒದಗಿಸಲಾಗಿದೆ.
ವಿಶೇಷವಾಗಿ ಮಹಿಳಾ ಪೊಲೀಸ್ ಹಾಗೂ ಗೃಹ ರಕ್ಷಕರು ಅಕ್ಕ ಪಡೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ನಗರ ಮತ್ತು ಹೊರವಲಯದ ಬಸ್ ನಿಲ್ದಾಣ, ಮಾರ್ಕೆಟ್, ದೇವಸ್ಥಾನ, ಉದ್ಯಾನಗಳು, ಶಾಲೆ-ಕಾಲೇಜು ಬಳಿ, ವಿದ್ಯಾರ್ಥಿನಿಯರ ಹಾಸ್ಟೆಲ್, ಜನನಿಬಿಡ ಪ್ರದೇಶ, ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ವಾಹನ ಗಸ್ತು ತಿರುಗಲಿದೆ. ಇದರಿಂದ ಶಾಲೆ-ಕಾಲೇಜು ವಿದ್ಯಾರ್ಥಿನಿಯರು, ಮಹಿಳೆಯರ ಮಾನಸಿಕ ಸ್ಥೈರ್ಯ ಹೆಚ್ಚಲಿದೆ.
ಇದನ್ನೂ ಓದಿ: JJM ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ | ಜಿ.ಪಂ ಸಿಇಒ ಡಾ.ಆಕಾಶ್
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕಮಾರ್, ಮಹಿಳಾ ಮತ್ತು ಮಕ್ಕಳ ಉಪ ನಿರ್ದೇಶಕ ವಿಜಯಕಮಾರ್.ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ. ಪ್ರೇಮಮೂರ್ತಿ, ಜಿಲ್ಲಾ ಗೃಹ ರಕ್ಷಕ ದಳ ಜಿಲ್ಲಾ ಕಾಮಾಡೆಂಡ್ ಸಿ.ಕೆ.ಸಂಧ್ಯಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಗೃಹ ರಕ್ಷಕರು, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
