
CHITRADURGA NEWS | 29 OCTOBER 2024
ಚಿತ್ರದುರ್ಗ: ದೀಪಾವಳಿ ಹಬ್ಬದ(Diwali festival) ಪ್ರಯುಕ್ತ ನಗರದ ಒನಕೆ ಓಬವ್ವ ವೃತ್ತದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್ ಅವರು ಚಾಲನೆ ನೀಡಿದರು.
ಕ್ಲಿಕ್ ಮಾಡಿ ಓದಿ: ವಿಶೇಷಚೇತನರ ವಿವಾಹ | 50 ಸಾವಿರ ಪ್ರೋತ್ಸಾಹ ಧನದ ಬಾಂಡ್ ವಿತರಣೆ
ದೀಪ ಸಂಜೀವಿನಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಆರು ತಾಲ್ಲೂಕುಗಳಿಂದ ಬಂದಂತಹ ಸ್ವ ಸಹಾಯ ಗುಂಪಿನ ಮಹಿಳೆಯರು ತಮ್ಮ ಸ್ವಂತ ಪರಿಶ್ರಮ ಹಾಗೂ ಕರ ಕುಶಲತೆಯಿಂದ ತಯಾರಿಸಿದ ದೀಪಗಳು, ಮಣ್ಣಿನ ಹಣತೆ, ಕೊಬ್ಬರಿ ಎಣ್ಣೆ, ತಿಂಡಿ-ತಿನಿಸುಗಳು, ಕೈಕಸೂತಿ ಬಟ್ಟೆ, ಬ್ಯಾಗ್, ಗೊಂಬೆ ಹಾಗೂ ವಿವಿಧ ಬಗೆಯ ಉಪ್ಪಿನಕಾಯಿ ಮತ್ತು ರೊಟ್ಟಿಯ ಖಾದ್ಯಗಳು ಸೇರಿದಂತೆ ಸ್ವದೇಶಿ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಯಿತು.
ವಿಶೇಷವಾಗಿ ಹಲವು ರೀತಿಯಲ್ಲಿ ವಿನ್ಯಾಸ ಮಾಡಲಾಗಿದ್ದ ದೀಪಗಳು ನೋಡುಗರನ್ನು ಆಕರ್ಷಿಸಿದವು.
ಕ್ಲಿಕ್ ಮಾಡಿ ಓದಿ: Attempted suicide: ಅಂಬೇಡ್ಕರ್ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ | ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ ಮತ್ತಿತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
