Connect with us

    ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

    DC Venkatesh visit VV sagara

    ಮುಖ್ಯ ಸುದ್ದಿ

    ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 07 JANUARY 2025

    ಚಿತ್ರದುರ್ಗ: ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ಜಿಲ್ಲೆಗೆ ಆಗಮಿಸಿ ಭರ್ತಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

    ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ 129.80

    ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಮಂಗಳವಾರ ವಿವಿ ಸಾಗರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

    ವಾಣಿವಿಲಾಸ ಸಾಗರ ಜಲಾಶಯಕ್ಕೆ ನಿತ್ಯ ಭದ್ರಾದಿಂದ 693 ಕ್ಯೂಸೆಕ್ ನೀರು ಒಳಹರಿವಿದ್ದು, ಮಂಗಳವಾರದಂದು ಜಲಾಶಯದ ನೀರಿನ ಮಟ್ಟ 129.80 ಅಡಿಗೆ ತಲುಪಿದೆ.

    ಇದನ್ನೂ ಓದಿ: ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ

    ಹೀಗಾಗಿ ನೀರಿನ ಮಟ್ಟ ಜಲಾಶಯದ ಗರಿಷ್ಟ ಮಟ್ಟ 130 ಅಡಿಗೆ ತಲುಪಿ, ಹೆಚ್ಚುವರಿ ನೀರು ಕೋಡಿ ಮೂಲಕ ಹರಿದುಹೋಗಲಿದೆ.

    ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿರುವುದು ಇಡೀ ಜಿಲ್ಲೆಗೆ ಸಂತಸದ ಕ್ಷಣವಾಗಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಶೀಘ್ರವೇ ಜಿಲ್ಲೆಗೆ ಆಗಮಿಸಿ, ಭರ್ತಿಯಾಗಿರುವ ವಿ.ವಿ.ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.

    ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ನೇರ ನೇಮಕಾತಿ ಸಂದರ್ಶನ ಜ.10ಕ್ಕೆ

    ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಗಳು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು ಕೂಡ ಈ ಕ್ಷಣಕ್ಕೆ ಕಾತರರಾಗಿದ್ದು, ಬಾಗಿನ ಅರ್ಪಣೆ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಒ ಸೋಮಶೇಖರ್ ಮಂಗಳವಾರ ವಿವಿ ಸಾಗರ ಜಲಾಶಯ ಪ್ರದೇಶಕ್ಕೆ ಭೇಟಿ ನೀಡಿ, ಕೋಡಿ ಬೀಳುವ ಸ್ಥಳ, ಬಾಗಿನ ಅರ್ಪಣೆಗೆ ಸೂಕ್ತ ಸ್ಥಳ ನಿಗದಿಪಡಿಸುವುದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಆಗಮನಕ್ಕೆ ಸೂಕ್ತ ಹೆಲಿಪ್ಯಾಡ್ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಿದರು.

    ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

    ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯಪಾಲಕ ಅಭಿಯಂತರ ಬಾರಿಕರ ಚಂದ್ರಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರಯ್ಯ, ಸಹಾಯಕ ಅಭಿಯಂತರ ವೆಂಕಟೇಶ್, ತಹಸಿಲ್ದಾರ್ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

    2 Comments

    2 Comments

    1. Viswanath

      7 January 2025 at 19:59

      ಸಂಬಂಧಪಟ್ಟ ವರಿಗೆ,
      ದಯವಿಟ್ಟು ಶ್ರೀ ಯದುವೀರ್ M P ಮತ್ತು
      ಮಹಾರಾಜ ವಂಶಸ್ಥರು ಅವರನ್ನು ಬಾಗಿನ ಅರ್ಪಿಸಲಿಕ್ಕೆ ಕರೆಯುವುದು ಸೂಕ್ತ

    2. Thippeswamy S

      8 January 2025 at 05:07

      ಇಡೀ ಜಿಲ್ಲೆಗೆ ಸಂತೋಷ ಅಲ್ಲ.
      ಹೊಸದುರ್ಗ ತಾಲೂಕಿನ ಹಿನ್ನೀರಿನ ಜನ ನೋವಿನಲ್ಲಿ ಇದ್ದಾರೆ.

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top