CHITRADURGA NEWS | 05 JULY 2026
ಚಿತ್ರದುರ್ಗ: ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಮುನ್ನೆಚ್ಚರಿಕೆಯಾಗಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: ಬರ ನಿರ್ವಹಣೆಗೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ಬಿಡುಗಡೆ | ಡಾ.ಜಿ.ಪರಮೇಶ್ವರ್
ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿ, ಜಿಲ್ಲೆಗೆ ಈ ಮುಂಗಾರು ಹಂಗಾಮಿಗೆ ಒಟ್ಟು 74,000 ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆಯಿದ್ದು, ಸದ್ಯ 48,000 ಮೆಟ್ರಿಕ್ ಟನ್ ಲಭ್ಯವಿದೆ. ಇದರಲ್ಲಿ ಈಗಾಗಲೇ 20,000 ಮೆಟ್ರಿಕ್ ಟನ್ ವಿತರಣೆ ಮಾಡಲಾಗಿದ್ದು, ಇನ್ನು 28,000 ಮೆಟ್ರಿಕ್ ಟನ್ ದಾಸ್ತಾನಿದೆ ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಇನ್ನುಳಿದ ರಸಗೊಬ್ಬರವನ್ನು ಶೀಘ್ರದಲ್ಲೇ ತರಿಸಿಕೊಂಡು ದಾಸ್ತಾನು ಮಾಡಿಕೊಳ್ಳಬೇಕು. ಒಂದು ವೇಳೆ ಹಠಾತ್ ಮಳೆ ಬಂದಲ್ಲಿ ರೈತರು ಏಕಾಏಕಿ ರಸಗೊಬ್ಬರ ಮತ್ತು ಬಿತ್ತನೆ ಬೀಜಕ್ಕಾಗಿ ಆಹಾಕಾರ ಮಾಡಬಾರದು.
ಹಾವೇರಿ ಜಿಲ್ಲೆಯಲ್ಲಿ ಆದಂತಹ ಪರಿಸ್ಥಿತಿ ಇಲ್ಲಿ ಮರುಕಳಿಸಬಾರದು. ಆದ್ದರಿಂದ ಮುನ್ನೆಚ್ಚರಿಕೆಯಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ರಸಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಆಪ್ ಮೂಲಕ ನೊಂದಣಿ ಮಾಡಿಕೊಂಡು ವಿತರಿಸುವ ನಿಯಮದಿಂದ ರೈತರಿಗೆ ತೊಂದರೆಯಾಗುತ್ತಿದ್ದು, ವಿನಾಯಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದರು.
ಇದನ್ನೂ ಓದಿ: ಜಿಲ್ಲೆಯಲ್ಲಿ ಗೋಶಾಲೆ ಮತ್ತು ಮೇವು ಬ್ಯಾಂಕ್‌ಗಳ ಸ್ಥಾಪನೆ
ಇದಕ್ಕೆ ಸ್ಪಂದಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸ್ಥಳೀಯ ಪರಿಸ್ಥಿತಿಯನ್ನು ನೋಡಿಕೊಂಡು ಪ್ರಾಯೋಗಿಕವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಆದರೆ ಈ ಪ್ರಕ್ರಿಯೆಯಲ್ಲಿ ಯಾವುದೇ ದುರುಪಯೋಗವಾಗಬಾರದು ಮತ್ತು ರೈತರಿಗೆ ತೊಂದರೆಯಾಗದಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಅವರು ಎಚ್ಚರಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
