
CHITRADURGA NEWS | 07 December 2025
ಚಿತ್ರದುರ್ಗ: ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು ನಿರ್ದೇಶನ ಮಾಡಲು ರಾಷ್ಟ್ರ ಪ್ರಶಸ್ತಿ ಪುರಸ್ಕತ ಚಲನಚಿತ್ರ ನಿರ್ದೇಶಕರುಗಳಿಂದ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ | ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಆಕಾಶವಾಣಿ ಹಾಗೂ ದೂರದರ್ಶನದ ದಕ್ಷಿಣ ವಲಯದ ಉಪ ಮಹಾನಿರ್ದೇಶಕ ಭಾಗ್ಯವಾನ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 14 ಕಡೆಯ ದಿನವಾಗಿದೆ. ನಿರ್ದೇಶಕರು, ಧಾರಾವಾಹಿ ವಿಭಾಗ ದೂರದರ್ಶನ ಕೇಂದ್ರ ಜೆ.ಸಿ. ನಗರ, ಬೆಂಗಳೂರು 560006 ಇಲ್ಲಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ದೂರದರ್ಶನ ಚಂದನ ವಾಹಿನಿಯಲ್ಲಿ ಫೋಕ್ ರಿಯಾಲಿಟಿ ಶೋ (ಹಾಡು), ಜನಪದ ಗೀತೆಗಳನ್ನು ಹಾಡುವ ಪ್ರತಿಭೆವುಳ್ಳ, 18 ವರ್ಷಕ್ಕೆ ಮೇಲ್ಪಟ್ಟ ಆಸಕ್ತ ಹಾಡುಹಕ್ಕಿಗಳು ಡಿ.20ರಂದು ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ನಡೆಯಲಿರುವ ಮೆಗಾ ಆಡಿಷನ್ನಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ: ಬೀದಿ ನಾಯಿ ನಿಯಂತ್ರಣಕ್ಕೆ ಚಿತ್ರದುರ್ಗ ನಗರಸಭೆ ಸೂಚನೆ
ಅಭ್ಯರ್ಥಿಗಳು ತಮ್ಮ ಸ್ವವಿವರಗಳುಳ್ಳ ಅರ್ಜಿಯೊಂದಿಗೆ ಆಗಮಿಸಿ ಆಡಿಷನ್ಸ್ ದಿನದಂದೇ ಕೇಂದ್ರದಲ್ಲೇ ತಮ್ಮ ಹೆಸರನ್ನು ನೋಂದಯಿಸಿಕೊಳ್ಳಬಹುದು. ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದ ವಿಜೇತರಿಗೆ ಆಕರ್ಷಕ ಬಹುಮಾನಗಳಿವೆ ಎಂದು ಭಾಗ್ಯವಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
