Connect with us

    Hospitals; ನೊಂದಣಿ ಇಲ್ಲದ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷ್ಯಣ್ಯ ಕ್ರಮ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ

    Dc meating with kpme comitee

    ಮುಖ್ಯ ಸುದ್ದಿ

    Hospitals; ನೊಂದಣಿ ಇಲ್ಲದ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷ್ಯಣ್ಯ ಕ್ರಮ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 25 JULY 2024

    ಚಿತ್ರದುರ್ಗ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ (KPME) ಕಾಯ್ದೆ ಅನ್ವಯ ಖಾಸಗಿ ಕ್ಲಿನಿಕ್, ಆಸ್ಪತ್ರೆ (Hospitals), ನರ್ಸಿಂಗ್ ಹೋಂ, ಲ್ಯಾಬ್‌ಗಳು ನೋಂದಣಿ ಮಾಡಿ, ಪರವಾನಿಗೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಇಲ್ಲದೆ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಕರ್ನಾಟಕ ಖಾಸಗಿ ಆಸ್ಪತ್ರೆಗಳ ನೊಂದಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

    ಇದನ್ನೂ ಓದಿ:  ಜೀವನ ನಿರ್ವಹಣೆ ಕಷ್ಟ ಆಗಿದೆ | ಸರ್ಕಾರಿ ಕೆಲಸ ನೀಡಿ | ರೇಣುಕಾಸ್ವಾಮಿ ಪತ್ನಿ ಮನವಿ

    ಆಯುಷ್ ಕ್ಲಿನಿಕ್‌ಗೆ ಪರವಾನಿಗೆ ಪಡೆದು, ಆಲೋಪತಿ ಚಿಕಿತ್ಸೆ ನೀಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ನೋಂದಣಿಯಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

    ಪರವಾನಿಗೆ ಹಾಗೂ ಚಿಕಿತ್ಸಾ ದರಪಟ್ಟಿ ಪದ್ರರ್ಶನ ಕಡ್ಡಾಯ:

    ಖಾಸಗಿ ಆಸ್ಪತ್ರೆ, ಕ್ಲಿನಿಕ್, ಲ್ಯಾಬೋರೇಟರಿ, ರಕ್ತ ನಿಧಿ ಕೇಂದ್ರಗಳ ಮುಂದೆ ಕೆ.ಪಿ.ಎಂ.ಇ ಪರವಾನಿಗೆ ಪ್ರಮಾಣ ಪತ್ರ ಹಾಗೂ ಚಿಕಿತ್ಸಾ ದರಪಟ್ಟಿಯನ್ನು ಕಡ್ಡಾಯವಾಗಿ ಫಲಕದಲ್ಲಿ ಪ್ರದರ್ಶನ ಮಾಡಬೇಕು.

    ಇದನ್ನೂ ಓದಿ: ಮಾಜಿ‌ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಜನ್ಮ ದಿನಾಚರಣೆ | ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು

    ಅಲೋಪತಿ ನೊಂದಣಿ ಪರವಾನಿಗೆ ಫಲಕವು ಆಕಾಶ ನೀಲಿ ಹಾಗೂ ಆರ್ಯುವೇದ ನೊಂದಣಿ ಪರವಾನಿಗೆ ಫಲಕವನ್ನು ತಿಳಿ ಹಸಿರು ಬಣ್ಣದಲ್ಲಿಯೇ ಹಾಕಬೇಕು.

    ಖಾಸಗಿ ವೈದ್ಯಕೀಯ ಸಂಸ್ಥೆಗಳ ಪ್ರವೇಶ, ಪರಿಶೀಲನೆಗಾಗಿ ನೇಮಿಸಲಾದ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ, KPME ACT ಅನುಷ್ಠಾನದ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು.

    ಇದನ್ನೂ ಓದಿ: ಲಾರಿ ಡಿಕ್ಕಿ ಹೆದ್ದಾರಿ ತಡೆಗೋಡೆ ಕುಸಿತ | ಚಾಲಕ‌ ಮೃತ

    ಸರ್ಕಾರಿ ಆಸ್ಪತ್ರೆಗಳ 200 ಮೀಟರ್ ಅಂತರದಲ್ಲಿ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳಿಗೆ ಅನುಮತಿ ನೀಡುವಂತಿಲ್ಲ.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸರ್ಕಾರಿ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳ ಸ್ಥಳ ಪರಿಶೀಲನೆ ಮಾಡಿ, ನಿಯಮ ಉಲಂಘನೆಯಾಗಿದ್ದರೆ ಅಂತಹ ಪ್ರಯೋಗಾಲಯಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top