
CHITRADURGA NEWS | 26 AUGUST 2024
ಚಿತ್ರದುರ್ಗ: ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರು ಸಭೆ ನಡೆಸಿ, ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಯನ್ನು ಕರ್ನಾಟಕ ಸಹಕಾರ ಮಾರಾಟ ಮಂಡಳಿ ವತಿಯಿಂದ ಕ್ವಿಂಟಲ್‌ಗೆ ರೂ.8,682/-ರಂತೆ ಖರೀದಿ ಮಾಡಲಿದ್ದಾರೆ.
ಕ್ಲಿಕ್ ಮಾಡಿ ಓದಿ: City Council: ನಗರಸಭೆಯಲ್ಲಿ ಶಾಸಕ ವೀರೇಂದ್ರ ಪಪ್ಪಿ ಮೇಲುಗೈ | ಬಹುಮತವಿದ್ದು ಸೋತ ಬಿಜೆಪಿ | ಪಕ್ಷೇತರ ಸದಸ್ಯೆಗೆ ಒಲಿದ ಅಧ್ಯಕ್ಷ ಗಾದಿ
ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ಆದ್ದರಿಂದ ಜಿಲ್ಲೆಯಲ್ಲಿ ಹೆಸರುಕಾಳು ಬೆಳೆಗಾರರು ಪ್ರತಿ ಎಕೆರೆಗೆ 2 ಕ್ವಿಂಟಲ್ ಹಾಗೂ ಗರಿಷ್ಟ 10 ಕ್ವಿಂಟಲ್‌ವರೆಗೆ ಚಿತ್ರದುರ್ಗ ಹಾಗೂ ಹೊಸದುರ್ಗದಲ್ಲಿ ಪ್ರಾರಂಭಿಸುವ ಖರೀದಿ ಕೇಂದ್ರಕ್ಕೆ ಮಾರಾಟ ಮಾಡಬಹುದಾಗಿದೆ.
ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಚಿತ್ರದುರ್ಗ ಹಾಗೂ ಹೊಸದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
