
CHITRADURGA NEWS | 25 AUGUST 2025
ಚಿತ್ರದುರ್ಗ: ಪರಿಶಿಷ್ಟರ ಪಟ್ಟಿಯಲ್ಲಿರುವ ಅಲೆಮಾರಿ ಜನಾಂಗದ 59 ಜಾತಿಗಳಿಗೆ ಪ್ರತ್ಯೇಕ ಶೇ.1 ರಷ್ಟು ಮೀಸಲಾತಿ ನೀಡುವಂತೆ ಸ್ಲಂ ಜನಾಂದೋಲನ-ಕರ್ನಾಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು
ದಿನಾಂಕ: 1 ಆಗಸ್ಟ್ 2024 ರಂದು ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಮಹತ್ವದ ತೀರ್ಪು ನೀಡಿತು. ತದನಂತರ ದತ್ತಾಂಶ ಸಂಗ್ರಹಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಗಮೋಹನ್‍ದಾಸ್ ಆಯೋಗ ರಚಿಸಿದರು.
ಆಯೋಗವು ಅಸ್ಪøಶ್ಯ, ಅಲೆಮಾರಿ ಜಾತಿ ಗುಂಪಿಗೆ ನೀಡಿದ್ದ ಪ್ರತ್ಯೇಕ ಶೇ.1 ರ ಮೀಸಲಾತಿ ಕಿತ್ತುಕೊಂಡು ಸ್ಪಶ್ಯ ಜಾತಿಗಳಾದ ಲಂಬಾಣಿ, ಭೋವಿ, ಕೊರಮ, ಕೊರಚ ಜಾತಿಗಳ ಗುಂಪಿಗೆ ನೀಡಿ ಸುಪ್ರಿಂಕೋರ್ಟ್ ಆದೇಶ ಉಲ್ಲಂಘಿಸಿದೆ. ಆದ್ದರಿಂದ ಅಲೆಮಾರಿ ಸಮುದಾಯಗಳಿಗೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಿ ಪ್ರತ್ಯೇಕ ಒಂದರಷ್ಟು ಮೀಸಲಾತಿಯನ್ನು ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದನ್ನೂ ಓದಿ: ಸಿರಿಯಜ್ಜಿ ಸ್ಮಾರಕ ಲೋಕಾರ್ಪಣೆ | ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಆಗ್ರಹ
ಮಂಜಣ್ಣ, ಸುಧಾ ಮಹೇಶ್, ಭಾಗ್ಯಮ್ಮ, ಅಲೆಮಾರಿ ಸಮುದಾಯದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
