ಮುಖ್ಯ ಸುದ್ದಿ
SP office: ಉಪ್ಪರಿಗೇನಹಳ್ಳಿ ಮಹಿಳೆ ಕೊಲೆಗಾರರ ಬಂಧನಕ್ಕೆ ಗಡುವು | ನ.30 ರಿಂದ ಎಸ್ಪಿ ಕಚೇರಿ ಬಳಿ ಉಪವಾಸ ಸತ್ಯಾಗ್ರಹ | ಪ್ರಣವಾನಂದ ಶ್ರೀ
CHITRADURGA NEWS | 16 NOVEMBER 2024
ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮದಲ್ಲಿ ಈಡಿಗ ಸಮುದಾಯದ ಮಹಿಳೆಯ ಕೊಲೆಯಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಲು ನ.29ರವರೆಗೆ ಅಂತಿಮ ಗಡುವು ನೀಡುತ್ತೇವೆ. ಅಷ್ಟರಲ್ಲಿ ಬಂಧಿಸದಿದ್ದರೆ ನ.30 ರಿಂದ ಎಸ್ಪಿ ಕಚೇರಿ(SP office) ಎದುರು ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ ಎಂದು ರಾಷ್ಟ್ರೀಯ ಯ ಈಡಿಗ ಮಹಾಮಂಡಳದ ಅಧ್ಯಕ್ಷ ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಕ್ಲಿಕ್ ಮಾಡಿ ಓದಿ: ಶ್ರೀ ಅಯ್ಯಪ್ಪ ಸ್ವಾಮಿ ಬ್ರಹ್ಮೋತ್ಸವಕ್ಕೆ ಚಾಲನೆ | ಗಣ ಹೋಮ
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮೃತ ಮಹಿಳೆಯ ಮರಣೋತ್ತರ ಪರೀಕ್ಷಾ ವರದಿ ಹಾಗೂ ಎಫ್.ಎಸ್.ಎಲ್ ವರದಿಯನ್ನು ಶೀಘ್ರವಾಗಿ ತರಿಸಿಕೊಂಡು ತನಿಖೆಯನ್ನು ಚುರುಕಾಗಿ ನಡೆಸಬೇಕು ಎಂದು ಒತ್ತಾಯಿಸಿದರು.
ನಾನು ಕೊಲೆಯಾದ ಮಹಿಳೆ ಲತಾ ಅವರ ಮನೆಗೆ ಭೇಟಿ ನೀಡಿ ಬಂದಿದ್ದು, ಆ ಮಹಿಳೆ ತುಂಬಾ ಒಳ್ಳೆಯವರು, ಮೃದು ಸ್ವಭಾವದವರು. ಯಾರ ತಂಟೆಗೆ ಹೋಗದೆ ತನ್ನ ಪಾಡಿಗೆ ತಾವು ಇದ್ದವರು. ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.
ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಆದರೆ, ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ ಹತ್ಯೆಯ ಆರೋಪಿಗಳನ್ನು ಬಂಧಿಸಬೇಕು. ಈ ಸಂಬಂಧ ಗೃಹ ಸಚಿವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ನ್ಯಾಯಾಲಯದ ಮೊರೆ ಹೋಗಲು ವಕೀಲರ ಜೊತೆ ಚರ್ಚೆ ನಡೆಸುತ್ತೇವೆ ಎಂದರು.
ಕ್ಲಿಕ್ ಮಾಡಿ ಓದಿ: ಜಿಲ್ಲಾ ಮಟ್ಟದ ಯುವಜನೋತ್ಸವ | ಪೂರ್ವಭಾವಿ ಸಭೆ
ಸುದ್ದಿಗೋಷ್ಠಿಯಲ್ಲಿ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಜಿ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಎಸ್.ಮೋಹನ್‌ಕುಮಾರ್, ದಾವಣಗೆರೆ ಜಿಲ್ಲಾಧ್ಯಕ್ಷ ಪ್ರತಾಪ್, ಜಂಟಿ ಕಾರ್ಯದರ್ಶಿ ಮೋಹನ್, ಮಹಾಂತೇಶ್ ಇದ್ದರು.