CHITRADURGA NEWS | 22 SEPTEMBER 2026
ಚಿತ್ರದುರ್ಗ: ಬಗರ್ಹುಕುಂ ಸಾಗುವಳಿದಾರರಿಗೆ ಒನ್ಟೈಮ್ ಸೆಟ್ಲ್ಮೆಂಟ್ ಮೂಲಕ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಕೊತ್ತಂಬರಿ ನೀರು ಕೂದಲಿಗೆ ಎಷ್ಟು ಪ್ರಯೋಜನಕಾರಿ ಗೊತ್ತಾ?
ಜಿಲ್ಲೆಯಲ್ಲಿ ಬಗರ್ಹುಕುಂ ಸಾಗುವಳಿ ಮಾಡುತ್ತಿರುವ ಬಡ ಕುಟುಂಬಗಳು ಫಾರಂ ನಂ.50, 53 ಹಾಗೂ 57ರಲ್ಲಿ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಹಲವು ವರ್ಷಗಳಿಂದ ಭೂಮಿಗಾಗಿ ಕಾಯುತ್ತಿವೆ. ಸಮಿತಿಯು ಹಲವು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಇದುವರೆಗೆ ಆಳಿದ ಸರ್ಕಾರಗಳು ಸಮಸ್ಯೆ ಪರಿಹರಿಸದೆ ಕಾಲಹರಣ ಮಾಡುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಭೂ ಮಂಜೂರಾತಿ ಸಮಿತಿಗಳನ್ನು ರಚಿಸಲಾಗಿದ್ದರೂ ಕಾಲಕಾಲಕ್ಕೆ ಸಭೆಗಳು ನಡೆಯದ ಕಾರಣ ಬಗರ್ಹುಕುಂ ಸಾಗುವಳಿದಾರರ ಸಮಸ್ಯೆಗಳು ಬಗೆಹರಿದಿಲ್ಲ. ಕೂಡಲೇ ಅರ್ಹ ಬಗರ್ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಇಲ್ಲದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಸಂಚಾಲಕ ಕುಮಾರ್ ಸಮತಳ ಮಾತನಾಡಿ, ಅರಣ್ಯ ಹಾಗೂ ಕಂದಾಯ ಭೂಮಿಗಳ ಜಂಟಿ ಸರ್ವೆ ನಡೆಸಬೇಕು. ಭೂ ಮಂಜೂರಾತಿ ಆಗಿ ಸಾಗುವಳಿ ಚೀಟಿ ಪಡೆದಿರುವವರಿಗೆ ಪಹಣಿ ವಿತರಿಸಬೇಕು. ನಿವೇಶನ ಹಾಗೂ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವ ಅರ್ಹ ಬಗರ್ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಚಂದ್ರವಳ್ಳಿ, ತಿಮ್ಮಣ್ಣನಾಯಕನ ಕೆರೆಗೆ ಭದ್ರಾ ನೀರು ಹರಿಸಲು ಆಗ್ರಹ
ಸಮಿತಿಯ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ, ಹನುಮಂತಣ್ಣ ಗೋನೂರು, ಡಿಎಸ್ಎಸ್ ಮುಖಂಡ ಬಿ. ರಾಜಣ್ಣ, ಕರಿಯಪ್ಪ ಈಚಘಟ್ಟ, ಪುರುಷೋತ್ತಮ್, ಅಂಜಿನಪ್ಪ, ನೀಲಮ್ಮ, ಅಕ್ಕಮ್ಮ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

