
CHITRADURGA NEWS | 13 October 2025
ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ ಎಕ್ಸಾಮಿನೇಷನ್-2025 ಮೂಲಕ ಹೆಡ್ ಕಾನ್ಸಟೇಬಲ್ (ಅಸಿಸ್ಟೆಂಟ್ ವೈರ್‌ಲೆಸ್ ಆಪರೇಟರ್) (ಟೆಲಿ ಪ್ರಿಂಟರ್ ಆಪರೇಟರ್) ಕಾನ್ಸಟೇಬಲ್ (ಎಕ್ಸಿಟಿವ್)(ಡ್ರೈವರ್) ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 13 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿಯಲ್ಲಿ ವಿಜ್ಞಾನ ಹಾಗೂ ಗಣಿತ ಅಭ್ಯಾಸ ಮಾಡಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
18 ರಿಂದ 25 ವರ್ಷಗಳ ಒಳಗಿರಬೇಕು. ಎಸ್.ಸಿ. ಎಸ್.ಟಿ. ಓ.ಬಿ.ಸಿ. ಹಾಗೂ ಈ.ಡಬ್ಲೂö್ಯ.ಎಂ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇದೆ. ಡಿಸೆಂಬರ್-2025 ಅಥವಾ ಜನವರಿ-2026ರಲ್ಲಿ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕಡೆಯ ದಿನವಾಗಿದೆ.
ಇದನ್ನೂ ಓದಿ: RSS@100 | ಕೋಟೆನಾಡಲ್ಲಿ ಆಕರ್ಷಕ ಪಥ ಸಂಚಲನ
ಹೆಚ್ಚಿನ ಮಾಹಿತಿಗಾಗಿ http://www.ssckkr.kar.nic.in/https://ssc.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 080-25502520 ಕರೆ ಮಾಡಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಖ್ಯೆಗಳಾದ 9945587060, 7019755147 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
