
CHITRADURGA NEWS | 25 SEPTEMBER 2024
ಚಿತ್ರದುರ್ಗ: ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ (Award) ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ಇದೇ ವೇಳೆ ಈ ಹಿಂದೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಸದ್ಯ ಧಾರವಾಡ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ದಿವ್ಯಪ್ರಭು ಜಿ.ಆರ್.ಜೆ ಅವರನ್ನೂ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿಯಾಗಿ ಆಯ್ಕೆ ಆಗಿದ್ದಾರೆ.
ಇದನ್ನೂ ಓದಿ: ಮುತ್ತುಗದೂರು ಕೆರೆಗೆ ಹರಿದ ನೀರು | ಸಿರಿಗೆರೆ ಶ್ರೀಗಳಿಂದ ಕೆರೆ ವೀಕ್ಷಣೆ
ರಾಜ್ಯ ಕಂದಾಯ ಆಯುಕ್ತಾಲಯ ಸೆ.25 ರಾತ್ರಿ ಪ್ರಶಸ್ತಿ ಪುರಸ್ಕøತರ ಪಟ್ಟಿ ಪ್ರಕಟಿಸಿದೆ. ಸೆ. 27 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಜರುಗಲಿದೆ.

ಈ ಹಿಂದೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಿದ್ದ, ಸದ್ಯ ಹಾಸನ ಜಿಲ್ಲಾಧಿಕಾರಿ ಆಗಿರುವ ಸಿ.ಸತ್ಯಭಾಮಾ ಅವರೂ ವರ್ಷದ ಅತ್ಯುತ್ತಮ ಕಂದಾಯಾಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಾಯಿಸಿ ಚಿತ್ರದುರ್ಗ ಬಿಜೆಪಿಯಿಂದ ಪ್ರತಿಭಟನೆ
ಇವರೊಟ್ಟಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರೂ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
