
CHITRADURGA NEWS | 01 SEPTEMBER 2025
ಚಿತ್ರದುರ್ಗ: ಹಿರಿಯೂರು ನಗರಕ್ಕೆ ಒಳ ಬರುವ ಮತ್ತು ಹೊರ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಅನಧಿಕೃತ ಅಂಗಡಿಗಳು ಇರುವುದರಿಂದ ಲಾರಿಗಳನ್ನು ಪಾರ್ಕಿಂಗ್ ಮಾಡುತ್ತಿರುವುದರಿಂದ ವಾಹನಗಳ ಅಡಚಣೆ ಉಂಟಾಗುತ್ತಿದ್ದು, ಈ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಇದನ್ನೂ ಓದಿ: ಗಾಂಧಿ ವೃತ್ತದಲ್ಲಿ ಬಹು ಮಹಡಿ ಪಾರ್ಕಿಂಗ್ ಕಟ್ಟಡ ನಿರ್ಮಾಣಕ್ಕೆ ಡಿಪಿಆರ್
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅದೇ ರೀತಿ ಜಿಲ್ಲಾ ವ್ಯಾಪ್ತಿಯೊಳಗಿನ ರಾಷ್ಟ್ರೀಯ ಹೆದ್ದಾರಿಯ ಟೋಲ್ ಸಂಗ್ರಹಣಾ ಸ್ಥಳಗಳ ಎರಡೂ ಬದಿಗಳಲ್ಲಿ ಅನಧಿಕೃತವಾಗಿ ಗೂಡಂಗಡಿಗಳು ನಿರ್ಮಾಣಗೊಂಡಿದ್ದು, ಇಲ್ಲಿ ಕೂಡ ವಾಹನಗಳು ಪಾರ್ಕಿಂಗ್ ಮಾಡಿ, ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡುತ್ತಿವೆ.
ಈ ಅಂಗಡಿಗಳಿಗೆ ಯಾವುದೇ ಅನುಮತಿ ಇಲ್ಲ ಹೀಗಾಗಿ ಕೂಡಲೆ ಇಂತಹ ಅಂಗಡಿಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ರಸ್ತೆ ಬದಿಯಲ್ಲಿ ನಿಲ್ಲಿಸುತ್ತಿರುವ ಲಾರಿಗಳು ಪಾರ್ಕಿಂಗ್ ಮಾಡದಂತೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ಉಪ ಸಮಿತಿ ರಚನೆ ಮಾಡಿ, ಪಾರ್ಕಿಂಗ್ ಮಾಡುತ್ತಿರುವ ಲಾರಿಗಳನ್ನು ವಶಪಡಿಸಿಕೊಳ್ಳುವುದು, ಅನಧಿಕೃತ ಅಂಗಡಿಗಳ ಲೈಸೆನ್ಸ್ ಪರಿಶೀಲಿಸಿ, ನೀರು ಮತ್ತು ವಿದ್ಯುತ್ ಸರಬರಾಜು ತಡೆಹಿಡಿಯುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ: ಜೆಎಂಐಟಿ, ಕೆಳಗೋಟೆ ಬಳಿ ಪಾದಚಾರಿ ಸ್ಕೈವಾಕ್ ನಿರ್ಮಿಸಿ | ಡಿಸಿ ವೆಂಕಟೇಶ್
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
