
ಚಿತ್ರದುರ್ಗ ನ್ಯೂಸ್.ಕಾಂ: ರೈತ ನಾಯಕ ಟಿ.ನುಲೇನೂರು ಎಂ.ಶಂಕರಪ್ಪ ಅವರ ಕೈಲಾಸ ಶಿವಗಣಾರಾಧನೆ ಕಾರ್ಯಕ್ರಮ ಡಿಸೆಂಬರ್ 2 ಶನಿವಾರ ನಡೆಯಲಿದೆ.
ಎಂ.ಶಂಕರಪ್ಪ ಅವರ ಸ್ವಗ್ರಾಮ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಕೈಲಾಸ ಶಿವಗಣಾರಾಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನ.21 ರಂದು ಅನಾರೋಗ್ಯದಿಂದ ನಿಧನರಾದ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕ್ರಪ್ಪ ಅವರ ಕುಟುಂಬ ವರ್ಗ ಈ ಕಾರ್ಯ ನಡೆಸುತ್ತಿದೆ.

ಇದನ್ನೂ ಓದಿ: ನಿಧನವಾರ್ತೆ | ರೈತ ಮುಖಂಡ ಟಿ.ನುಲೇನೂರು ಎಂ.ಶಂಕ್ರಪ್ಪ ಇನ್ನಿಲ್ಲ | ಕಳಚಿತು ಚಿತ್ರದುರ್ಗದ ಹೋರಾಟದ ಕೊಂಡಿ
ಕಳೆದ ಮೂರು ದಶಕಗಳಿಂದ ಜಿಲ್ಲೆಯಲ್ಲಿ ಹೋರಾಟದಲ್ಲಿ ಅಗ್ರಪಂಕ್ತಿಯರಾಗಿ ಓಡಾಡಿಕೊಂಡಿದ್ದ ಎಂ.ಶಂಕರಪ್ಪ ಅವರ ಅಗಲಿಕೆಯಿಂದ ರೈತ ಸಂಘಕ್ಕೆ ಅಪಾರ ನಷ್ಟವಾಗಿದೆ. ರೈತ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಹೋರಾಟವನ್ನು ಕಟ್ಟಿ ಬೆಳೆಸಿದ್ದರು.
ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಅಧ್ಯಕ್ಷರಾಗಿದ್ದ ಅವರು, ಭದ್ರಾ ಮೇಲ್ದಂಡೆ ತ್ವರಿತ ಅನುಷ್ಠಾನಕ್ಕಾಗಿ ರೈತರ ಜೊತೆ ನಿರಂತರ ಶ್ರಮ ಹಾಕಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
