
CHITRADURGA NEWS | 03 December 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಪ್ರಮುಖ ರಾಜ್ಯ ಹೆದ್ದಾರಿಗಳು ಹಾದುಹೋಗಿದ್ದು, ಪದೇ ಪದೇ ಅಪಘಾತ ಸಂಭವಿಸುವ ಸ್ಥಳಗಳನ್ನು ಬ್ಲಾಕ್ ಸ್ಪಾಟ್ ಎಂದು ಗುರುತಿಸಿ, ವೈಜ್ಞಾನಿಕವಾಗಿ ಸಮಸ್ಯೆ ನಿವಾರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ಈ ಹಿಂದಿನ ಹಲವು ಸಭೆಗಳಲ್ಲಿ ಸೂಚನೆ ನೀಡಿದ್ದರೂ, ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ.
ಅಪಘಾತಗಳ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆ ನಾಲ್ಕನೆ ಸ್ಥಾನದಲ್ಲಿದೆ. ಈ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿ, ಅಪಘಾತಗಳ ಸಂಖ್ಯೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರ
ಈ ಕುರಿತಂತೆ ಹಲವು ಬಾರಿ ಸಭೆಗಳಲ್ಲಿ ಸಲಹೆ, ಸೂಚನೆಗಳನ್ನು ನೀಡಿದರೂ ಪಾಲನೆ ಮಾಡುತ್ತಿಲ್ಲ. ಮತ್ತೆ ಸಭೆ ಸೇರಿದಾಗಲೇ ಈ ಬಗ್ಗೆ ಮಾತನಾಡುತ್ತೀರಿ. ಸಭೆಯಲ್ಲಿ ನಾವೇನು ಭಜನೆ ಮಾಡಲು ಸೇರುತ್ತೇವೆಯೇ ಎಂದು ಅಧಿಕಾರಿಗಳ ನಡೆಗೆ ತೀವ್ರ ಬೇಸರ ಹೊರಹಾಕಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು,
ಅಪಘಾತಗಳು ಸಂಭವಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುವಂತಹ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಬೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಸೇರಿದಂತೆ ಆಯಾ ಅಧಿಕಾರಿಗಳನ್ನು ಕೂಡ ಪ್ರತಿವಾದಿಗಳನ್ನಾಗಿ ಮಾಡಿ ಎಫ್‍ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
