By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    11 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    13 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    13 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    14 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    17 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    49 minutes ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    24 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
Reading: ಕೋಟೆ ಅಭಿವೃಧ್ಧಿಗೆ ಡಿಸಿ ಸಭೆ | 20.40 ಕೋಟಿ ವೆಚ್ಚದಲ್ಲಿ‌ ಧ್ವನಿ, ಬೆಳಕು ಸೌಲಭ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೋಟೆ ಅಭಿವೃಧ್ಧಿಗೆ ಡಿಸಿ ಸಭೆ | 20.40 ಕೋಟಿ ವೆಚ್ಚದಲ್ಲಿ‌ ಧ್ವನಿ, ಬೆಳಕು ಸೌಲಭ್ಯ

News Desk Chitradurga News
Last updated: 12 September 2025 19:59
News Desk Chitradurga News
7 months ago
Share
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ
SHARE

CHITRADURGA NEWS | 12 SEPTEMBER 2025

ಚಿತ್ರದುರ್ಗ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಚಿತ್ರದುರ್ಗದ ಕೋಟೆಯಲ್ಲಿ 28.40 ಕೋಟಿ ರೂ. ವೆಚ್ಚದಲ್ಲಿ ಧ್ವನಿ ಬೆಳಕು ವ್ಯವಸ್ಥೆ, ಕೋಟೆಯಲ್ಲಿ ಪಾದಚಾರಿ ಮಾರ್ಗ ನಿರ್ಮಾಣ ಹಾಗೂ ವಿವಿಧ ಮೂಲ ಸೌಕರ್ಯ ಒದಗಿಸಿ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.

ಇದನ್ನೂ ಓದಿ: ಎತ್ತಿನ ಗಾಡಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಬಸ್‌ | ಅಪಾಯದಿಂದ ಪಾರಾದ ಪ್ರಯಾಣಿಕರು

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋಟೆಯ ನಾಡು ಚಿತ್ರದುರ್ಗದ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಯನ್ನು ಇನ್ನಷ್ಟು ಆಕರ್ಷಕವಾಗಿಸಿ, ಇಲ್ಲಿನ ಇತಿಹಾಸ ಕುರಿತು ವ್ಯಾಪಕ ಪ್ರಚಾರ ನೀಡುವ ನಿಟ್ಟಿನಲ್ಲಿ ಕೋಟೆಯಲ್ಲಿ ಧ್ವನಿ ಮತ್ತು ಬೆಳಕಿನ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೆ ಸಿದ್ಧತೆ ಮಾಡಿಕೊಳ್ಳಲಾಗಿದೆ.  

ಇದಕ್ಕೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಅನುಮತಿ ಪಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕೂಡ ಕ್ರಮ ವಹಿಸಿದ್ದಾರೆ. ಇದರ ಜೊತೆಗೆ ಕೋಟೆಯಲ್ಲಿ ಪಾದಚಾರಿ ಮಾರ್ಗ ನಿರ್ಮಾಣ ಹಾಗೂ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.  

ಇದನ್ನೂ ಓದಿ: ಶೋಭಾಯಾತ್ರೆಗೆ ಭರದ ಸಿದ್ಧತೆ | ಝಗಮಗಿಸುತ್ತಿದೆ ಕೋಟೆನಾಡು ಚಿತ್ರದುರ್ಗ

ಹೊಸದುರ್ಗ ತಾಲ್ಲೂಕಿನ ಗವಿರಂಗಾಪುರ ಹಾಗೂ ಹಾಲುರಾಮೇಶ್ವರ ಕ್ಷೇತ್ರ ಅಭಿವೃದ್ದಿಗೂ ಅಂದಾಜು 2 ಕೋಟಿ ರೂ. ಅನುದಾನ ಒದಗಿಸಲಾಗಿದೆ. ರಾಜ್ಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ಪ್ರಮುಖ ವೀರಗಲ್ಲು, ಮಾಸ್ತಿಗಲ್ಲು ಹಾಗೂ ಸ್ಮಾರಕಗಳ ರಕ್ಷಣೆಗೆ ಕೂಡ ಯೋಜನೆ ರೂಪಿಸಬೇಕು ಎಂದರು.

ಚಿತ್ರದುರ್ಗ ಕೋಟೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಕೆಫೆಟೇರಿಯಾ ನಿರ್ಮಿಸಿ ಸೌಲಭ್ಯ ಒದಗಿಸುವುದು, ರಾಜ್ಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವತಿಯಿಂದ ವಸ್ತು ಸಂಗ್ರಹಾಲಯ ನಿರ್ಮಾಣ ಹಾಗೂ ಕೋಟೆಯೊಳಗಡೆ ಪ್ರಮುಖ ತಾಣಗಳಿಗೆ ಪ್ರವಾಸಿಗರು ತಲುಪಲು ಸಮಸ್ಯೆ ಇರುವ ಸ್ಥಳಗಳಲ್ಲಿ ರೈಲಿಂಗ್ಸ್ ಅಳವಡಿಸುವುದು ಸೇರಿದಂತೆ 05 ಕೋಟಿ ರೂ. ಗಳ ವೆಚ್ಚದ ವಿವಿಧ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಒತ್ತುವರಿ ತೆರವಿಗೆ ಕ್ರಮ :

ಚಿತ್ರದುರ್ಗದ ಕೋಟೆಗೆ ಪ್ರತಿ ತಿಂಗಳು ಸುಮಾರು 35 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರವಾಸಿಗರು ತಮ್ಮ ವಾಹನಗಳಲ್ಲಿ ತಲುಪಲು ಸೂಕ್ತ ರಸ್ತೆ ಇಲ್ಲ, ಇರುವ ರಸ್ತೆಗಳೂ ಕೂಡ ಒತ್ತುವರಿಯ ಕಾರಣದಿಂದಾಗಿ ಕಿರಿದಾಗಿದೆ, ಹೀಗಾಗಿ ವಾಹನಗಳ ಮೂಲಕ ಕೋಟೆಗೆ ತೆರಳುವುದು ತ್ರಾಸದಾಯಕವಾಗಿದೆ.  

ಕೋಟೆಯ ಮುಂಭಾಗದಲ್ಲಿಯೂ ವಾಹನಗಳನ್ನು ನಿಲ್ಲಿಸಲು ತೀವ್ರ ಸಮಸ್ಯೆಯಾಗುತ್ತಿದೆ. ಹೀಗಾಗಿ ಚಿತ್ರದುರ್ಗ ನಗರದ ಗಾಂಧಿ ವೃತ್ತದಿಂದ ಕೋಟೆಗೆ ತೆರಳುವ ಮಾರ್ಗಗಳ ರಸ್ತೆ ಹಾಗೂ ಕೋಟೆಯ ಸುತ್ತಮುತ್ತ ಅಕ್ರಮವಾಗಿ ಆಗಿರುವ ಒತ್ತುವರಿ ತೆರವುಗೊಳಿಸುವ ನಿಟ್ಟಿನಲ್ಲಿ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶೀಘ್ರ ಸಭೆ ನಿಗದಿಪಡಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. 

ಇದನ್ನೂ ಓದಿ: ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಯಾತ್ರೆ ನಾಳೆ | ಸಂಸದ ಯದುವೀರ್ ಉದ್ಘಾಟನೆ

ಈ ಹಿಂದೆ ಎನ್‍ಹೆಚ್-4 ರಸ್ತೆಯಿಂದ, ಕೋಟೆಗೆ ತಲುಪುವ ರೀತಿ ಸುಮಾರು 3.5 ಕಿ.ಮೀ. ರಿಂಗ್ ರಸ್ತೆ ನಿರ್ಮಾಣ ಕುರಿತಂತೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪ್ರಸ್ತಾವನೆ ಸಲ್ಲಿಕೆಯಾಗಿ, ಲೋಕೋಪಯೋಗಿ ಇಲಾಖೆಯು ಯೋಜನೆ ಜಾರಿ ಕುರಿತಂತೆ ಆಸಕ್ತಿ ತೋರಲಿಲ್ಲ ಎಂಬುದಾಗಿ ತಿಳಿದುಬಂದಿದೆ, ಈ ಬಗ್ಗೆಯೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕೋಟೆ ಸ್ವಚ್ಛತೆಗೆ ವಿಶೇಷ ಅಭಿಯಾನ :

ಚಿತ್ರದುರ್ಗದ ಕೋಟೆ ಆವರಣ ಹಾಗೂ ಒಳಗಡೆಯ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿದೆ, ಮೂಲ ಸೌಕರ್ಯಗಳ ಕೊರತೆ ಕೂಡ ಇದೆ ಎಂಬುದಾಗಿ ಬಹಳಷ್ಟು ದೂರುಗಳು ಕೇಳಿಬರುತ್ತಿದೆ. ಆದರೆ ಈ ನಿಟ್ಟಿನಲ್ಲಿ ಕೋಟೆಯ ಆವರಣ ನಿರ್ವಹಣೆ ಮಾಡುತ್ತಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಯಾವುದೇ ಕ್ರಮ ವಹಿಸುತ್ತಿಲ್ಲದಿರುವುದು ಬೇಸರದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.  

ಇದಕ್ಕೆ ಪ್ರತಿಕ್ರಿಯಿಸಿದ ಎಎಸ್‍ಐ ನ ಅಧಿಕಾರಿಗಳು, ಸಿಬ್ಬಂದಿ ಮತ್ತು ಅನುದಾನದ ಕೊರತೆಯಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಸ್ವಚ್ಛತೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಸಿಬ್ಬಂದಿ ನಿಯೋಜನೆಗಾಗಿ ಅನುಮತಿ ನೀಡುವಂತೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.  

ಇದನ್ನೂ ಓದಿ: ನಗರಸಭೆ ನೂತನ ಅಧ್ಯಕ್ಷರಾಗಿ ಅನಿತಾ ರಮೇಶ್ ಆಯ್ಕೆ

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಅನುದಾನದ ಕೊರತೆ ಇದ್ದಲ್ಲಿ, ಡಿಎಂಎಫ್ ನಿಧಿಯಿಂದ ಅನುದಾನ ಒದಗಿಸಲಾಗುವುದು. ನಗರಸಭೆ, ಪ್ರವಾಸೋದ್ಯಮ ಇಲಾಖೆ, ರಾಜ್ಯ ಮತ್ತು ಕೇಂದ್ರದ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆ, ಎನ್‍ಎಸ್‍ಎಸ್ ಘಟಕಗಳು, ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕೊಟೆಯ ಆವರಣ ಮತ್ತು ಒಳಾಂಗಣದ ಸ್ವಚ್ಛತೆಗೆ ವಿಶೇಷ ಅಭಿಯಾನ ಕೈಗೊಳ್ಳಲು ಸಮನ್ವಯ ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಮತ್ತು ಎಎಸ್‍ಐ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಮಾರಕ ದತ್ತು ಸ್ವೀಕಾರ ಯೋಜನೆ :

ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಸ್ಮಾರಕ ದತ್ತು ಸ್ವೀಕಾರ ಯೋಜನೆಯನ್ನು ರೂಪಿಸಿ, ಜಾರಿಗೊಳಿಸಿದ್ದು, ಈ ಯೋಜನೆಯಡಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವ್ಯಾಪ್ತಿಗೆ ಬರುವ ಸ್ಮಾರಕಗಳನ್ನು ಹೊರತುಪಡಿಸಿ, ರಾಜ್ಯದ ವಿವಿಧ ಧಾರ್ಮಿಕ ಕ್ಷೇತ್ರಗಳು, ರಾಜ್ಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವ್ಯಾಪ್ತಿಗೆ ಬರುವ ಸ್ಮಾರಕಗಳನ್ನು ಖಾಸಗಿ ಸಂಸ್ಥೆಗಳು, ಕಾರ್ಖಾನೆಗಳು, ಕಂಪನಿಗಳು ತಮ್ಮ ಸಿಎಸ್‍ಆರ್ ಚಟುವಟಿಕೆಗಳಡಿ ದತ್ತು ಪಡೆದು, ಅಲ್ಲಿ ತಂಗುದಾಣ, ಶೌಚಾಲಯ, ಕೆಫೆಟೇರಿಯಾ, ಪಾರ್ಕ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬಹುದು, ಅಲ್ಲದೆ, ಈ ಪ್ರದೇಶಗಳಲ್ಲಿ ತಮ್ಮ ಸಂಸ್ಥೆಯ ಹೆಸರು, ಜಾಹೀರಾತು ಪ್ರದರ್ಶಿಸಲು ಕೂಡ ಅವಕಾಶ ಇರುತ್ತದೆ.  

ಈ ಬಗ್ಗೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಯಾವುದೇ ಪ್ರಚಾರ ನೀಡದಿರುವ ಕಾರಣ, ಸಂಸ್ಥೆಗಳಿಗೆ ಮಾಹಿತಿ ತಿಳಿದಿಲ್ಲ. ಜಿಲ್ಲೆಯಲ್ಲಿ ಈ ವರ್ಷ ಕನಿಷ್ಟ 05 ಪ್ರವಾಸಿ ತಾಣ, ಸ್ಮಾರಕ ಪ್ರದೇಶಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡಿ, ಅಭಿವೃದ್ಧಿಪಡಿಸುವ ಕಾರ್ಯ ಮಾಡಬೇಕು ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

04 ಕೆರೆಗಳಲ್ಲಿ ಜಲಕ್ರೀಡೆಗೆ ಅನುಮತಿ :

ಚಿತ್ರದುರ್ಗ ತಾಲ್ಲೂಕಿನ ಚಂದ್ರವಳ್ಳಿ ಕೆರೆ, ಮಲ್ಲಾಪುರ ಕೆರೆ, ಚಳ್ಳಕೆರೆ ತಾಲ್ಲೂಕಿನ ಕೆರೆಕಲ್ ಕೆರೆ, ಮೊಳಕಾಲ್ಮೂರು ತಾಲ್ಲೂಕು ರಂಗಯ್ಯನದುರ್ಗ ದಲ್ಲಿ ಸಾಹಸ ಪ್ರವಾಸೋದ್ಯಮ ಹಾಗೂ ಜಲಕ್ರೀಡೆಗಳನ್ನು ಕೈಗೊಳ್ಳಲು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಬಿವೃದ್ಧಿ ಪ್ರಾಧಿಕಾರವು ಕಳೆದ ವರ್ಷವೇ ಅನುಮತಿ ನೀಡಿದೆ.  

ಇದನ್ನೂ ಓದಿ: ಗ್ರಾಮಾಂತರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಕೆ.ನಾಗರಾಜ್ ಆದೇಶ

ಚಂದ್ರವಳ್ಳಿ ಕೆರೆಯಲ್ಲಿ ಜಲಸಾಹಸ ಕ್ರೀಡೆಗಳಾದ ಕಯಾಕಿಂಗ್, ಕನೋಯಿಂಗ್, ವಿಂಡ್ ಸರ್ಫಿಂಗ್, ಜಿಟ್ ಸ್ಕೀಯಿಂಗ್ ವಾಟರ್ ಜಾರ್ಬಿಂಗ್ ಹಾಗೂ ಬೋಟಿಂಗ್ ಕೈಗೊಳ್ಳಲು ಸಣ್ಣ ನೀರಾವರಿ ಇಲಾಖೆ ಹಾಗೂ ನಗರಸಭೆಯು ನಿರಾಪೇಕ್ಷಣ ಪತ್ರ ನೀಡಿದೆ ಎಂದು ಪ್ರವಾಸೋದ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಶೀಘ್ರ ಇದನ್ನು ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಭದ್ರಾ ಮೆಲ್ದಂಡೆ ಯೋಜನೆ ಕಾರ್ಯಪಾಲಕ ಅಭಿಯಂತರ ಚಂದ್ರಪ್ಪ ಬಾರಿಕರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಪ್ರವಾಸೋದ್ಯಮ, ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆ, ರಾಜ್ಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga FortChitradurga newsDC VenkateshDevelopmentfacilitiesLightSoundಅಭಿವೃದ್ಧಿಚಿತ್ರದುರ್ಗಚಿತ್ರದುರ್ಗ ಕೋಟೆಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್ಧ್ವನಿಬೆಳಕುಸೌಲಭ್ಯ
Share This Article
Facebook Email Print
Previous Article ಗ್ರಾಮಾಂತರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಕೆ.ನಾಗರಾಜ್ ಆದೇಶ
Next Article ಕನ್ನಡ ಜಾಗೃತಿ ಸಮಿತಿ | ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ, ಸಂಗೇನಹಳ್ಳಿ ಅಶೋಕ್‌ಕುಮಾರ್‌ ಸೇರಿ ಐವರ ನೇಮಕ
Leave a Comment

Leave a Reply Cancel reply

Your email address will not be published. Required fields are marked *

Image of fish
ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up