CHITRADURGA NEWS | 05 OCTOBER 2025
ಚಿತ್ರದುರ್ಗ: ಸಮಾಜದಲ್ಲಿ ನಿಕೃಷ್ಟವಾಗಿ ಬದುಕುತ್ತಿರುವ ಅಲೆಮಾರಿ ಮತ್ತು ಅರೆಅಲೆಮಾರಿಗಳಿಗೆ ನಾಗಮೋಹನ್ದಾಸ್ ಆಯೋಗದ ವರದಿಯಂತೆ ರಾಜ್ಯ ಸರ್ಕಾರ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಯನ್ನು ನೀಡಬೇಕೆಂದು ಭ್ರಷ್ಟಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗಾ ಒತ್ತಾಯಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಹೊಸ ಅಡಿಕೆಗೂ ಬಂಪರ್ ಬೆಲೆ | ರೈತರ ಮೊಗದಲ್ಲಿ ಮಂದಹಾಸ
ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಸ್ತೆ ಬದಿಯ ಟೆಂಟ್ಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಮತ್ತು ಅರೆಅಲೆಮಾರಿಗಳು ಶೇ.1 ರಷ್ಟು ಮೀಸಲಾತಿಗಾಗಿ ನವದೆಹಲಿಯ ಜಂತರ್ ಮಂತರ್ನಲ್ಲಿ ಎರಡು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಧ್ವನಿಯಿಲ್ಲದ ಈ ಸಮುದಾಯವನ್ನು ರಾಜ್ಯ ಸರ್ಕಾರ ಕಡೆಗಣಿಸಬಾರದು.
ರಾಜಕೀಯವಾಗಿ ಯಾರು ನಾಯಕರುಗಳಿಲ್ಲ. ಶಿಕ್ಷಣ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಅತ್ಯಂತ ಹಿಂದುಳಿದಿರುವ ಈ ಸಮುದಾಯಕ್ಕೆ ಶೇ.1 ಪ್ರತ್ಯೇಕ ಮೀಸಲಾತಿಯನ್ನು ನೀಡಬೇಕೆಂದರು.
ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್ಕುಮಾರ್ ಮಾತನಾಡಿ ಅಲೆಮಾರಿ ಅರೆಅಲೆಮಾರಿ ಸಮುದಾಯಗಳು ಶೇ.1 ರಷ್ಟು ಮೀಸಲಾತಿಯನ್ನು ನೀಡುವಂತೆ ಎರಡು ದಿನಗಳಿಂದಲೂ ದೆಹಲಿಯಲ್ಲಿ ಹೋರಾಟ ನಡೆಸುತ್ತಿದೆ.
ಬುಡುಗ ಜಂಗಮ, ಸುಡುಗಾಡು ಸಿದ್ದರು, ಚನ್ನದಾಸ, ಹಂದಿಜೋಗಿ, ಸಿಳ್ಳೆಕ್ಯಾತ, ಸಿಂದೋಳಿ, ಮಾಲಾದಾಸರು ಹೀಗೆ ಹಲವು ಹೆಸರುಗಳಿಂದ ಕರೆಸಿಕೊಳ್ಳುವ ಅಲೆಮಾರಿ ಮತ್ತು ಅರೆಅಲೆಮಾರಿಗಳು ಯಾವುದೇ ಸೌಲಭ್ಯಗಳಿಲ್ಲದೆ ಟೆಂಟ್ಗಳಲ್ಲಿ ವಾಸಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇವರುಗಳನ್ನು ನಿರ್ಲಕ್ಷಿಸಬಾರದೆಂದು ಆಗ್ರಹಿಸಿದರು.
ಇದನ್ನೂ ಓದಿ: ಟೇಕ್ವಾಂಡೋ ಸ್ಪರ್ಧೆ | ಮುರಳಿಗೆ ಚಿನ್ನದ ಪದಕ | ರಾಷ್ಟ್ರ ಮಟ್ಟಕ್ಕೆ ಆಯ್ಕೆ
ನ್ಯಾಯವಾದಿ ಪ್ರತಾಪ್ಜೋಗಿ ಮಾತನಾಡುತ್ತ ಅಲೆಮಾರಿ ಮತ್ತು ಅರೆಅಲೆಮಾರಿಗಳು ರಾಹುಲ್ಗಾಂಧಿಗೆ ಹದಿನೈದು ಸಾವಿರ ಪತ್ರಗಳನ್ನು ಬರೆದು ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಮನವಿ ಮಾಡಿದ್ದಾರೆ. ಸರ್ಕಾರದ ಎಲ್ಲಾ ರೀತಿಯ ಸೌಲಭ್ಯಗಳಿಂದ ವಂಚಿತರಾಗಿರುವ ಈ ಜನಾಂಗಕ್ಕೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಯನ್ನು ರಾಜ್ಯ ಸರ್ಕಾರ ಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.
ಅಲೆಮಾರಿ ಮತ್ತು ಅರೆಅಲೆಮಾರಿ ಸಮಾಜದ ನಾಗರಾಜ್ ಮಾತನಾಡಿ ಟೆಂಟ್ಗಳಿಂದ ದೆಹಲಿವರೆಗೂ ಹೋಗಿರುವ ಈ ಜನಾಂಗ ಶೇ.1 ಪ್ರತ್ಯೇಕ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿರುವ ಈ ಸಮುದಾಯಕ್ಕೆ ಒಳ ಮೀಸಲಾತಿಯಿಂದ ಯಾವ ಪ್ರಯೋಜನವೂ ಆಗಿಲ್ಲ. ರಾಜ್ಯ ಸರ್ಕಾರ ಕೂಡಲೆ ಒಂದು ಪರ್ಸೆಂಟ್ ಮೀಸಲಾತಿ ಕೊಡಬೇಕೆಂದರು.
ಸುಧಾಕರ್, ಮಹೇಶ್ ಪತ್ರಿಕಾಗೋಷ್ಠಿಯಲ್ಲಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

