
CHITRADURGA NEWS | 03 APRIL 2024
ಚಿತ್ರದುರ್ಗ: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ ಬುಧವಾರ ನಸುಕಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ.
ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ಕೆ.ಎನ್.ರಮೇಶ್ (33) ಮೃತ ಕೈದಿ. ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ ಈತ, 2021ರಿಂದ ಜೈಲಿನಲ್ಲಿದ್ದ.
ಇದನ್ನೂ ಓದಿ: ಅಡಿಕೆ ತೋಟದಲ್ಲಿ ಗಾಂಜಾ ಬೆಳೆ ಹತ್ತು ವರ್ಷ ಜೈಲು ಶಿಕ್ಷೆ
ಬುಧವಾರ ನಸುಕಿನಲ್ಲಿ ರಮೇಶ್‍ಗೆ ಎದೆನೋವು ಕಾಣಿಸಿಕೊಂಡಿದೆ. ಕಾರಾಗೃಹ ಸಿಬ್ಬಂದಿ ತಕ್ಷಣ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಾರ್ಗ ಮಾಧ್ಯದಲ್ಲಿಯೇ ಕೈದಿ ಮೃತಪಟ್ಟಿದ್ದಾನೆ. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
