
CHITRADURGA NEWS | 26 JUNE 2024
ಚಿತ್ರದುರ್ಗ: ನಗರದ ಬಿ.ಡಿ.ರಸ್ತೆಯನ್ನು ಆದ್ಯತೆ ಮೇರೆಗೆ ಅಗಲೀಕರಣ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲೋಕೋಪಯೋಗಿ ಹಾಗೂ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುತ್ತಿರುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ರಸ್ತೆ ಅಗಲೀಕರಣಕ್ಕೆ ಜಿಲ್ಲೆಯ ಎಲ್ಲ ಶಾಸಕರು ಒಮ್ಮತದ ತೀರ್ಮಾನ ತೆಗೆದುಕೊಂಡು ಸಮ್ಮತಿಸಿದರು.
‘ಸರ್ಕಾರಿ ವಿಜ್ಞಾನ ಕಾಲೇಜಿನಿಂದ ಕನಕ ವೃತ್ತದವರೆಗೆ ಒಂದೇ ರೀತಿಯಲ್ಲಿ ರಸ್ತೆ ಅಗಲೀಕರಣ ಆಗಬೇಕು. ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದರೆ ಅದನ್ನು ತೆರವುಗೊಳಿಸಿ ಮೊದಲು ತೆರವು ಮಾಡಿಸಿ’ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.
ಕ್ಲಿಕ್ ಮಾಡಿ ಓದಿ: ಸದ್ಯದಲ್ಲೇ ಅಡಿಕೆ ಬೆಳೆಗೆ ಸಬ್ಸಿಡಿ | ನರೇಗಾದಡಿ ಅಡಿಕೆ ನಾಟಿಗೆ ಚಿತ್ರದುರ್ಗ ರೈತರಿಗೂ ನೆರವು
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ‘ಎಸ್‌ಬಿಐ ವೃತ್ತದಿಂದ ಗಾಂಧಿ ವೃತ್ತಕ್ಕೆ ಹೋಗಲು ಅರ್ಧ ಗಂಟೆ ಬೇಕಾಗುತ್ತದೆ. ಜಿಲ್ಲಾ ಕೇಂದ್ರ ಎನ್ನುವಂತಿಲ್ಲ. ಚಿತ್ರದುರ್ಗಕ್ಕೆ ಬಂದವರು ಅಸಹ್ಯ ಪಟ್ಟುಕೊಳ್ಳುತ್ತಿದ್ದಾರೆ. ಹೊಳಲ್ಕೆರೆಯಲ್ಲಿ ಯಾರ ಮುಲಾಜಿಗೂ ಬಗ್ಗದೆ ರಸ್ತೆಗಳನ್ನು ಎಷ್ಟು ಅಗಲ ಮಾಡಿಸಿದ್ದೇವೆ ನೋಡಿ’ ಎಂದರು.

‘ಬ್ರಿಟೀಷ್ ಕಾಲದಲ್ಲಿ ಬಿ.ಡಿ.ರಸ್ತೆ ಮಧ್ಯದಿಂದ ಎರಡು ಕಡೆಗೆ ತಲಾ 120 ಅಡಿ ಅಗಲ ಇತ್ತು. ಆದರೆ, ಸರ್ಕಾರಿ ವಿಜ್ಞಾನ ಕಾಲೇಜಿನ ಬಳಿ ಒಂದು ರೀತಿ ಇದೆ, ಮುಂದೆ ಇನ್ನೊಂದು ರೀತಿ ಇದೆ’ ಎಂದು ಟೀಕಿಸಿದರು.
‘ಚಳ್ಳಕೆರೆ ಗೇಟ್‌ನಲ್ಲಿ ಸಾಕಷ್ಟು ವಾಹನಗಳು ಓಡಾಡುತ್ತವೆ. ನಗರ ಪ್ರವೇಶಿಸುವ ವಾಹನಗಳು, ಸರ್ವೀಸ್ ರಸ್ತೆಯಲ್ಲಿ ಬರುವ ವಾಹನಗಳು ಹೇಗೆ ಓಡಾಡಬೇಕು ಎನ್ನುವುದೇ ಗೊತ್ತಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವೈಜ್ಞಾನಿಕವಾಗಿ ಎರಡೂ ಬದಿಗೆ ವೃತ್ತ ಮಾಡಿಸಿ’ ಎಂದು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮಲ್ಲಿಕಾರ್ಜುನ್ ಅವರಿಗೆ ಸಚಿವರು ಸೂಚಿಸಿದರು.

‘ಚಿತ್ರದುರ್ಗ ನಗರ ಪ್ರವೇಶ, ಶಿವಮೊಗ್ಗ, ಹೊಸಪೇಟೆ, ಬೆಂಗಳೂರು, ದಾವಣಗೆರೆ ಸೇರಿದಂತೆ ಅನೇಕ ಕಡೆಗೆ ಇಲ್ಲಿ ಪ್ರತಿ ದಿನ ಕನಿಷ್ಟ 25 ಸಾವಿರ ವಾಹನಗಳು ಓಡಾಡುತ್ತವೆ. ಆದ್ದರಿಂದ ಸರಿಯಾಗಿ ವಿನ್ಯಾಸ ಮಾಡಿ ದೊಡ್ಡ ವೃತ್ತ ನಿರ್ಮಿಸಿ ’ ಎಂದು ಶಾಸಕ ಎಂ.ಚಂದ್ರಪ್ಪ ಸಲಹೆ ನೀಡಿದರು.
ಕ್ಲಿಕ್ ಮಾಡಿ ಓದಿ: ಹಜ್ ಯಾತ್ರೆಗೆ ತೆರಳಿದ್ದ ಮಹಿಳೆ ಸಾವು | ಮೆಕ್ಕಾದಲ್ಲಿ ಅಂತ್ಯಸಂಸ್ಕಾರ
ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ(ಪಪ್ಪಿ), ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಓ ಎಸ್.ಜೆ.ಸೋಮಶೇಖರ್, ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
